ಸಿದ್ದರಾಮಯ್ಯರ ಆಮಿಷಕ್ಕೆ ಬಲಿಯಾಗಬೇಡಿ: ಎಚ್‌ಡಿಕೆ
Team Udayavani, Feb 25, 2018, 12:23 PM IST
ಮೈಸೂರು: ಮುಂಬರುವ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜನತೆ ಸಿದ್ದರಾಮಯ್ಯ ಒಡ್ಡುವ ಪಾಪದ ಹಣದ ಆಮಿಷಕ್ಕೆ ಬಲಿಯಾಗದೆ ಸ್ವಾಭಿಮಾನ ಕಾಪಾಡಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.
ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಶ್ರೀಚನ್ನಬಸವೇಶ್ವರ ದೇವಸ್ಥಾನ, ಶ್ರೀ ಸಿದ್ಧಪ್ಪಾಜಿ ದೇವಸ್ಥಾನದ ಪ್ರತಿಷ್ಠಾಪನೆ, ಕಾಳಿಕಾಂಬ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಾಮುಂಡೇಶ್ವರಿ ನನಗೆ ಜನ್ಮ ಕೊಟ್ಟ ಕ್ಷೇತ್ರ. ನಿಮ್ಮ ಋಣ ತೀರಿಸಲು ಮತ್ತೆ ಬರುತ್ತಿದ್ದೇನೆ. ನನ್ನನ್ನು ಉಳಿಸಿಕೊಳ್ಳುತ್ತೀರೋ ಇಲ್ಲವೋ ಎಂಬ ಸಿದ್ದರಾಮಯ್ಯ ಅವರ ಮಾತಿಗೆ ಕ್ಷೇತ್ರದ ಜನತೆ ಬೆಲೆ ಕೊಡಬೇಡಿ. ಜೆಡಿಎಸ್‌ನಲ್ಲಿದ್ದಾಗ ಏಳು ಬಾರಿ ಹಣಕಾಸು ಸಚಿವರಾಗಿ ಬಜೆಟ್ ಮಂಡಿಸಿ, ಉಪ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದಾಗ ಕ್ಷೇತ್ರದ ಹಳ್ಳಿಗಳಿಗೆ ಸೌಲಭ್ಯ ಕೊಡಲಾಗಲಿಲ್ಲ.
ಈಗ ಚುನಾವಣೆ ಹತ್ತಿರ ಬಂದಾಗ ಅವರ ಮಗ ಯತೀಂದ್ರಗೆ ಗುದ್ದಲಿ ಕೊಟ್ಟು ಕಳುಹಿಸುತ್ತಿದ್ದಾರೆ. ಕ್ಷೇತ್ರದ ಶಾಸಕರಾಗಿ ಜಿ.ಟಿ.ದೇವೇಗೌಡ ಇರುವಾಗ ಯತೀಂದ್ರಗೆ ಗುದ್ದಲಿ ಪೂಜೆ ಮಾಡಲು ಅಧಿಕಾರ ಕೊಟ್ಟರ್ಯಾರು ಎಂದು ಪ್ರಶ್ನಿಸಿದರು.
ಕೊಳ್ಳುವ ಮಾತು: ಮುಖ್ಯಮಂತ್ರಿಯಾಗಿ ಐದು ವರ್ಷ ಪೂರೈಸಿದ್ದೇನೆ. ಮುಂದೆಯೂ ನಾನೇ ಮುಖ್ಯಮಂತ್ರಿ ಅನ್ನುತ್ತಿದ್ದಾರೆ. ಹಣ ಕೊಟ್ಟು ಗೆಲ್ಲಬಹುದು ಎಂದುಕೊಂಡಿದ್ದಾರೆ. ಅದು ವಕೀಲಗಾರಿಕೆ ಮಾಡಿ ಗಳಿಸಿದ ಹಣವಲ್ಲ. ರಾಜಕೀಯವಾಗಿ ಬೆಳೆಸಿದ ಕ್ಷೇತ್ರದ ಜನರನ್ನೇ ಹಣ ಕೊಟ್ಟು ಕೊಳ್ಳುವ ಮಾತನಾಡುತ್ತಾರೆ.
