ನೀರು ಪೂರೈಕೆಗೆ ಆಗ್ರಹಿಸಿ ಚುನಾವಣೆ ಬಹಿಷ್ಕಾರ


Team Udayavani, Nov 24, 2019, 3:00 AM IST

neeru-poor

ಹುಣಸೂರು: ನಗರದ 8 -11ನೇ ವಾರ್ಡಿನ ಕೆಲ ಬೀದಿಗಳಲ್ಲಿ ಶುದ್ಧ ನೀರು ಪೂರೈಸುವಲ್ಲಿ ವಿಫ‌ಲವಾಗಿರುವ ನಗರಸಭೆ ಅಧಿಕಾರಿಗಳು, ಜಿಲ್ಲಾಡಳಿತದ ವಿರುದ್ಧ ಆಕ್ರೋಶಗೊಂಡಿರುವ ನಿವಾಸಿಗಳು, ಮುಂಬರುವ ಉಪಚುನಾವಣೆ ಬಹಿಷ್ಕರಿಸಲು ಒಮ್ಮತದ ತೀರ್ಮಾನ ಕೈಗೊಂಡಿದ್ದಾರೆ.

ಪೈಪ್‌ಲೈನ್‌ ನೀರು ಸ್ಥಗಿತ: ಕಳೆದ 3 ತಿಂಗಳಿನಿಂದ 8ನೇ ವಾರ್ಡ್‌ನ ಬ್ರಾಹ್ಮಣರ ಬಡಾವಣೆ, ಸ್ಟೋರ್‌ ಬೀದಿ, ಕಾಫಿ ವರ್ಕ್ಸ್ ರಸ್ತೆ, 11ನೇ ವಾರ್ಡಿನ ಗಾಂಧಿ ಮೈದಾನದ ಸುಮಾರು 500ಕ್ಕೂ ಹೆಚ್ಚು ಮನೆಗಳ ನಲ್ಲಿಗಳಲ್ಲಿ ಮಲ ಮಿಶ್ರಿತ ಅಶುದ್ಧ ನೀರು, ಮತ್ತೂಮ್ಮೆ ಬಣ್ಣ ಬಣ್ಣದ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈವರೆಗೂ ಅಶುದ್ಧ ನೀರು ಎಲ್ಲಿಂದ ಸೇರುತ್ತಿದೆ ಎಂಬುದನ್ನು ಪತ್ತೆ ಹಚ್ಚುವಲ್ಲಿ ನಗರಸಭೆ ಎಂಜಿನಿಯರ್‌, ಸಿಬ್ಬಂದಿ ವಿಫಲವಾಗಿದ್ದಾರೆ. ಬಡಾವಣೆ ನಿವಾಸಿಗಳು ಹತ್ತಾರು ಬಾರಿ ನಗರಸಭೆಗೆ ಮನವಿ ನೀಡಿದರೂ ಕೇವಲ ಭರವಸೆ ಸಿಕ್ಕಿತ್ತು. ನಂತರದಲ್ಲೂ ನಲ್ಲಿ ನೀರನ್ನು ಸ್ಥಗಿತಗೊಳಿಸಿ ಟ್ಯಾಂಕರ್‌ ಮೂಲಕ ಪೂರೈಸಲಾಗುತ್ತಿದ್ದರೂ ಅದೂ ಸಕಾಲಕ್ಕೆ ಬಾರದೆ ಸಂಕಟ ಎದುರಾಗಿದೆ ಎಂದು ದೂರಿದ್ದಾರೆ.

