ಕುಡಿವ ನೀರು, ಮೇವು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ


Team Udayavani, Jun 24, 2023, 2:29 PM IST

ಕುಡಿವ ನೀರು, ಮೇವು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ

ಮೈಸೂರು: ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆ, ಮೇವು ಲಭ್ಯತೆ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ತಮ್ಮ ಕಚೇರಿ ಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವರ್ಚುವಲ್‌ ಸಭೆಯಲ್ಲಿ ಮಾತನಾಡಿದರು.

ಜಂಟಿಯಾಗಿ ಪರಿಶೀಲಿಸಿ: ಕುಡಿಯುವ ನೀರು ಪೂರೈಕೆ ಹಾಗೂ ಮೇವು ಪೂರೈಕೆ ಸಂಬಂಧ ತಾಲೂಕು ಮಟ್ಟದಲ್ಲಿ ಪ್ರತಿ ಶನಿವಾರ ಟಾಸ್ಕ್ಫೋರ್ಸ್‌ ಸಮಿತಿ ಸಭೆಯನ್ನು ನಡೆಸಬೇಕು. ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಕುರಿತು ತಹಸೀಲ್ದಾರ್‌, ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿ ಯರ್‌ಗಳು ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿರಬೇಕು. ಮಳೆಯಿಂದ ಮನೆಗಳ ಹಾನಿ ಕುರಿತು ಪರಿಹಾರ ವಿತರಣೆ ಸಂಬಂಧ ಗ್ರಾಮ ಆಡಳಿತಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳು ಜಂಟಿಯಾಗಿ ಪರಿಶೀಲಿಸಿ ಛಾಯಾಚಿತ್ರದೊಂದಿಗೆ ವರದಿ ನೀಡಬೇಕು ಎಂದರು.

ನೀರಿನ ಕಟ್ಟೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಿ: ಜಿಪಂ ಸಿಇಒ ಕೆ.ಎಂ ಗಾಯತ್ರಿ ಮಾತನಾಡಿ, ಬೋರ್ವೆಲ್‌ಗಳ ದುರಸ್ತಿ, ಕಲುಷಿತ ನೀರು ಪೂರೈಕೆಯಾಗದಂತೆ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಕಟ್ಟೆ ನಿರ್ಮಾಣ ಮಾಡಲು ಕ್ರಮ ವಹಿಸಬೇಕೆಂದು ತಿಳಿಸಿದರು.

ಅಧಿಕಾರಿಗಳು ಸಂಪೂರ್ಣ ಮಾಹಿತಿ ಪಡೆಯಿರಿ: ಬದಲಿ ಮೋಟಾರ್‌ ವ್ಯವಸ್ಥೆ, ಹೊಸ ಬೋರ್ವೆಲ್‌ ವಿಫ‌ಲವಾದಲ್ಲಿ ಭೂ ವಿಜ್ಞಾನಿ ಗಳಿಂದ ತಪಾಸಣೆ ನಡೆಸಿ ಹೊಸ ಬೋರ್ವೆಲ್‌ ಕೊರೆಯಲು ಕ್ರಮ ಕೈಗೊಳ್ಳಬೇಕು. ಶಾಲೆ, ಅಂಗನವಾಡಿ, ಹಾಸ್ಟೆಲ್‌ಗಳಲ್ಲಿ ಸಮರ್ಪಕ ಕುಡಿಯುವ ನೀರು ಲಭ್ಯತೆ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಖಾಸಗಿ ಬೋರ್ವೆಲ್‌ಗಳನ್ನು ಬಾಡಿಗೆಗೆ ಪಡೆಯುವ ಸಂಬಂಧ ಖಾಸಗಿ ಬೋರ್ವೆಲ್‌ಗ‌ಳ ಲಭ್ಯತೆ ಬಗ್ಗೆ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನು ಪಡೆಯಬೇಕು ಎಂದರು.

ನೀರಿನ ಗುಣಮಟ್ಟದ ಬಗ್ಗೆ ಪರಿಶೀಲಿಸಿ: ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿ ಯರ್‌ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ನಿರಂತರವಾಗಿ ಪರಿಶೀಲಿಸಬೇಕು. ನೀರಿನ ಮೂಲಗಳ ಬಗ್ಗೆ ಅವರಲ್ಲಿ ಮಾಹಿತಿ ಇರಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಿದರೆ ಇದರ ಬಗ್ಗೆ ಪ್ರತಿ ದಿನ ಜಿಲ್ಲಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಬೇಕು. ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧ ಮುಂದಿನ ಒಂದು ತಿಂಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಸಲ್ಲಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ತಿಳಿಸಲಾಯಿತು.

ಟಾಪ್ ನ್ಯೂಸ್

NZ-ENg

England vs Newzeland Test: ನ್ಯೂಜಿಲ್ಯಾಂಡ್‌ ಹಿಡಿತದಲ್ಲಿ ಹ್ಯಾಮಿಲ್ಟನ್‌ ಟೆಸ್ಟ್‌

Womens-Cri

Womens T20 Cricket: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಗೆಲುವು

syaad-Ali-mub

Ali Trophy: ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ

Lokasabha-MP-Cri

Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ

Okkaliga-Swamiji

Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

MNG-Zakir

Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

2-hunsur

Hunsur: ಟ್ರ್ಯಾಕ್ಟರ್‌ ಚಾಲಕರ ಪೈಪೋಟಿಗೆ ಬೈಕ್ ಸವಾರ ಬಲಿ; 15 ದಿನಗಳ ಅಂತರದಲ್ಲಿ 2ನೇ ಅಪಘಾತ

Hunasur: ಗೊಮ್ಮಟಗಿರಿಯಲ್ಲಿ ಮೂರು ದಿನಗಳ ಕಾಲ ಬಾಹುಬಲಿ ಮಸ್ತಕಾಭಿಷೇಕ

Hunasur: ಗೊಮ್ಮಟಗಿರಿಯಲ್ಲಿ ಮೂರು ದಿನಗಳ ಕಾಲ ಬಾಹುಬಲಿ ಮಸ್ತಕಾಭಿಷೇಕ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

NZ-ENg

England vs Newzeland Test: ನ್ಯೂಜಿಲ್ಯಾಂಡ್‌ ಹಿಡಿತದಲ್ಲಿ ಹ್ಯಾಮಿಲ್ಟನ್‌ ಟೆಸ್ಟ್‌

Womens-Cri

Womens T20 Cricket: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಗೆಲುವು

syaad-Ali-mub

Ali Trophy: ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ

Lokasabha-MP-Cri

Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ

Okkaliga-Swamiji

Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.