ವೈದ್ಯರಿಲ್ಲದೇ ರೋಗಿಗಳ ಪರದಾಟ ಹೇಳತೀರದು


Team Udayavani, Jul 11, 2017, 11:37 AM IST

mys4.jpg

ತಿ.ನರಸೀಪುರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಹಾಗೂ ತುರ್ತು ಚಿಕಿತ್ಸಾ ಘಟಕ ಪ್ರಾರಂಭವಾಗಲಿದೆ. ಕಳೆದ ಅನೇಕ ವರ್ಷಗಳಿಂದ ಸಾರ್ವಜನಿಕ ಆಸ್ಪತ್ರೆ ಬಗ್ಗೆ ನಿರಂತರ ದೂರುಗಳಿದ್ದು, ಚಿಕಿತ್ಸಾ ಸೇವೆಯ ಕೊರತೆ ಜತೆಗೆ ಸೌಲಭ್ಯದ ಕೊರತೆಯ ಬಗ್ಗೆ ಸಾಮಾನ್ಯ ಆರೋಪಗಳಿದ್ದವು. ಪ್ರಸ್ತುತ ಆಸ್ಪತ್ರೆಯ ಸುಮಾರು 1.7 ಕೋಟಿ ರೂ ವೆಚ್ಚದಲ್ಲಿ ನವೀಕರಣ ಕಾಮಗಾರಿಯಾಗಿದ್ದು, ಹೊಸದಾಗಿ ಅನೇಕ ಸೌಲಭ್ಯ ಗಳನ್ನು ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮೇಲ್ದರ್ಜೆಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಈ ಆಸ್ಪತ್ರೆಗೆ ಕಾಯಕಲ್ಪ ದೊರಕಿಸಲು ಬಹಳ ವಿಳಂಬವಾಯಿತು. ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹಾದೇವಪ್ಪರ ವ್ಯಾಪ್ತಿಗೂ ಸೇರುವ ಆಸ್ಪತ್ರೆಯನ್ನು ಆರೋಗ್ಯ ಸಚಿವರಾಗಿದ್ದ ವೇಳೆ 30 ಹಾಸಿಗೆಗಳಿಂದ 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿದ್ದರು.

ಆದರೆ ಮೂಲ ಸೌಲಭ್ಯಗಳ ಕೊರತೆ ಹಾಗೆ ಉಳಿದಿತ್ತು. ಉಳಿದಂತೆ ವೈದ್ಯರ ಹಾಗೂ ಸೌಲಭ್ಯಗಳ ಕೊರತೆ ಹಾಗೂ ವೈದ್ಯರು ರೋಗಿಗಳಿಗೆ ಹೊರಗಿನಿಂದ ಔಷಧ, ಪರೀಕ್ಷೆ ಹಾಗೂ ಎಕ್ಸ್‌ರೇ ಮತ್ತು ಸ್ಕ್ಯಾನಿಂಗ್‌ ಮಾಡಿಸಿಕೊಂಡು ಬನ್ನಿ ಎಂದು ಹೇಳುತ್ತಾರೆ. ಆಸ್ಪತ್ರೆಯಲ್ಲಿ ಬಡವರ ಸುಲಿಗೆ ನಡೆಯುತ್ತಿದೆ ಎಂಬ ದೂರುಗಳು ನಿರಂತರವಾಗಿ ಕೇಳಿ ಬಂದ ಹಿನ್ನೆಲೆ ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಸಿದ್ದರಾಮಯ್ಯ, ಡಾ.ಮಹಾದೇವಪ್ಪ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಬಹಳ ನಿಧಾನಗತಿಯಲ್ಲಿ ಆಸ್ಪತ್ರೆಯ ಅಭಿವೃದ್ಧಿ ಆಗುತ್ತಿದೆ ಎಂಬುದು ಸಾರ್ವಜನಿಕ ಅಭಿಪ್ರಾಯ.

ರೋಗಿಗಳ ಪರದಾಟ: ವೈದ್ಯರ ಕೊರತೆ ಇಲ್ಲ ಎಂದು ಹೇಳುತ್ತಿದ್ದರೂ ಕೂಡ ಹೃದಯ ತಜ್ಞರು ಇಲ್ಲ. ಪ್ರತಿ ದಿನ 700ಕ್ಕೂ ಹೆಚ್ಚು ಹೊರ ರೋಗಿಗಳ ದಾಖಲಾತಿ ಇದ್ದು, ವೈದ್ಯರು ಸಾಲುತ್ತಿಲ್ಲ. ಒಳ ರೋಗಿಗಳ ಕೂಡ 150 ರಿಂದ 200 ಜನರು ಇರುತ್ತಾರೆ. ಇದರಿಂದ ವೈದ್ಯರ ಕೊರತೆ ಕಾಣುತ್ತಿದೆ. ಹಲವು ಬಾರಿ ರಜಾ ದಿನಗಳಲ್ಲಿ ಹಾಗೂ ಭಾನುವಾರದಂದು ವೈದ್ಯರಿಲ್ಲದೇ ರೋಗಿಗಳು ಪರದಾಟಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಇದರಿಂದ ಇಲ್ಲಿನ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ವೈದ್ಯರ ನೇಮಕ ವಾಗಬೇಕು. ಹೆರಿಗೆ ಸಂದರ್ಭದಲ್ಲಿ ಸೂಕ್ತ ಮಾಹಿತಿ ನೀಡಿ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲು ಸೂಕ್ತ ಮಾಹಿತಿ ನೀಡಬೇಕು. ಬೆಳಗಿನಿಂದ ಸಂಜೆಯವರಿಗೆ ಇರಿಸಿಕೊಂಡು ಬಳಿಕ ಮೈಸೂರಿಗೆ ಹೋಗಿ ಎನ್ನುವ ವೈದ್ಯರ ಕ್ರಮದ ಬಗ್ಗೆ ಸಾರ್ವಜನಿಕರ ಆಕ್ಷೇಪವಿದೆ.

ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇಲ್ಲ. ಆಸ್ಪತ್ರೆಯಿಂದ ಸಿಗುವ ಔಷಧ ಪಡೆಯಲು ಅನೇಕರು ಹಿಂಜರಿಯುತ್ತಾರೆ. ಹೊರಗೆ ತೆಗೆದುಕೊಳ್ಳುತ್ತೇವೆ ಬರೆದುಕೊಡಿ ಎಂದು ಹೇಳುತ್ತಾರೆ. ಔಷಧ ಹಾಗೂ ಪರೀಕ್ಷೆಗಳಿಗೆ ಹೊರಗೆ ಕಳುಹಿಸದಂತೆ ವೈದ್ಯರಿಗೆ ಸೂಚಿಸಲಾಗಿದೆ. ಎಲ್ಲಾ ಸೌಲಭ್ಯಗಳು ನಮ್ಮಲ್ಲಿಯೇ ಲಭ್ಯವಿದೆ. ಮುಂದಿನ ದಿನಗಳಲ್ಲಿ ಡಯಾಲಿಸಿಸ್‌. ತುರ್ತು ನಿಗಾ ಘಟಕ (ಐಸಿಯು) ಪ್ರಾರಂಭವಾಗಲಿದೆ.
-ಡಾ. ಗೋವಿಂದರಾಜು, ಆಡಳಿತಾಧಿಕಾರಿ, ಸಾರ್ವಜನಿಕ ಆಸ್ಪತ್ರೆ
 
ಆಸ್ಪತ್ರೆಗೆ ರೋಗಿಗಳು ಬಂದ ಕೂಡಲೇ ಚಿಕಿತ್ಸೆ ಸಿಗಬೇಕೆಂಬ ಹಂಬಲವೇ ಸೇವಾ ಸಮಸ್ಯೆಗೆ ಕಾರಣವಾಗುತ್ತಿದೆ. ತಾಳ್ಮೆಯಿಂದ ಸಾಲಿನಲ್ಲಿ ನಿಂತು ಚಿಕಿತ್ಸೆ ಪಡೆದರೆ ಎಲ್ಲಾ ಸೌಲಭ್ಯ ಸಿಗುತ್ತದೆ. ಸಮಸ್ಯೆಗೆ ಸಂಬಂಧಿಸಿದ ವೈದ್ಯರನ್ನು ಭೇಟಿ ಮಾಡಿದರೆ ಹೆಚ್ಚು ಒತ್ತಡವಿರುವುದಿಲ್ಲ. ಅನೇಕ ವೇಳೆ ವಿನಾಕಾರಣ ವೈದ್ಯರ ಮೇಲೆ ಆರೋಪ ಮಾಡಲಾಗುತ್ತದೆ. ನಾವು ಕೈಲಾದಷ್ಟು ತ್ವರಿತ ಹಾಗೂ ಅಗತ್ಯ ಸೇವೆ ದೊರಕಿಸುತ್ತಿದ್ದೇವೆ.
-ಡಾ.ಗೋವಿಂದಶೆಟ್ಟಿ, ಹಿರಿಯ ಶಸ್ತ್ರಚಿಕಿತ್ಸಾ ತಜ್ಞ

ಭಾನುವಾರ ಹಾಗೂ ರಜಾ ದಿನಗಳಲ್ಲಿ ರೋಗಿಗಳ ಪರದಾಟ ಹೇಳ ತೀರದು, ಆದಷ್ಟು ಇಂತಹ ದಿನಗಳಲ್ಲಿ 3- 4 ಮಂದಿ ವೈದ್ಯರನ್ನು ಹಾಕಿದರೆ  ರೋಗಿಗಳಿಗೆ ಅನುಕೂಲವಾಗುತ್ತದೆ.
-ಮಹಾದೇವಪ್ಪ, ರೋಗಿ, ತಿ.ನರಸೀಪುರ

* ಎಸ್‌.ಬಿ.ಪ್ರಕಾಶ್‌

ಟಾಪ್ ನ್ಯೂಸ್

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.