ಇಲ್ಲಿನ ಮುಖಂಡರನ್ನು ರಾತ್ರಿ ವೇಳೆ ಕರೆಸಿಕೊಂಡು ಹಣದ ಆಮಿಷ ಒಡ್ಡುತ್ತಿದ್ದಾರೆ. ನಿಮ್ಮ ಪಾಪದ ಹಣ ಎಷ್ಟು ಕೋಟಿ ತಂದು ಸುರಿದರೂ ಇಲ್ಲಿ ಗೆಲ್ಲಲಾಗಲ್ಲ ಎಂಬುದನ್ನು ತಿಳಿದುಕೊಳ್ಳಿ. ಚಾಮುಂಡೇಶ್ವರಿ ಕ್ಷೇತ್ರ ರಾಜಕೀಯವಾಗಿ ಜನ್ಮ ಕೊಟ್ಟ ಕ್ಷೇತ್ರ ಭಾವನೆ ಅವರಿಗೆ ಇದ್ದಿದ್ದರೆ ಕ್ಷೇತ್ರವನ್ನು ಬಿಟ್ಟು ಹೋಗುತ್ತಿರಲಿಲ್ಲ ಎಂದರು.
ಅಧಿಕಾರ ಯಾರಿಗೂ ಶಾಶ್ವತವಲ್ಲ. ನಾನೂ 20 ತಿಂಗಳು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದೇನೆ. ಅವರಂತೆ ದೌಲತ್ತು, ದುರಂಹಕಾರದಿಂದ ಆಡಳಿತ ನಡೆಸಲಿಲ್ಲ. ರಾಜ್ಯದ ಜನರ ಮನೆ ಮಗನಾಗಿ ಆಡಳಿತ ನಡೆಸಿದ್ದೇನೆ. ಈ ಪಕ್ಷದಿಂದಲೇ ಬೆಳೆದು, ಈಗ ಜೆಡಿಎಸ್ ಎಲ್ಲಿ ಅಧಿಕಾರಕ್ಕೆ ಬರುತ್ತೆ ಎಂದು ದುರಂಹಕಾರದ ಮಾತನ್ನಾಡುತ್ತಾರೆ. ಜೆಡಿಎಸ್ ಮುಗಿಸಲು ಹೊರಟಿದ್ದಾರೆ.
ಎಚ್.ಡಿ.ದೇವೇಗೌಡರು, ಚಾಮುಂಡೇಶ್ವರಿ ಕ್ಷೇತ್ರದ ಜನ ಬೆಳೆಸಿದ್ದರಿಂದ ಅವರನ್ನು ಸೋನಿಯಾಗಾಂಧಿ ನೋಡುವಂತಾಯಿತು ಎಂಬುದನ್ನು ಅರ್ಥ ಮಾಡಿಕೊಳ್ಳಲಿ ಎಂದರು. ಮುಂಬರುವ ಚುನಾವಣೆಯಲ್ಲಿ ಜಾತೀ ಹೆಸರು ನೋಡಬೇಡಿ. ಜಿ.ಟಿ.ದೇವೇಗೌಡ ನೊಂದಿದ್ದಾರೆ. ಅವರಿಗೆ ಅನ್ಯಾಯ ಮಾಡಬೇಡಿ ಎಂದು ಮನವಿ ಮಾಡಿದರು.
ಈಗ ಮಗನಿಗೆ ಕ್ಷೇತ್ರ ಬಿಟ್ಟುಕೊಡಲು ಇಲ್ಲಿಗೆ ಬರುತ್ತಿದ್ದಾರೆ. ಇವರು ಮಾಡುವುದು ಅಪ್ಪ-ಮಕ್ಕಳ ರಾಜಕೀಯವಲ್ಲ. ದೇವೇಗೌಡರು ಅವರ ಮಕ್ಕಳು ಮಾಡಿದರೆ ಅಪ್ಪ-ಮಕ್ಕಳ ಪಕ್ಷ ಎನ್ನುತ್ತಾರೆ.
-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.