ಸಾಂಸ್ಕೃತಿಕ ಅರಿವು ಕಾರ್ಯಕ್ರಮಕ್ಕೆ ಚಾಲನೆ
Team Udayavani, Jul 18, 2017, 12:26 PM IST
ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿಯಾಗಿ ನೆಲೆ-ಹಿನ್ನೆಲೆ ಸಂಸ್ಥೆಯಿಂದ ರೂಪಿಸಿರುವ ಸಾಂಸ್ಕೃತಿಕ ಅರಿವಿನ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರೆಯಿತು.
ನಗರದ ಮಾನಸಗಂಗೋತ್ರಿಯ ರೌಂಡ್ ಕ್ಯಾಂಟಿನ್ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಮ್ಮೇಳನದ ಸಾಂಸ್ಕೃತಿಕ ರಾಜ್ಯ ಸಮಿತಿ ಸದಸ್ಯ ಎಚ್.ಜನಾರ್ಧನ್(ಜನ್ನಿ) ಚಾಲನೆ ನೀಡಿ ಮಾತನಾಡಿ, ಅಂಬೇಡ್ಕರ್ ಬಹುಜನರ ದಿವ್ಯದೀಪವಾಗಿದ್ದು, ಅಂಬೇಡ್ಕರ್ ಅವರ ನೆಪದಲ್ಲಿ ರಾಜ್ಯ ಸರ್ಕಾರ ಋಣಾತ್ಮಕವಾದ ಚಳವಳಿ ಸಂಘಟಿಸಿದೆ ಎಂದರು.
ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದ ಬಗ್ಗೆ ಸಾಂಸ್ಕೃತಿಕ ಅರಿವಿನ ಕಾರ್ಯಕ್ರಮ ರೂಪಿಸಿದ್ದು, ಮೈಸೂರು, ಚಾಮರಾಜನಗರ, ಹಾಸನ ಜಿಲ್ಲೆಗಳ ಕಲಾವಿದರು ಪಾಲ್ಗೊಂಡು ಸಾರ್ವಜನಿಕ ಸ್ಥಳಗಳಲ್ಲಿ ಅಂಬೇಡ್ಕರ್ ತತ್ವಾದರ್ಶ, ಜನಪರ ಹಾಗೂ ದಲಿತಪರ ಹೋರಾಟದ ಹಾಡುಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ತಿಳಿಸಿದರು.
ನೆಲೆ ಹಿನ್ನೆಲೆ ತಂಡದ ಕಲಾವಿದರು, ಶಿಕ್ಷಣದ ಮಹತ್ವ, ಮೂಢನಂಬಿಕೆಯಿಂದ ಜನರಿಗೆ ಆಗುತ್ತಿರುವ ಮೋಸ, ವಂಚನೆಯ ಕುರಿತು ಅರಿವು ಮೂಡಿಸುವ ಬೀದಿ ನಾಟಕದ ಮೂಲಕ ಪ್ರಸ್ತುತಪಡಿಸಿದರು. ಇದಕ್ಕೂ ಮುನ್ನ ಎಚ್.ಜನಾರ್ಧನ್ ಸಿದ್ದಲಿಂಗಯ್ಯರ ನಾಡ ನಡುವಿನಿಂದ ನೋವಿನಿಂದ ಕೂಗೆ ಗೀತೆಯನ್ನು ಹಾಡಿದರು. ಅಲ್ಲದೆ ನೆಲೆ ಹಿನ್ನೆಲೆ ಕಲಾವಿದರು ಯಾವ ಕುಲವಯ್ಯ ನಿಮ್ಮದು ಯಾವ ಮತವಯ್ಯ ಗೀತೆಗೆ ನೃತ್ಯ ರೂಪಕ ಪ್ರದರ್ಶಿಸಿದರು.
ಪಾಲಿಕೆ ಸದಸ್ಯ ಪುರುಷೋತ್ತಮಮ್, ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಮಹೇಶ ಚಂದ್ರಗುರು, ಮೈಸೂರು ವಿವಿ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನ ಮತ್ತು ಅಧ್ಯಯನ ಸಂಸ್ಥೆ ಸಂಯೋಜಕ ಡಾ.ಎಸ್.ನರೇಂದ್ರಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಕೆ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ, ನೆಲೆ ಹಿನ್ನೆಲೆ ಕೆ.ಆರ್.ಗೋಪಾಲಕೃಷ್ಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Darshan: ಇಂದು ನಟ ದರ್ಶನ್ ಮೈಸೂರಿಗೆ ಆಗಮನ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
MUST WATCH
ಹೊಸ ಸೇರ್ಪಡೆ
Devotee: ಟೆಂಪಲ್ ರನ್ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್
Jai Hanuman: ರಿಷಬ್ ಶೆಟ್ಟಿ ಚಿತ್ರತಂಡದ ವಿರುದ್ಧ ದೂರು
Threat: ಹೆಬ್ಬಾಳ್ಕರ್ ಕ್ಷಮೆ ಕೇಳದೆ ಹೋದ್ರೆ ಹತ್ಯೆ: ಸಿ.ಟಿ.ರವಿಗೆ ಬೆದರಿಕೆ ಪತ್ರ ರವಾನೆ
Daily Horoscope: ವಸ್ತ್ರ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಆರೋಗ್ಯ ತಕ್ಕಮಟ್ಟಿಗೆ ಉತ್ತಮ
Naxal Surrender: ‘ಶರಣಾಗುವಾಗ ಬಂದೂಕು ಹಿಡಿದುಕೊಂಡು ಬರುತ್ತಾರಾ?’: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.