ಮಕ್ಕಳನ್ನು ಪುಸ್ತಕದ ಹುಳುಗಳನ್ನಾಗಿಸದಿರಿ

Team Udayavani, Oct 3, 2017, 1:34 PM IST

ms5.jpg

ಹುಣಸೂರು: ಮಕ್ಕಳನ್ನು ಕೇವಲ ಪುಸ್ತಕದ ಹುಳುಗಳನ್ನಾಗಿಸದೆ, ಪಠ್ಯೇತರ ಚಟುವಟಿಕೆಗಳೊಂದಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರಗಳನ್ನು ಕಲಿಸಿದ್ದಲ್ಲಿ ಮುಂದೆ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ಜಿಪಂ ಮಾಜಿ ಸದಸ್ಯ ತೊಂಡಾಳುರಾಮಕೃಷ್ಣೇಗೌಡ ಸೂಚಿಸಿದರು.

ನಗರದ ಜಯಪ್ರಕಾಶ್‌ ನಾರಾಯಣ್‌ ಮೆಮೋರಿಯಲ್‌ ಜನತಾ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದರು. 1988ರಲ್ಲಿ ಪ್ರಾರಂಭಗೊಂಡ ಟ್ರಸ್ಟ್‌ ಇಂದಿನವರೆಗೂ ಸಾಕಷ್ಟು ಸಾಮಾಜಿಕ ಕಳಕಳಿಯನ್ನು ಹೊಂದಿದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ. ದೇಶದ ಭವಿಷ್ಯದ ಪ್ರಜೆಗಳಾದ ಮಕ್ಕಳಿಗೆ ಶಿಕ್ಷಣದೊಂದಿಗೆ  ಸಾಮಾನ್ಯ ಜ್ಞಾನವನ್ನೂ ನೀಡುವ ವಿವಿಧ ಆಟೋಟಗಳು ಅವಶ್ಯಕವಾಗಿದೆ ಎಂದು ಹೇಳಿದರು.

 ಗ್ರಾಮೀಣ ಭಾಗದ ಮಕ್ಕಳಲ್ಲಿ ಅದ್ವಿತೀಯ ಪ್ರತಿಭೆಯಿರುತ್ತದೆ. ಅದನ್ನು ಹೊರತರುವ ಕೆಲಸವಾಗಬೇಕು. ತನ್ನ ಹುಟ್ಟೂರಿನಲ್ಲಿ ಪ್ರಸ್ತುತ 70 ಮಂದಿ ವಿವಿಧ ಸರ್ಕಾರಿ ಹುದ್ದೆಗಳಲ್ಲಿದ್ದಾರೆ. ಕಾರಣ ಹಳ್ಳಿಯ ಕಷ್ಟದ ಬದುಕು ಅವರಲ್ಲಿ ಉತ್ತಮ ಬದುಕು ನಡೆಸುವುದನ್ನು ಕಲಿಸಿದೆ ಎಂದು ನುಡಿದರು. ಮಕ್ಕಳ ಮೆದುಳಿನ ಮೇಲೆ ಸಮತೋಲನ ಕಾಪಾಡುವ ಹೊಣೆಗಾರಿಕೆ ಪೋಷಕರದ್ದಾಗಿದ್ದು, ಪಾಠದ ಜೊತೆಗೆ ಆಟದಲ್ಲೂ ಮಕ್ಕಳನ್ನು ತೊಡಗಿಸುವ ಮನೋಭಾವ ಪೋಷಕರಲ್ಲಿ ಮೂಡಬೇಕಿದೆ ಎಂದು ಹೇಳಿದರು.

ಟ್ರಸ್ಟ್‌ನ ಅಧ್ಯಕ್ಷೆ ವಿಜಯ ಕರೀಗೌಡ, ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಪೋಷಕರು ಗಮನಿಸಬೇಕಿದ್ದು ಒತ್ತಡವನ್ನು ಮಕ್ಕಳ ಮೇಲೆ ಹೇರಬೇಡಿ ಎಂದರು.  ನಗರಸಭಾ ಸದಸ್ಯ ಕೃಷ್ಣರಾಜಗುಪ್ತ ಮಾತನಾಡಿ, ಕಳೆದ 20 ವರ್ಷಗಳಿಂದ ಟ್ರಸ್ಟ್‌ ವತಿಯಿಂದ ಪ್ರತಿಭಾ ಪುರಸ್ಕಾರ, ಆರೋಗ್ಯ ಶಿಬಿರ, ಜಯಪ್ರಕಾಶ್‌ ನಾರಾಯಣರ ಹುಟ್ಟುಹಬ್ಬದ ದಿನದಂದು ಹೊರರೋಗಿಗಳಿಗೆ ಹಣ್ಣುಹಂಪಲು ವಿತರಣೆ, ವಿಶ್ವವಿದ್ಯಾನಿಲಯ ಮಟ್ಟದ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಟ್ರಸ್ಟ್‌ ಉಪಾಧ್ಯಕ್ಷ ಗೋವಿಂದೇಗೌಡ ಮಾತನಾಡಿದರು. ಟ್ರಸ್ಟಿಗಳಾದ ಜಿಪಂ ಮಾಜಿ ಸದಸ್ಯ ಎಚ್‌.ಎಂ.ಫ‌ಜಲುಲ್ಲಾ, ಲತಾ, ಟಿಎಪಿಸಿಎಂಎಸ್‌ ಉಪಾಧ್ಯಕ್ಷ ಬಾಬು, ಟ್ರಸ್ಟಿ ವೆಂಕಟಪತಿ, ಕಾರ್ಯದರ್ಶಿ ಸುರೇಶ್‌ ಕುಮಾರ್‌, ಶಿಕ್ಷಕ ಗೋವಿಂದೇಗೌಡ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

2(1

Belthangady: ಕೃಷಿ, ಕರಕುಶಲ ಕಲೆಗಳ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.