ಪ್ರಯೋಜನವಾಗಿಲ್ಲ: ಇದೀಗ ಕಳೆದ 3 ದಿನಗಳಿಂದ ಟ್ಯಾಕರ್‌ ನೀರಿನ ಸೌಲಭ್ಯವನ್ನೂ ಸ್ಥಗಿತಗೊಳಿಸಲಾಗಿದೆ ,ಬಡಾವಣೆಯಲ್ಲಿದ್ದ ಬೋರ್‌ ವೆಲ್‌ ನಿಂದಲೇ ಶುದ್ಧ ನೀರು ಪೂರೈಸಬಹುದಾಗಿದ್ದರೂ ಅಧಿಕಾರಿಗಳು ವಿಫಲರಾಗಿದ್ದಾರ. ಇನ್ನು ಎರಡು ಬಾರಿ ನೀರಿನ ಸಮಸ್ಯೆ ಕುರಿತು “ಉದಯವಾಣಿ’ ಬೆಳಕು ಚೆಲ್ಲಿ ಸಂಬಂಧಿಸಿದವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಬದಲಿಗೆ ಎಲ್ಲಿ ಗಲೀಜು ನೀರು ಸೇರುತ್ತದೆ ಎಂಬುದನ್ನು ಪತ್ತೆ ಹಚ್ಚಲು ವಿವಿಧೆಡೆ ರಸ್ತೆ ಅಗೆದದ್ದು ಬಿಟ್ಟರೆ, ಸಮಸ್ಯೆ ಪತ್ತೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

ಸಮರ್ಪಕ ನೀರು ಸಿಗುತ್ತಿಲ್ಲ: ಇನ್ನು ನಗರಸಭೆ ವತಿಯಿಂದ ಸಮರ್ಪಕವಾಗಿ ಟ್ಯಾಂಕರ್‌ ಮೂಲಕ ನೀರು ಪೂರೈಸುತ್ತಿಲ್ಲ, ಉಳ್ಳವರು ಹಣಕೊಟ್ಟು ಟ್ಯಾಂಕರ್‌ ಮೂಲಕ ನೀರು ತರಿಸಿಕೊಳ್ಳುತ್ತಾರೆ, ಈ ಬಡಾವಣೆಯಲ್ಲಿ ಬಹುತೇಕರು ಕೂಲಿ ಕಾರ್ಮಿಕರೇ ಇದ್ದು, ಟ್ಯಾಂಕರ್‌ ಬಂದರೂ ಎಲ್ಲರೂ ಕೆಲಸಕ್ಕೆ ಹೋಗಿರುತ್ತಾರೆ. ಈ ಬಡಾವಣೆಗಳಲ್ಲಿ ನೀರು ಹಿಡಿಯುವುದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ನಿವಾಸಿಗಳ ನೀರಿನ ದಾಹ ನೀಗಿಸುವವರ್ಯಾರು ಎಂಬಂತಾಗಿದೆ. ಇನ್ನು ಜನಪ್ರತಿನಿಧಿಗಳು, ಪಕ್ಷಗಳವರು ಚುನಾವಣಾ ಒತ್ತಡದಲ್ಲಿದ್ದು, ಈ ಬಡಾವಣೆಯ ನೀರು ಪೂರೈಕೆಯ ಗೋಳಿನ ಸಮಸ್ಯೆ ಕೇಳುವವರಿಲ್ಲದಂತಾಗಿದ್ದು, ಇದೀಗ ಬಡಾವಣೆ ನಿವಾಸಿಗಳು ಚುನಾವಣಾ ಬಹಿಷ್ಕಾರವೇ ಲೇಸೆಂದು ತೀರ್ಮಾನಿಸಿದ್ದೇವೆ ಎನ್ನುತ್ತಾರೆ ಸ್ಥಳೀಯ ಪುರುಷೋತ್ತಮ್‌.

ಅಧಿಕಾರಿಗಳ ಅಂಧಾ ದರ್ಬಾರ್‌: ನಗರಸಭೆಯಲ್ಲೀಗ ಚುನಾಯಿತ ಆಡಳಿತ ಮಂಡಳಿ ಇಲ್ಲ. ಅಧಿಕಾರಿಗಳು, ಸಿಬ್ಬಂದಿಗಳದ್ದೇ ಕಾರುಬಾರು ಆಗಿದೆ. ಹೀಗಾಗಿ ಇಲ್ಲಿ ಹೇಳುವವರು, ಕೇಳುವವರೂ ಯಾರೂ ಇಲ್ಲವಾಗಿದ್ದಾರೆ. ಜಿಲ್ಲಾಧಿಕಾರಿಗಳೇ ಆಡಳಿತಾಧಿಕಾರಿಗಳಾಗಿದ್ದರೂ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಚುನಾವಣೆ ಘೋಷಣೆಯಾದಂದಿನಿಂದ ಸಿಬ್ಬಂದಿಗಳಿರಲಿ ಸಮಸ್ಯೆ ಹೇಳಿಕೊಳ್ಳಲು ಪೌರಾಯುಕ್ತರೂ ಸಿಗುತ್ತಿಲ್ಲ. ಹೀಗಾಗಿ ಸಮಸ್ಯೆ ದಿನೇ ದಿನೆ ಉಲ್ಬಣಗೊಳ್ಳುತ್ತಲೇ ಇದೆ. ಇನ್ನು ಬಡಾವಣೆಯಲ್ಲಿ ನಿತ್ಯ ಹೊಟ್ಟೆನೋವು, ಭೇದಿ, ಜ್ವದಿಂದ ಸುಮಾರು 50ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದಾರೆ. ಆರೋಗ್ಯ ಕಾರ್ಯಕರ್ತರೂ ವರದಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆನ್ನುತ್ತಾರೆ ಬಡಾವಣೆ ಹಿರಿಯ ನಾಗರಿಕ ನಾಗಭೂಷಣ್‌.

