ಕೆಲಸ ಇಲ್ಲದ ಬಿಜೆಪಿಯವರಿಂದ ಸಿದ್ದರಾಮಯ್ಯ ಹೆಸರಲ್ಲಿ ನನ್ನ ವಿರುದ್ಧ ನಕಲಿ ಪತ್ರ: ಡಿಕೆಶಿ
Team Udayavani, May 9, 2023, 1:14 PM IST
ಬೆಂಗಳೂರು: ಬಿಜೆಪಿ ಅವರಿಗೆ ಮಾಡಲು ಕೆಲಸ ಇಲ್ಲ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸಿದ್ದರಾಮಯ್ಯ ಅವರ ಹೆಸರಲ್ಲಿ ನನ್ನ ವಿರುದ್ಧ ಪತ್ರ ಬರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇಲ್ಲಿನ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳು ಈ ನಕಲಿ ಪತ್ರದ ಬಗ್ಗೆ ಪ್ರಶ್ನಿಸಿದಾಗ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಯಾಕೆ ಪತ್ರ ಬರೆಯುತ್ತಾರೆ? ಅವರು ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಮೊನ್ನೆಯಷ್ಟೇ ನಾವಿಬ್ಬರೂ ಸೇರಿ ಅಭಿಪ್ರಾಯ ಹಂಚಿಕೊಂಡಿದ್ದೇವೆ. ಈಗಲೂ ನಾವು ಮಾಡುತ್ತಿದ್ದೇವೆ. ಅವರಿಗೆ ಜನರ ಬಳಿ ಪ್ರಚಾರಕ್ಕೆ ಸಮಯ ಸಿಗುತ್ತಿಲ್ಲ. ಇನ್ನು ಈ ರೀತಿ ದೂರಲು ಎಲ್ಲಿ ಸಾಧ್ಯ? ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ. ಹೀಗಾಗಿ ಅವರ ಹೆಸರಲ್ಲಿ ನಕಲಿ ಪತ್ರ ಬರೆದು ಹಂಚುತ್ತಿದ್ದಾರೆ ಎಂದರು.
ಬಿಜೆಪಿಯಲ್ಲಿರುವ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ರೀತಿ ಪ್ರಯತ್ನ ಮಾಡುತ್ತಿದ್ದಾರೆ. ಮೋದಿ ಅವರು ಬಂದು ಬೀದಿ ಬೀದಿ ಅಳೆದಾಡಿದರು. ಮೋದಿ ಅವರು ಬಂದು ರೋಡ್ ಶೋ ಮಾಡಿದರು. ಅವರ ಜತೆ ಒಬ್ಬ ರಾಜ್ಯ ನಾಯಕನೂ ಇರಲಿಲ್ಲ. ಕನಿಷ್ಠ ಪಕ್ಷ ಆಯಾ ಕ್ಷೇತ್ರದ ಅಭ್ಯರ್ಥಿಯನ್ನಾದರೂ ಜತೆಯಲ್ಲಿ ಇಟ್ಟುಕೊಂಡು ರೋಡ್ ಶೋ ಮಾಡಬಾರದೇ? ಬೇರೆ ಯಾವುದೇ ನಾಯಕರು ಬೆಳೆಯಬಾರದೇ? ನೂತನ ಸಂಸತ್ ಭವನಕ್ಕೂ ಒಬ್ಬರೇ ಹೋಗುತ್ತಾರೆ. ರಾಮ ಮಂದಿರ ಪೂಜೆಗೂ ಒಬ್ಬರೇ ಕೂರುತ್ತಾರೆ. ಮತ ಕೆಳುವಾಗಲೂ ಒಬ್ಬರೇ ಮಾಡುತ್ತಾರೆ. ನಾಯಕನಾದವ ನಾಯಕರನ್ನು ಸೃಷ್ಟಿ ಮಾಡಬೇಕು. ಈ ಸಮಯದಲ್ಲಿ ಅವರ ನಾಯಕರ ಶಕ್ತಿಯನ್ನು ಅವರೇ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ. ಇದು ಅಚ್ಚರಿ ತಂದಿದೆ. ಸೋಲುವ ಭೀತಿಯಿಂದ ಇಷ್ಟು ಅಬ್ಬರದ ಪ್ರಚಾರ ಮಾಡಿದ್ದಾರೆ. ಇವರು ಎಷ್ಟೇ ಅಬ್ಬರದ ಪ್ರಚಾರ ಮಾಡಿದರೂ ರಾಜ್ಯದ ಜನ ಕೇಳುವುದಿಲ್ಲ. ಜನರಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಹಾಗೂ ದಕ್ಷ ಆಡಳಿತ, ರಾಜ್ಯದ ಅಭಿವೃದ್ಧಿ ಬೇಕಾಗಿದೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Mysore: ಮೊಬೈಲ್ ಜೂಜಾಟ; ನಾಲ್ವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.