ಚುನಾವಣಾ ಅಕ್ರಮಗಳ ಬಗ್ಗೆ ಹದ್ದಿನಕಣ್ಣು
Team Udayavani, Feb 27, 2018, 12:37 PM IST
ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲವು ಕ್ಷೇತ್ರಗಳನ್ನು ಚುನಾವಣಾ ವೆಚ್ಚ ಸಂಬಂಧ ಸೂಕ್ಷ್ಮ ಪ್ರದೇಶವೆಂದು ಘೋಷಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಂದೀಪ್ ಡಿ. ತಿಳಿಸಿದರು.
ಚುನಾವಣೆ ಸಂದರ್ಭದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತದಾರರಿಗೆ ಆಮಿಷಗಳನ್ನು ಒಡ್ಡುವುದು, ಹಣ ಹಂಚಿಕೆ ಮಾಡಲಾಗುತ್ತದೆ. ಆದರೆ ಚುನಾವಣಾ ನೀತಿಸಂಹಿತೆ ಜಾರಿಯಾದಲ್ಲಿ ಹಣಹಂಚಿಕೆ ಮಾಡುವುದು, ಆಮಿಷಗಳನ್ನು ಒಡ್ಡುವವರ ವಿರುದ್ಧ ಹಾಗೂ ಮತದಾನಕ್ಕೆ ಹಣ ಸ್ವೀಕರಿಸುವುದು ಅಪರಾಧವಾಗಿದ್ದು, ಅವರುಗಳ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮಕೈಗೊಳ್ಳಲಾಗುವುದು.
ಚುನಾವಣಾ ಆಯೋಗ ಈ ಕ್ಷೇತ್ರಗಳು ಸೂಕ್ಷ್ಮ ಪ್ರದೇಶವೆಂದು ಘೋಷಣೆ ಮಾಡಿದರೆ, ಅಂತಹ ಕ್ಷೇತ್ರಗಳಲ್ಲಿ ನಿಗದಿಗಿಂತ ಹೆಚ್ಚಿನ ಪ್ಲೆ„ಯಿಂಗ್ ಸ್ಕ್ವಾಡ್‌ಗಳನ್ನು ನಿಯೋಜಿಸಲಾಗುವುದು. ಈ ತಂಡಗಳು ದಿನದ 24 ಗಂಟೆಗಳ ಕಾಲ ಕ್ಷೇತ್ರದಲ್ಲಿ ಗಸ್ತು ಕಾರ್ಯಾಚರಣೆ ಮಾಡುವ ಮೂಲಕ ಚುನಾವಣಾ ಅಕ್ರಮ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಕ್ರಮವಹಿಸಲಾಗುವುದು ಎಂದ ಅವರು, ಗೌಪ್ಯ ವರದಿಯಲ್ಲಿ ಸೂಚಿಸಿರುವ ಕ್ಷೇತ್ರಗಳ ಹೆಸರುಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
2687 ಮತದಾನ ಕೇಂದ್ರ: ಜಿಲ್ಲೆಯಲ್ಲಿ 2687 ಚುನಾವಣಾ ಬೂತ್‌ಗಳಿದ್ದು, ಇವುಗಳಲ್ಲಿ 43 ಶಿಥಿಲಾವಸ್ಥೆಯಲ್ಲಿದ್ದು, 200 ಬೂತ್‌ಗಳ ದುರಸ್ತಿ ಕಾರ್ಯ ಈಗಾಗಲೇ ನಡೆಯುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ 23.4 ಲಕ್ಷ ರೂ.ಗಳನ್ನು ಸಹ ನೀಡಲಾಗಿದ್ದು, ಮುಂದಿನ ಒಂದು ವಾರದಲ್ಲಿ ದುರಸ್ತಿ ಕೆಲಸಗಳು ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಶೇ.95 ಮತದಾನ ಕೇಂದ್ರಗಳು ಕಾಂಪೌಂಡ್‌ಗಳನ್ನು ಹೊಂದಿವೆ.
ಚುನಾವಣಾ ಆಯೋಗದ ನಿಯಮದ ಪ್ರಕಾರ ಗ್ರಾಮೀಣ ಪ್ರದೇಶಗಳಲ್ಲಿ 1,200 ಮತದಾರರಿಗೆ ಮತ್ತು ನಗರ ಪ್ರದೇಶಗಳಲ್ಲಿ 1,400 ಮತದಾರರಿಗೆ ಒಂದು ಮತದಾನ ಕೇಂದ್ರಗಳನ್ನು ತೆರೆಯಬೇಕಿದೆ ಎಂದ ಅವರು, ಚುನಾವಣಾ ಮತಪಟ್ಟಿಯಿಂದ ಸಾಮೂಹಿಕವಾಗಿ ಮತದಾರರ ಹೆಸರುಗಳನ್ನು ಕೈಬಿಡಲು ರಾಜ್ಯ ಚುನಾವಣಾ ಆಯೋಗದಿಂದ ಅನುಮೋದನೆ ಪಡೆಯಬೇಕಿದೆ. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಈಗಲೂ ಸಮಯವಿದೆ ಎಂದು ತಿಳಿಸಿದರು.
