ಪಿರಿಯಾಪಟ್ಟಣ: ಮನೆಗಳ ಹಂಚಿಕೆಯಲ್ಲಿ ಲೋಪ, ಪುನರ್ ಪರಿಶೀಲನೆಗೆ ಆದೇಶ: ಜಿಲ್ಲಾಧಿಕಾರಿ ಡಾ.ರಾಜೇಂದ್ರ
Team Udayavani, Dec 18, 2022, 10:27 AM IST
ಪಿರಿಯಾಪಟ್ಟಣ: ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಉತ್ತರವಾದಾಗ ಮಾತ್ರ ಕಾರ್ಯಕ್ರಮದ ಉದ್ದೇಶ ಸಾರ್ಥಕವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದರು.
ತಾಲೂಕಿನ ಮಾಕೋಡು ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಧಿಕಾರಿಗಳು ಸಮಾಧಾನ ಚಿತ್ತದಿಂದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.
ಈ ಬಾರಿ ತಾಲೂಕಿನಲ್ಲಿ ಅತಿಯಾದ ಮಳೆಯಿಂದ 1200 ಮನೆಗಳು ಹಾನಿಯಾಗಿವೆ ಎಂದು ಪರಿಹಾರಕ್ಕಾಗಿ ಅರ್ಜಿಗಳು ಬಂದಿದ್ದು, ಇವುಗಳಲ್ಲಿ ಅಧಿಕಾರಿಗಳು ಲೋಪ ಮಾಡಿ ಬೋಗಸ್ ಅರ್ಜಿಯನ್ನು ನೀಡಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಪುನರ್ ಪರಿಶೀಲನೆ ಮಾಡುವಂತೆ ಆದೇಶಿಸಿ ಪರಿಹಾರವನ್ನು ತಡೆ ಹಿಡಿಯಲಾಗಿದೆ. ಆದ್ದರಿಂದ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮತ್ತೊಮ್ಮೆ ನೈಜ್ಯ ಫಲಾನುಭವಿಗಳನ್ನು ಗುರುತಿಸುವಂತೆ ಸೂಚಿಸಲಾಗಿದೆ. ಈ ದಿನ ನಡೆಯುತ್ತಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ 125 ಅರ್ಜಿಗಳು ಬಂದಿದ್ದು, ಅರ್ಜಿಗಳನ್ನು ಪರಿಶೀಲಿಸಿ ನನ್ನ ವ್ಯಾಪ್ತಿಯಲ್ಲಿ ಇರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುತ್ತೇನೆ. ಗ್ರಾಮಗಳಲ್ಲಿ ಸರ್ವೆ ಪಹಣಿ ಲೋಪ, ಮೋಜಣಿ, ಬರ, ಪ್ರವಾಹ ಪರಿಸ್ಥಿತಿ, ಪರಿಹಾರ ಸೇರಿದಂತೆ ಇತರ ಸಮಸ್ಯೆಗಳ ಬಗ್ಗೆ ಅರ್ಜಿ ಸಲ್ಲಿಸ ಬಯಸುವವರು ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಮಹದೇವ್ ಮಾತನಾಡಿ, ತಾಲೂಕಿನಲ್ಲಿ ಇದು 13 ನೇ ಕಾರ್ಯಕ್ರಮ, ಇಲ್ಲಿಯವರೆಗೂ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ 2 ಸಾವಿರ ಅರ್ಜಿಗಳು ಬಂದಿದ್ದು ಅವುಗಳಲ್ಲಿ ಕೆಲವು ತೀಕ್ಷ್ಣ ಸಮಸ್ಯೆಗಳು ಎಂದು ಕಂಡು ಬಂದಾಗ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ ಅಲ್ಲದೆ ವಿವಿಧ ಯೋಜನೆಗಳ ಅಡಿಯಲ್ಲಿ 3 ಸಾವಿರ ಫಲಾನುಭವಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ರಸ್ತೆ ಅಭಿವೃದ್ಧಿ, ಜಮೀನಿನ ಸರ್ವೆ, ದೇವಸ್ಥಾನಗಳ ಜೀರ್ಣೋದ್ಧಾರ, ವಿದ್ಯುತ್ ಸಮಸ್ಯೆ, ಗ್ರಂಥಾಲಯ, ಕೆರೆ ಒತ್ತುವರಿ ತೆರವು, ಸರ್ಕಾರಿ ಜಾಗದ ಒತ್ತುವರಿ, ವಿಕಲ ಚೇತನರಿಗೆ ಸೌಲಭ್ಯ ಕಲ್ಪಿಸುವಂತೆ ಅರ್ಜಿ, ಚಿಕಿತ್ಸಾ ವೆಚ್ಚವನ್ನು ಭರಿಸಲು ಮನವಿ, ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ, ಜಮೀನಿನ ಪೋಡು ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಬಗೆಯರಿಸುವಂತೆ ಜಿಲ್ಲಾಧಿಕಾರಿಗಳಿಗಘ ದೂರು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ರುಚಿ ಜಿಂದಾಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಪ್ರೇಮ ಕುಮಾರ್, ಕೃಷಿ ಇಲಾಖೆ ಜೆಂಟಿ ನಿರ್ದೇಶಕ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರುದ್ರೇಶ್, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಮುನಿರಾಜ್, ಗ್ರಾಪಂ ಅಧ್ಯಕ್ಷ ರಮೇಶ್, ಉಪಾಧ್ಯಕ್ಷ ಹೇಮಾ, ತಹಶೀಲ್ದಾರ್ ಚಂದ್ರಮೌಳಿ, ತಾಪಂ ಇಓ ಕೃಷ್ಣ ಕುಮಾರ್, ಡಿಹೆಚ್ಒ ಡಾ.ಪ್ರಸಾದ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.