3 ತಿಂಗಳಿನಿಂದ ನಲ್ಲಿಗಳಲ್ಲಿ ಒಳಚರಂಡಿ ನೀರು ಪೂರೈಕೆ ವಿರುದ್ಧ ಖುದ್ದಾಗಿ ನಗರಸಭೆ ಅಧಿಕಾರಿಗಳಿಗೆ ಐದಕ್ಕೂ ಹೆಚ್ಚು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ, ನೀರು ಪೂರೈಸುವ ಸಿಬ್ಬಂದಿ ಈ ಗಲೀಜು ನೀರನ್ನೇ ಕಾಯಿಸಿ ಬಳಸಿರೆಂದು ಉಪದೇಶ ನೀಡುತ್ತಾರೆ. ಇನ್ನಾದರೂ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡು ನೀರಿನ ಸಮಸ್ಯೆ ಬಗೆಹರಿಸಲಿ.
-ಶ್ರೀನಿವಾಸ್‌, ಬಡಾವಣೆ ನಿವಾಸಿ

ನಲ್ಲಿ ಪೈಪಿಗೆ ಅಶುದ್ಧ ನೀರು ಪೂರೈಕೆಯಾಗುತ್ತಿರುವುದನ್ನು ಈವರಗೂ ಪತ್ತೆ ಹಚ್ಚಿಲ್ಲವೆಂದರೆ ನಾಚಿಕೆಗೇಡ. ಅಶುದ್ಧ ನೀರಿನ ಬಳಕೆಯಿಂದಾಗಿ 20ಕ್ಕೂ ಹೆಚ್ಚು ಮಂದಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಎಲ್ಲರಿಗೂ ಹೇಳಿ, ಕೇಳಿ ಸಾಕಾಗಿದ್ದು, ಅನಿವಾರ್ಯವಾಗಿ ಬಡಾವಣೆ ನಿವಾಸಿಗಳು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದೇವೆ.
-ಉದಯಕುಮಾರ್‌, ಬಡಾವಣೆ ನಿವಾಸಿ

ಅಶುದ್ಧ ನೀರು ಪೈಪಿಗೆ ಎಲ್ಲಿ ಸೇರುತ್ತಿದೆ ಎಂಬುದು ಪತ್ತೆ ಹಚ್ಚಲು ಸಿಬ್ಬಂದಿ ಸಾಕಷ್ಟು ಶ್ರಮಿಸಿದ್ದರೂ ಪ್ರಯೋಜನವಾಗಿಲ್ಲ. ಇದೀಗ ಹೊಸ ಪೈಪ್‌ಲೈನ್‌ ಅಳವಡಿಸಲು ಕಾಮಗಾರಿ ನಡೆಯುತ್ತಿದ್ದು, ಇನ್ನೆರಡು ದಿನದಲ್ಲಿ ಶುದ್ಧ ನೀರನ್ನು ಪೂರೈಸಲಾಗುವುದು. ಅಲ್ಲಿಯವರೆಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುವುದು.
-ಶಿವಪ್ಪನಾಯಕ, ಪೌರಾಯುಕ್ತ

* ಸಂಪತ್‌ಕುಮಾರ್‌

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.