ಮದ್ಯದಂಗಡಿಗೆ ಅವಕಾಶ ನೀಡಬಾರದು: ಮಂಜುನಾಥ್
Team Udayavani, Jun 14, 2017, 1:10 PM IST
ಪಿರಿಯಾಪಟ್ಟಣ: ತಾಲೂಕಿನ ಕಿತ್ತೂರು ಗ್ರಾಮದ ಮಧ್ಯಭಾಗದಲ್ಲಿ ಎಂಎಸ್‌ಐಎಲ್ ನಿಂದ ಮದ್ಯ ಮಾರಾಟದ ಅಂಗಡಿಗೆ ಅವಕಾಶ ಮಾಡಿಕೊಡುತ್ತಿದ್ದು, ಇದು ಸರಿಯಲ್ಲ ಎಂದು ಜಿಪಂ ಸದಸ್ಯ ಕೆ.ಎಸ್.ಮಂಜುನಾಥ್ ಸೇರಿದಂತೆ ಧರ್ಮಸ್ಥಳ ಮಹಿಳಾ ಸಂಘ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ಗ್ರಾಮಸ್ಥರು ವಿರೋಧಿಸಿದ್ದಾರೆ.
ತಾಲೂಕಿನ ಕಿತ್ತೂರು ಗ್ರಾಮವು ಸುಮಾರು 20ಕ್ಕೂ ಹೆಚ್ಚು ಸುತ್ತಮುತ್ತಲ ಕೊಪ್ಪಲು ಹಾಗೂ ಗ್ರಾಮಗಳ ಜನರು ಪ್ರತಿದಿನವೂ ಜಮಾಯಿಸಿ ಅಪಾರ ವ್ಯವಹಾರದ ವಹಿವಾಟನ್ನು ನಡೆಸುವ ಸ್ಥಳವಾಗಿದೆ. ಅಷ್ಟೆ ಅಲ್ಲದೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಉದ್ದೇಶಿಸಿರುವ ಮಳಿಗೆಯ ಪಕ್ಕದಲ್ಲಿ ವಾಸದ ಮನೆಗಳು ಮತ್ತು ಶಾಲಾ ಮಕ್ಕಳು ಓಡಾಡುವ ರಸ್ತೆ,
ಮತ್ತು ಸಾರ್ವಜನಿಕ ಗ್ರಂಥಾಲಯ, ಶ್ರೀ ವೀರಭದ್ರಸ್ವಾಮಿ ದೇವಾಲಯ, ಆಸ್ಪತ್ರೆ, ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಕಟ್ಟಡ, ಶಾಲಾ ಕಾಲೇಜು, ರಾಷ್ಟ್ರೀಕೃತ ಬ್ಯಾಂಕುಗಳಿವೆ. ಇವುಗಳ ಮಧ್ಯಭಾಗದಲ್ಲಿ ಎಂಎಸ್‌ಐಎಲ್ ವತಿಯಿಂದ ಮದ್ಯಮಾರಾಟ ಅಂಗಡಿ ತೆರೆಯಲು ಅವಕಾಶ ಮಾಡಿಕೊಡುತ್ತಿರುವುದು ಸರಿಯಲ್ಲ,
ಸ್ಥಳಿಯರೇ ಆದ ಶಾಸಕ ಕೆ.ವೆಂಕಟೇಶ್ ಇತ್ತ ಗಮನ ಹರಿಸಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಧರ್ಮಸ್ಥಳ ಮಹಿಳಾ ಸಂಘ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಮತ್ತು ಗ್ರಾಪಂ ಸದಸ್ಯೆ ಹೇಮಾ, ಗ್ರಾಮದ ಮುಖಂಡ ನಾಗರಾಜು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಒಂದು ವೇಳೆ ಅವಕಾಶ ನೀಡಿದರೆ ಗ್ರಾಮಸ್ಥರೆಲ್ಲ ಸೇರಿ ತಾಲೂಕು ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.