ರೈತರ ನೆರವಿಗೆ ಡ್ರೋಣ್ ಸಂಶೋಧನೆ
Team Udayavani, Jan 13, 2019, 7:23 AM IST
ಮೈಸೂರು: ರೈತರಿಗಾಗಿ ಮಣ್ಣಿನ ಗುಣಮಟ್ಟ ಅಳೆಯುವ ಹಾಗೂ ಕ್ರಿಮಿಕೀಟಗಳ ಬಾಧೆಯ ಬಗ್ಗೆ ಜಾಗೃತಿ ಮೂಡಿಸುವ ಡ್ರೋಣ್ ಸಂಶೋಧನೆಯಲ್ಲಿ ತೊಡಗಿರುವುದಾಗಿ ಡ್ರೋಣ್ ಖ್ಯಾತಿಯ ಯುವ ವಿಜ್ಞಾನಿ ಪ್ರತಾಪ್ ತಿಳಿಸಿದರು.
ಕದಂಬ ರಂಗವೇದಿಕೆ ವತಿಯಿಂದ ಶನಿವಾರ ನೀಡಲಾದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತನ್ನ ಸಂಶೋಧನೆ ಮತ್ತು ಸಾಧನೆಗೆ ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರು ಪ್ರೇರಣಾದಾಯಕರು, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಶೋಧನೆಗಳನ್ನು ಕೈಗೊಂಡು ದೇಶ ಸೇವೆ ಮಾಡುವುದಾಗಿ ಹೇಳಿದರು.
ಸೂಕ್ತ ಮಾರ್ಗದರ್ಶನವಿಲ್ಲದೇ ಸಂಶೋಧನೆ ನಡೆಸುವುದು ಕಷ್ಟ. ಅದಕ್ಕೆ ಕೌಶಲ್ಯದ ಅಗತ್ಯತೆಯೂ ಇದೆ. ಇದಕ್ಕಾಗಿ ಕೌಶಲ್ಯವುಳ್ಳವರು ಹಾಗೂ ಸಂಶೋಧನೆ ಬಗ್ಗೆ ಆಸಕ್ತಿಯುಳ್ಳವರು ತಮ್ಮೊಂದಿಗೆ ಕೈಜೋಡಿಸಬಹುದಾಗಿದೆ ಎಂದು ಹೇಳಿದರು.
ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡಿರುವ ಗ್ರಾಮೀಣ ಪ್ರತಿಭೆಗಳಿಗೆ ತಮ್ಮೊಂದಿಗೆ ಸಂಶೋಧನೆಯಲ್ಲಿ ತೊಡಗಲು ಆದ್ಯತೆ ನೀಡುವುದಾಗಿ ಹೇಳಿದರು. ಹಸಿವು ಮತ್ತು ಬಡತನ ಜೀವನದಲ್ಲಿ ಎಲ್ಲವನ್ನೂ ಕಲಿಸಲಿದ್ದು, ಮುಂದೊಂದು ದಿನ ಅದೇ ನಮ್ಮ ಬೆಳವಣಿಗೆಗೆ ಪ್ರೇರಕ ಶಕ್ತಿಯಾಗಲಿದೆ ಎಂದರು.
ಪ್ರತಾಪ್ ಅವರನ್ನು ಸನ್ಮಾನಿಸಿದ ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಮಾತನಾಡಿ, ಮಂಡ್ಯ ಜಿಲ್ಲೆಯ ಕುಗ್ರಾಮದಲ್ಲಿ ರೈತಾಪಿ ಕುಟುಂಬದಲ್ಲಿ ಜನಿಸಿದ ಪ್ರತಾಪ್, ಆರ್ಥಿಕ ಅಭದ್ರತೆಯ ನಡುವೆಯೂ ವಿಶ್ವಮಟ್ಟದ ಹೆಮ್ಮೆಯ ಪ್ರತಿಭೆಯಾಗಿ ಬೆಳೆದಿದ್ದು, ಮುಂದಿನ ಅವರ ಸಂಶೋಧನೆಗೆ ಸರ್ಕಾರ ಮತ್ತು ಸಂಘಸಂಸ್ಥೆಗಳು ಬೆಂಬಲವಾಗಿ ನಿಲ್ಲಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕದಂಬ ರಂಗವೇದಿಕೆ ಅಧ್ಯಕ್ಷ ರಾಜಶೇಖರ ಕದಂ, ರೋಟರಿ ಮೈಸೂರು ಉತ್ತರ ಅಧ್ಯಕ್ಷ ಎಂ.ಕೆ.ನಂಜಯ್ಯ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಎಂ.ಚಂದ್ರಶೇಖರ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
MUST WATCH
ಹೊಸ ಸೇರ್ಪಡೆ
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.