ವೈದ್ಯರ ಶಿಫಾರಸ್ಸಿಲ್ಲದೇ ಔಷಧ ವಿತರಿಸಬೇಡಿ
Team Udayavani, Jun 20, 2019, 3:00 AM IST
ಹುಣಸೂರು: ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಗರದ ಔಷಧ ವ್ಯಾಪಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಪಟ್ಟಣ ಠಾಣೆ ಪಿಎಸ್‌ಐ ಮಹೇಶ್ ಮನವಿ ಮಾಡಿದರು. ನಗರ ಠಾಣೆ ವತಿಯಿಂದ ತಾಲೂಕು ಔಷಧ ವ್ಯಾಪಾರಿಗಳಿಗಾಗಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಹುಣಸೂರು ನಗರ ವ್ಯಾಪ್ತಿಯಲ್ಲಿ ನಗರದಲ್ಲಿ ಯಾವುದೇ ರೀತಿಯ ಮಾದಕ ವಸ್ತುಗಳು ಪತ್ತೆಯಾಗಿಲ್ಲ.
ಆದರೂ ಯುವಕರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆಂಬ ಅನುಮಾನ ನಾಗರಿಕರಿಂದ ವ್ಯಕ್ತವಾಗಿದೆ. ಕೆಲವೊಂದು ಔಷಧ ವ್ಯಾಪಾರಿಗಳು ಮತ್ತು ಬರಿಸುವ, ಮಾನಸಿಕ ಸ್ಥಿತಿಯನ್ನು ಕದಡುವ ಕೆಲ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದಾರೆಂಬ ಬಗ್ಗೆ ವದಂತಿ ಹರಡಿದ್ದು, ಈ ಹಿನ್ನೆಲೆಯಲ್ಲಿ ಔಷಧ ವ್ಯಾಪಾರಿಗಳ ಸಭೆ ಆಯೋಜಿಸಲಾಗಿದೆ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಮಾರಾಟಗಾರರ ಪಾತ್ರವೂ ಬಹುಮುಖ್ಯವಾದುದು ಎಂದರು.
ಮಾದಕ ವ್ಯಸನಕ್ಕೆ ದಾಸನಾದ ವ್ಯಕ್ತಿ ತನ್ನ ಕುಟುಂಬ, ಸಂಬಂಧ ಮತ್ತು ಸಮಾಜ ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೇ ಸಮಾಜಕ್ಕೆ ಶಾಪವಾಗುತ್ತಾನೆ. ಅವನ ಭವಿಷ್ಯವೂ ಹಾಳಾಗುತ್ತದೆ. ಗ್ರಾಹಕರು ನಿಮ್ಮನ್ನೂ ಒಂದು ರೀತಿಯಲ್ಲಿ ವೈದ್ಯರೆಂಬಂತೆ ಗೌರವಿಸುತ್ತಾರೆ.
ಹೀಗಾಗಿ ನೀವು ಕೇವಲ ವ್ಯಾಪಾರಿದೃಷ್ಟಿಯಲ್ಲಿ ವ್ಯವಹರಿಸದೇ ಸಾಮಾಜಿಕ ಆರೋಗ್ಯವನ್ನು ಕಾಪಾಡಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ವೈದ್ಯರ ಚೀಟಿ ಇಲ್ಲದೆ ಮಾತ್ರೆಗಳು ವಿತರಿಸಬಾರದು ಹಾಗೂ ಮತ್ತು ಬರುವಂತಹ, ನಿದ್ರೆಔಷಧವನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದೆಂದು ಸೂಚಿಸಿದರು.
ಸಂಘದ ಹಿರಿಯ ಸದಸ್ಯ ಮೂರ್ತಿ ಮಾತನಾಡಿ, ತಾಲೂಕಿನ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಂಘವೂ ಕೈಜೋಡಿಸಲಿದೆ. ಇಲಾಖೆಯ ಆಶಯದಂತೆ ನಾವು ಖಂಡಿತವಾಗಿ ನಡೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಸಭೆಯಲ್ಲಿ ಸಂಘದ ಕಾರ್ಯದರ್ಶಿ ನಾಗಭೂಷಣ್, ಸದಸ್ಯರಾದ ಭಾಗ್ಯಕುಮಾರ್, ಗುರು, ಮಾಧುರಾವ್, ಶಿವಕುಮಾರ್, ಪ್ರಸನ್ನ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.