ಸ್ವೀಫ್ ಸಮಿತಿ ಆರಂಭ: ಜಿಪಂ ಸಿಇಒ ಶಿವಶಂಕರ್ ಮಾತನಾಡಿ, 2018ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ವೀಫ್ ಸಮಿತಿಯನ್ನು ರಚಿಸಲಾಗಿದ್ದು, ಜಿಲ್ಲೆಯಲ್ಲಿ ಮತದಾರರ ನೋಂದಣಿ, ನೈತಿಕ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮುಖ್ಯವಾಗಿ ಜಿಲ್ಲೆಯ ಯಾವುದೇ ಮತದಾರರು ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು, ಅಂಗವಿಕಲರು ಸಹ ಮತದಾನ ಪ್ರಕ್ರಿಯೆಯಲ್ಲಿ ಬಾಗವಹಿಸುವಂತೆ ಮಾಡುವ ಉದ್ದೇಶ ಹೊಂದಲಾಗಿದೆ.
ಶೇ.100 ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಸಮಿತಿ ಕೈಗೊಂಡಿದ್ದು, ಹೆಚ್ಚಿನ ಜನರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಹಾಗೂ ಚುನಾವಣಾ ಸಮಯದಲ್ಲಿ ಅಕ್ರಮಗಳನ್ನು ತಡೆಯುವ ಬಗ್ಗೆ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸ್‌ಅಪ್, ಟ್ವಿಟರ್, ಟೆಲಿಗ್ರಾಂ, ಇನ್ಸಾ$rಗ್ರಾಮ್ ಖಾತೆಗಳನ್ನು ಶೀಘ್ರದಲ್ಲೇ ತೆರೆಯಲಾಗುತ್ತದೆ ಎಂದು ಹೇಳಿದರು.
ಹಾಡಿ ಜನರಲ್ಲಿ ಮತದಾನ ಜಾಗೃತಿ: ಗಿರಿಜನರು ಕೂಲಿಗಾಗಿ ವಲಸೆ ಹೋಗುವ ಮೂಲಕ ಚುನಾವಣೆಗಳಿಂದ ದೂರ ಉಳಿಯುತ್ತಾರೆ. ಆದರೆ, ಈ ಬಾರಿ ಮತದಾನದ ದಿನದಂದು ಹಾಡಿಗಳ ಜನರು ವಲಸೆ ಹೋಗದೆ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಈಗಾಗಲೇ ಅರಿವು ಮೂಡಿಸಲಾಗಿದ್ದು, ಮತದಾನದ ದಿನದಂದು ಇವರುಗಳಿಗೆ ನರೇಗಾ ಯೋಜನೆಯಡಿ ಉದ್ಯೋಗ ನೀಡಲಾಗುವುದು.
ಕಾರ್ಮಿಕರು ಕಡ್ಡಾಯವಾಗಿ ಮತದಾನ ಮಾಡಲು ಅವಕಾಶ ನೀಡುವಂತೆ ಕಾರ್ಖಾನೆಗಳ ಆಡಳಿತ ಮಂಡಳಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಅಲ್ಲದೆ ಬಹುತೇಕ ಮತದಾರರು ಚುನಾವಣೆಗಳಲ್ಲಿ ಮತದಾನ ಮಾಡುವುದಿಲ್ಲ, ಅನೇಕರು ಮತಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರಿಸಿಕೊಳ್ಳುತ್ತಿಲ್ಲ. ಇನ್ನೂ ಕೆಲವು ಮತದಾರರಿಗೆ ತಾವು ಮತ ಚಲಾಯಿಸಬೇಕಾದ ಬೂತ್ ಎಲ್ಲಿದೆ ಎಂದು ತಿಳಿದಿರುವುದಿಲ್ಲ.
ಕೆಲವರು ಮತಗಟ್ಟೆಗಳಲ್ಲಿರುವ ಸರದಿ ಸಾಲುಗಳನ್ನು ಕಂಡು ಮತದಾನದಿಂದ ದೂರ ಉಳಿಯುತ್ತಾರೆ. ಈ ಎಲ್ಲಾ ಸಮಸ್ಯೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕ್ರಮವಹಿಸಲಾಗಿದ್ದು, ಜತೆಗೆ ಚುನಾವಣಾ ಆಯೋಗ ಮತದಾನದ ಸಮಯವನ್ನು ಸಂಜೆ 6 ಗಂಟೆವರೆಗೆ ವಿಸ್ತರಿಸಬಹುದು ಎಂದರು.
ತಪ್ಪಿತಸ್ಥರ ವಿರುದ್ಧ ಕ್ರಮ: ಮೈಸೂರಿನ ಕೆ.ಆರ್. ಕ್ಷೇತ್ರದ ಬೂತ್‌ವೊಂದರಲ್ಲಿ ನಡೆದಿರುವ ಮತಪಟ್ಟಿ ಅಕ್ರಮದ ಕುರಿತು ತನಿಖೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಅಧಿಕಾರಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಆದರೆ, 4 ಸಾವಿರ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿಲ್ಲ ಎಂದು ಜಿಲ್ಲಾಧಿಕಾರಿ ರಂದೀಪ್ ಡಿ. ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.