ಶಿಕ್ಷಣದಷ್ಟೇ ಕ್ರೀಡೆಗಳಿಗೂ ಪ್ರಮುಖ್ಯತೆ ನೀಡಿ
Team Udayavani, Jul 28, 2017, 11:22 AM IST
ಪಿರಿಯಾಪಟ್ಟಣ: ಶಿಕ್ಷಣದಷ್ಟೇ ಕ್ರೀಡೆಗಳಿಗೂ ಪ್ರಮುಖ್ಯತೆ ನೀಡಿ ಶಾಲಾ ಮಕ್ಕಳು ಉತ್ತಮ ಕ್ರೀಡಾಪಟುವಾಗಲು ಸರ್ಕಾರ ಯೋಜನೆಗಳನ್ನು ರೂಪಿಸ ಬೇಕು ಎಂದು ಜಿಪಂ ಸದಸ್ಯ ಜಯಕುಮಾರ್ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಂದೇಗಾಲ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಆಯೋಜಿಸಿದ್ದ 2ನೇ ವೃತ್ತದ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿಯೂ ಅನೇಕ ಪ್ರತಿಭೆಗಳು ಅಡಗಿದ್ದು ಇವು ಹೊರಹೊಮ್ಮಲು ಇಂತಹ ಕ್ರೀಡಾಕೂಟಗಳು ಸಹಕಾರಿ. ಶಾಲಾ ಶಿಕ್ಷಕರು ಹಾಗೂ ಪೋಷಕರು ಮಕ್ಕಳ ಪ್ರತಿಭೆ ಹೊರತರಲು ಪೂರಕವಾಗಿ ಅವರಿಗೆ ಒಳ್ಳೆಯ ಕ್ರೀಡಾ ಚಟುವಟಿಕೆಗಳನ್ನು ಕಲಿಸಬೇಕು ಎಂದರು.
ಎಂಡಿಸಿಸಿ ಬ್ಯಾಂಕಿನ ಮಾಜಿ ನಿರ್ದೇಶಕ ಚಂದ್ರಶೇಖರಯ್ಯ ಮಾತನಾಡಿ, ಇಂದಿನ ಶಿಕ್ಷಣ ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಸರ್ಕಾರಿ ಶಾಲೆಗಳೆ ಉತ್ತಮವಾಗಿದ್ದು ಸರ್ಕಾರ ಕೂಡ ಮಕ್ಕಳಿಗಾಗಿ ಶಿಕ್ಷಣಕ್ಕೆ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದ್ದು ಅನೇಕ ಯೋಜನೆಗಳನ್ನು ರೂಪಿಸಿದೆ. ಇಂತಹ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿಯೂ ತಮ್ಮ ಪ್ರತಿಭೆ ಹೊರಹೊಮ್ಮಬೇಕು ಎಂದು ತಿಳಿಸಿದರು.
ಕಂದೇಗಾಲ ಗ್ರಾಮದ ರಾಷ್ಟ್ರೀಯ ಕ್ರೀಡಾಪಟು ಕೌಶಿಕ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಕೆ.ಎಸ್.ಮಹದೇವಪ್ಪ, ಗ್ರಾಪಂ ಸದಸ್ಯೆ ನಾಗಮಂಜು, ಮುಖಂಡರಾದ ಯತಿರಾಜೇಗೌಡ, ಸಿಪಿ ರವಿ, ಶಿವಣ್ಣ, ಪ್ರಾಶಾಶಿ ಸಂಘದ ಅಧ್ಯಕ್ಷ ದೇವರಾಜೇಗೌಡ, ದೈಹಿಕ ಶಿಕ್ಷಕ ಪಂಚಾಕ್ಷರಿ, ಮುಖ್ಯ ಶಿಕ್ಷಕ ಕಾಂತರಾಜು, ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್ ಇತರರು ಇದ್ದರು. ಕ್ರೀಡಾಕೂಟದಲ್ಲಿ 17 ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.