ಕೇಂದ್ರದ ಸಾಧನೆ ಮುಂದಿಟ್ಟುಕೊಂಡು ಚುನಾವಣೆ


Team Udayavani, Jun 17, 2018, 12:30 PM IST

m6-kendra.jpg

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಐದು ವರ್ಷಗಳಲ್ಲಿ ನಾವು ಮಾಡಿರುವ ಸಾಧನೆಗಳ ಮೇಲೆಯೇ ಚುನಾವಣೆಗೆ ಹೋಗುತ್ತೇವೆ. ಯಾವುದೇ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡರೂ ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಶನಿವಾರ, ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರಿಂದ ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಕಿರುಹೊತ್ತಿಗೆ ಬಿಡುಗಡೆ ಮಾಡಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೇಂದ್ರದಲ್ಲಿ 48 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ದೇಶಕ್ಕೆ ಕೊಟ್ಟಿದ್ದೇನು?, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 48 ತಿಂಗಳಲ್ಲಿ ದೇಶಕ್ಕೆ ಕೊಟ್ಟಿರುವುದೇನು ಎಂಬುದನ್ನು ಈ ಕಿರುಹೊತ್ತಿಗೆಯಲ್ಲಿ ಹೋಲಿಕೆ ಮಾಡಿ ತಿಳಿಸಿದ್ದೇವೆ. 

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದನಾಗಿ ಮೈಸೂರು ಅಭಿವೃದ್ಧಿಗೆ ನಾನೇನು ಮಾಡಿದ್ದೇನೆ ಎಂಬುದನ್ನು ನಾಲ್ಕು ಪುಟದ ಕರಪತ್ರದಲ್ಲಿ ಹೇಳಲಾಗಿದೆ. ಇದನ್ನು ಜನರಿಗೆ ತಲುಪಿಸುವ ಮೂಲಕ ಲೋಕಸಭಾ ಚುನಾವಣೆಗೆ ಇಂದಿನಿಂದಲೇ ಪ್ರಚಾರ ಆರಂಭಿಸುತ್ತಿದ್ದೇವೆ ಎಂದರು. ಈ ವೇಳೆ ಶಾಸಕ ಎಲ್‌.ನಾಗೇಂದ್ರ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

ಬಳಿಕ ಮೈಸೂರು ಅರಮನೆಗೆ ತೆರಳಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಅವರಿಗೆ ಕೇಂದ್ರ ಸರ್ಕಾರದ ನಾಲ್ಕು ವರ್ಷದ ಸಾಧನೆಯ ವಿವರಗಳುಳ್ಳ ಕಿರು ಹೊತ್ತಿಗೆ ಹಾಗೂ ಮೈಸೂರು-ಕೊಡಗು ಲೋಕಸಭಾ ಕೇತ್ರದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತ ಕರಪತ್ರವನ್ನು ನೀಡಿದರು.

ಯೋಗ ಸಿದ್ಧತೆ ಪರಿಶೀಲನೆ: ಜೂನ್‌ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ನಡೆಯುವ ಸಾಮೂಹಿಕ ಯೋಗ ಪ್ರದರ್ಶನದ ಸಿದ್ಧತೆಗಳ ಬಗ್ಗೆ ರೇಸ್‌ಕೋರ್ಸ್‌ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ವೇಳೆ ಮಾತನಾಡಿದ ಪ್ರತಾಪ್‌ ಸಿಂಹ, ಕಳೆದ ಬಾರಿ ಮೈಸೂರಿನ ಯೋಗ ಪಟುಗಳು ಹಾಗೂ ಮೈಸೂರಿನ ಜನತೆ ಅತ್ಯುತ್ಸಾಹದಿಂದ 55 ಸಾವಿರಕ್ಕಿಂತ ಹೆಚ್ಚು ಜನರು ಭಾಗಿಯಾಗಿದ್ದರಿಂದ ಗಿನ್ನಿಸ್‌ ದಾಖಲೆ ಬರೆಯಲು ಸಾಧ್ಯವಾಯಿತು. ಈ ಬಾರಿ 70 ಸಾವಿರ ಜನರು ಸೇರುವ ನಿರೀಕ್ಷೆ ಇದ್ದು, ಮತ್ತೂಮ್ಮೆ ಗಿನ್ನಿಸ್‌ ದಾಖಲೆ ಮಾಡಲು ಜನರ ಸಹಕಾರ ಬೇಕು. ಮೈಸೂರಿನ ಪ್ರತಿಯೊಬ್ಬರು ಯೋಗ ಪ್ರದರ್ಶನದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದರು. 

ಟಾಪ್ ನ್ಯೂಸ್

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.