ಹಳೇ ವೈಷಮ್ಯ: ತಡರಾತ್ರಿ ಜೋಡಿ ಕೊಲೆ
ನಿವೇಶನ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ! ಎಲೆತೋಟದಲ್ಲಿ ಬರ್ಬರ ಹತ್ಯೆ ! ಇಬ್ಬರ ಬಂಧನ
Team Udayavani, Feb 9, 2021, 1:56 PM IST
ಮೈಸೂರು: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ಮೈಸೂರಿನ ಎಲೆತೋಟದ ಬಳಿ ಸಂಭವಿಸಿದೆ.
ಗೌರಿಶಂಕರನಗರದ ಕಿರಣ್(29) ಹಾಗೂ ಕಿಶನ್ (30) ಕೊಲೆಯಾದವರು. ಘಟನೆಯಲ್ಲಿ ಮಧು ಎಂಬಾತ ತೀವ್ರವಾಗಿ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗೌರಿಶಂಕರ ನಗರ ಬಡಾವಣೆಯಲ್ಲಿನ ನಿವೇಶನ ವಿಚಾರ ಕುರಿತಂತೆ ಕಿರಣ್, ಸ್ವಾಮಿ ಹಾಗೂ ಶಿವು ಎಂಬುವವರ ನಡುವೆ ಕೆಲ ತಿಂಗಳ ಹಿಂದೆ ತಿಕ್ಕಾಟ ನಡೆದಿತ್ತು.
ಈ ವಿಚಾರದಲ್ಲಿ ಮಾತುಕತೆ ನಡೆಸುವ ಸಲುವಾಗಿ ಶಿವು ಎಂಬಾತ ಕಿರಣ್‌ನನ್ನು ಮಾತುಕತೆಗೆ ಆಹ್ವಾನಿಸಿದ್ದಾನೆ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಸಲುವಾಗಿ ಕಿರಣ್, ತನ್ನ ಸ್ನೇಹಿತ ಕಿಶನ್ ಮತ್ತು ಮಧು ಅವರೊಂದಿಗೆ ಎಲೆತೋಟದ ಬಳಿಗೆ ತಡರಾತ್ರಿ ತೆರಳಿದ್ದಾರೆ.
ಈ ವೇಳೆ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಕೈಮೀರಿದೆ. ಈ ವೇಳೆ ಶಿವು ಹಾಗೂ ಆತನ ಬೆಂಬಲಿಗರು ಮಾರಕಾಸ್ತ್ರಗಳಿಂದ ಕಿರಣ್ ಹಾಗೂ ಕಿಶನ್ ಅವರನ್ನು ಮನಬಂದಂತೆ ಥಳಿಸಿದ್ದಾರೆ. ಇದರಿಂದಾಗಿ ಕಿರಣ್ ಹಾಗೂ ಕಿಶನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಗಲಾಟೆ ಬಿಡಿಸಲು ಮುಂದಾದ ಮಧು ಎಂಬಾತನಿಗೆ ತೀವ್ರತರವಾದ ಗಾಯವಾಗಿದೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ.
ಇದನ್ನೂ ಓದಿ :ಕೊರೊನಾ ಲಸಿಕೆ ಪಡೆದ ಜಿಲ್ಲಾಧಿಕಾರಿ
ಆರೋಪಿಗಳ ಬಂಧನಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ಸ್ಥಳಕ್ಕೆ ಡಿಸಿಪಿ ಡಾ. ಪ್ರಕಾಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೆ.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.