ಕಾಮಗಾರಿಗಳ ಲೋಕಾ ತನಿಖೆ ಬೇಡ


Team Udayavani, Apr 22, 2017, 12:36 PM IST

mys5.jpg

ಹುಣಸೂರು: ತಾಲೂಕಿನ ವಿವಿಧ ಗ್ರಾಪಂಗಳಲ್ಲಿ ಕಳೆದ 10 ವರ್ಷಗಳ ಹಿಂದೆ ಎನ್‌ಆರ್‌ಇಜಿ ಯೋಜನೆಯಡಿಯಲ್ಲಿ ಕೈಗೊಂಡಿದ್ದ ಕಾಮಗಾರಿಗಳನ್ನು ಲೋಕಾಯುಕ್ತ ತನಿಖೆಗೊಳ ಪಡಿಸಿರುವುದನ್ನು ಕೈಬಿಡಲು ಸರಕಾರದ ಮೇಲೆ ಒತ್ತಡ ಹಾಕಲು ತಾಲೂಕು ಪಿಡಿಒಗಳ ಸಂಘದಿಂದ ಶಾಸಕ ಎಚ್‌.ಪಿ. ಮಂಜುನಾಥ್‌ಗೆ ಮನವಿ ಸಲ್ಲಿಸಿದರು.

ನಗರದಲ್ಲಿ ಶಾಸಕರನ್ನು ಭೇಟಿ ಮಾಡಿದ ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಹಾಗೂ ತಾಲೂಕು ಪಿಡಿಒ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಉದ್ಯೋಗ ಖಾತರಿ ಯೋಜನೆಯ ನಿಯಮದಲ್ಲಿ ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಬೇಕಿದೆ, ಅಲ್ಲದೆ ಅಂದಿನ ಕಾಮಗಾರಿಯ ಯಾವ ಕುರುಹುಗಳೂ ಇರುವುದಿಲ್ಲ, ಹಿಂದೆ ಮೇಲಧಿಕಾರಿಗಳು ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿ, ಜನಪ್ರತಿನಿಧಿಗಳ ಸೂಚನೆಯಂತೆ ಹಾಗೂ ಗ್ರಾಮಸಭೆಗಳ ನಿರ್ಣಯದಂತೆ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು.

ಇದೀಗ ಯೋಜನೆ ಅನುಷ್ಠಾನದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಪಾತ್ರವಿಲ್ಲದಿದ್ದರೂ ಈ ತನಿಖೆ ಎಂಬುದು ವಿನಾಕಾರಣ ಕಿರುಕುಳ ನೀಡಿದಂತಾಗುತ್ತದೆ. ಇಂತಹ ನಿರ್ಣಯದಿಂದ ಮುಂದೆ ಉದ್ಯೋಗ ಖಾತರಿ ಯೋಜನೆ ಅನುಷ್ಠಾನಗೊಳಿಸುವುದು ಕಷ್ಟಕರವಾಗಲಿದ್ದು, ಅಭಿವೃದ್ಧಿ ಕುಂಠಿತವಾಗುತ್ತದೆ.

ಹಿಂದೆಯೇ ವಾರ್ಷಿಕ ನಿರ್ವಹಣೆಯ ಲೆಕ್ಕ ಪರಿಶೋಧನೆ ನಡೆಸಿದ್ದರೂ ಇದೀಗ ತನಿಖೆಗೊಳಪಡಿಸುವ ಆದೇಶಗಳು ಹಾಗೂ ಲೋಕಾಯುಕ್ತಕ್ಕೆ ವಹಿಸಿರುವುದು ದುರದೃಷ್ಟಕರ, ಹೀಗಾಗಿ ತನಿಖೆಗೆ ಆದೇಶ ನೀಡಿರುವುದನ್ನು ಸರಕಾರ ಹಿಂಪಡೆಯಬೇಕೆಂದು ಮುಖ್ಯಮಂತ್ರಿಗಳು ಹಾಗೂ ಗ್ರಾಮೀಣಾಭಿ ವೃದ್ಧಿ ಮಂತ್ರಿಗಳ ಮೇಲೆ ಒತ್ತಡ ಹಾಕಬೇಕೆಂದು ಹಾಗೂ ಎಂಎನ್‌ಆರ್‌ಇಜಿ ಯೋಜನೆಯಡಿಯಲ್ಲಿ ನಿಯಮಾನುಸಾರ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಶಾಸಕ ಮಂಜುನಾಥ್‌ ಮಾತನಾಡಿ, ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭಿವೃದ್ಧಿ ಅಧಿಕಾರಿಗಳ ಸಮಸ್ಯೆ ಬಗ್ಗೆ ತಮಗೆ ಅರಿವಿದ್ದು, ಈ ಬಗ್ಗೆ ನಿಮ್ಮ ಪರವಾಗಿ ಸರಕಾರದ ಮೇಲೆ ಒತ್ತಡ ಹಾಕುತ್ತೇನೆಂದು ಭರವಸೆ ನೀಡಿದರು. ಈ ಆದೇಶದಿಂದ ಧೃತಿಗೆಡದೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಹಾಗೂ ಸರಕಾರದ ಯೋಜನೆಗಳನ್ನು ಬಡಜನರಿಗೆ ತಲುಪಿಸಿ, ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು, ಶೌಚಾಲಯ ನಿರ್ಮಾಣ ಹಾಗೂ ಶುಚಿತ್ವ ಕಾಪಾಡಲು ಆದ್ಯತೆ ನೀಡುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಬೇಕೆಂದು ಸೂಚಿಸಿದರು.

ತಾಲೂಕು ಪಿಡಿಒ ಸಂಘದ ಅಧ್ಯಕ್ಷ ಮಣಿ, ನರಹರಿ, ರಚನಾ, ಮಹದೇವ್‌, ಮಹೇಶನಾಯ್ಕ, ನಾಗೇಂದ್ರ, ಶ್ರೀನಿವಾಸ್‌ ಸೇರಿದಂತೆ ತಾಲೂಕಿನ ಎಲ್ಲ ಪಿಡಿಒಗಳು ಹಾಜರಿದ್ದರು.

ಟಾಪ್ ನ್ಯೂಸ್

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.