ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಬೇಡಿ: ಡಿಸಿ

Team Udayavani, Mar 30, 2018, 12:20 PM IST

m3-chunavane.jpg

ಮೈಸೂರು: ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಕುರಿತಂತೆ ನಿಯಮಗಳನ್ನು ರೂಪಿಸಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ನಡೆಸುವ ಕಾರ್ಯಕ್ರಮ, ರ್ಯಾಲಿ ಕುರಿತಂತೆ ಆಯಾಯ ವಿಧಾನಸಭಾ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು ಎಂದರು.

ಅಧಿಕಾರಿಗಳ ಗಮನಕ್ಕೆ ತನ್ನಿ: ಚುನಾವಣಾ ಪ್ರಚಾರಕ್ಕಾಗಿ ಅಭ್ಯರ್ಥಿಗಳು ಮಾಡುವ ವೆಚ್ಚದ ವಿವರಗಳನ್ನು ಚುನಾವಣಾಧಿಕಾರಿಗಳಿಗೆ ನೀಡಬೇಕು ಅಭ್ಯರ್ಥಿಗಳು ಯಾವ ಯಾವ ಹಂತದಲ್ಲಿ ಖರ್ಚು ವೆಚ್ಚ ಮಾಡಿರುವುದರ ಬಗ್ಗೆ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂಬ ವಿವರವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷದ ಮುಖಂಡರುಗಳಿಗೆ ಯಾವುದೇ ರೀತಿಯ ಸಂಶಯ ಮತ್ತು ಗೊಂದಲಗಳು ಇದ್ದಲ್ಲಿ ಆಕ್ಷೇತ್ರದ ಚುನಾವಣಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬಹುದು ಎಂದರು.

ಕರಪತ್ರ, ಭಿತ್ತಿಪತ್ರ ಹಾಗೂ ಇತರೆ ಚುನಾವಣಾ ಸಾಮಗ್ರಿಗಳಲ್ಲಿ ಪ್ರಕಾಶಕರ ಹಾಗೂ ಮುದ್ರಕರ ಹೆಸರು, ವಿಳಾಸ ಮುದ್ರಿಸುವುದು ಕಡ್ಡಾಯವಾಗಿರುತ್ತದೆ. ಈ ಕುರಿತ ಘೋಷಣಾ ಪತ್ರವೊಂದನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಇ.ವಿ.ಎಂ. ಮತ್ತು ವಿ.ವಿ. ಪ್ಯಾಟ್‌ನ ಕಾರ್ಯನಿರ್ವಹಣೆ ಬಗ್ಗೆ ಅದರಲ್ಲಿ ಮತದಾನ ಮಾಡುವುದರ ಬಗ್ಗೆ ಅಣಕು ಮತದಾನ ಮಾದರಿಯನ್ನು ರಾಜಕೀಯ ಪಕ್ಷದ ಮುಖಂಡರುಗಳಿಗೆ ಪರಿಚಯಿಸಿದರು. ರಾಜಕೀಯ ಪಕ್ಷದ ಮುಖಂಡರುಗಳು ಅಣಕು ಮತದಾನ ಮಾಡಿ ತಮ್ಮಲ್ಲಿರುವ ಸಂಶಯ ಮತ್ತು ಗೊಂದಲಗಳ ಬಗ್ಗೆ ಪರಿಹಾರ ಕಂಡುಕೊಂಡರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ್‌, ಜಿಪಂ ಯೋಜನಾ ನಿರ್ದೇಶಕ ಪ್ರಭುಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಲೋಕನಾಥ್‌, ಚುನಾವಣಾ ಶಾಖೆಯ ರಾಮ್‌ ಪ್ರಸಾದ್‌, ವಾರ್ತಾ ಮತ್ತು  ಸಾರ್ವಜನಿಕ ಸಂಪರ್ಕಇಲಾಖೆಯ ಸಹಾಯಕ ನಿರ್ದೇಶಕ ರಾಜುಆರ್‌. ರಾಜಕೀಯ ಪಕ್ಷದ ಮುಖಂಡರುಗಳಾದ ಆರ್‌. ಮೂರ್ತಿ, ದೀಪಕ್‌ರಾಜ್‌, ಪಿ.ಎಸ್‌. ರಾಜಶೇಖರಮೂರ್ತಿ, ಆರ್‌.ಗಿರೀಶ್‌, ಎನ್‌. ನರಸಿಂಹಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.