ಕಾವೇರಿ ನೀರು ಸರ್ವಹಣಾ ಮಂಡಳಿ ಬೇಡ
Team Udayavani, Apr 6, 2018, 12:49 PM IST
ಮೈಸೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿರುವ ತಮಿಳುನಾಡು ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆಂದು ಆಗ್ರಹಿಸಿ ಬಂದ್ ನಡೆಸುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ತಮಿಳುನಾಡು ಸರ್ಕಾರದ ಕ್ರಮ ಖಂಡನೀಯ. ತಮಿಳುನಾಡಿನ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿದರೆ, ರಾಜ್ಯದ ಜನತೆಗೆ ಮೋಸ ಮಾಡಿದಂತಾಗಲಿದೆ.
ಆದರಿಂದ ಕೇಂದ್ರ ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸೇನಾ ಪಡೆಯ ಅಧ್ಯಕ್ಷ ತೇಜೇಶ್ ಲೋಕೇಶ್‌ಗೌಡ, ಸುನೀಲ್ ಕುಮಾರ್, ಗುರುಮಲ್ಲಪ್ಪ, ತಿಪ್ಪಯ್ಯ, ಶಾಂತರಾಜ ಅರಸ್, ಹರೀಶ್, ನಂಜುಂಡಸ್ವಾಮಿ ಪಾಲ್ಗೊಂಡಿದ್ದರು.
ತಮಿಳುನಾಡು ಬಂದ್ ಖಂಡಿಸಿ ಪ್ರತಿಭಟನೆ
ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸಿ ತಮಿಳುನಾಡು ಬಂದ್‌ಗೆ ಕರೆ ನೀಡಿರುವುದನ್ನು ಖಂಡಿಸಿ, ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರ ಉದ್ಯಾನವನ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಭುವನೇಶ್ವರಿ ವೃತ್ತಕ್ಕೆ ತೆರಳಿ ತಮಿಳುನಾಡು ಸರ್ಕಾರ, ಅಲ್ಲಿನ ರಾಜಕೀಯ ಪಕ್ಷಗಳ ವಿರುದ್ದ ಧಿಕ್ಕಾರ ಕೂಗಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾ ಪಡೆಯ ರಾಜಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡು ಕಾವೇರಿ ನೀರು ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ.
ಅಲ್ಲದೆ, ಸುಪ್ರೀಂಕೋರ್ಟ್ ತೀರ್ಪಿಗೆ ಗೌರವ ನೀಡದೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ತಮಿಳುನಾಡು ಬಂದ್‌ಗೆ ಕರೆ ಕೊಟ್ಟಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಕರ್ನಾಟಕ ರಾಜಾದ್ಯಂತ ಒಂದು ತಿಂಗಳವರಗೆ ಪ್ರತಿಭಟನೆ ಹಮ್ಮಿಕೊಂಡು ತಮಿಳನಾಡಿಗೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸೇನಾ ಪಡೆಯ ಗೌರವ ಅಧ್ಯಕ್ಷ ಶಾ.ಮುರಳಿ ಮಾತನಾಡಿ, ತಮಿಳುನಾಡು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಬಂದ್‌ಗೆ ಕರೆ ನೀಡಿರುವುದು ನಾಚಿಗೇಡಿನ ಸಂಗತಿಯಾಗಿದೆ. ಕಾವೇರಿ ನೀರು ವಿಚಾರದಲ್ಲಿ ತಮಿಳುನಾಡು ಸರ್ಕಾರ ಬೀದಿಗಿಳಿದು ಪದೇಪದೇ ಕ್ಯಾತೆ ತೆಗೆಯುವ ಪರಿಪಾಠ ಬಿಡಬೇಕು.
ಇಲ್ಲದಿದ್ದರೆ, ಕನ್ನಡಿಗರು ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಕನ್ನಡ ಚಳವಳಿ ಮುಖಂಡರಾದ ಗು.ಪುರುಷೋತ್ತಮ, ಪಣ್ಯದಹುಂಡಿರಾಜು, ನಿಜದ್ವನಿ ಗೋವಿಂದರಾಜು, ಡಾ.ಶಿವರುದ್ರಸ್ವಾಮಿ, ನಟರಾಜು, ರಮೇಶ್‌ಕಾರ್ಮಿಕ್, ಮಿಠಾಯಿಲಿಂಗಣ್ಣ, ಸುರೇಶ್‌ನಾಗ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.