ವಿದ್ಯಾರ್ಥಿಗಳಲ್ಲಿ ಗಣಿತದ ಭಯ ಹೋಗಲಾಡಿಸಿ
Team Udayavani, Sep 7, 2018, 11:24 AM IST
ಮೈಸೂರು: ವಿಜ್ಞಾನ ಮತ್ತು ಗಣಿತ ವಿಷಯಗಳು ಕಬ್ಬಿಣದ ಕಡಲೆ ಎಂದು ವಿದ್ಯಾರ್ಥಿಗಳಲ್ಲಿ ಮನೆ ಮಾಡಿರುವ ಭಯವನ್ನು ಶಿಕ್ಷಕರು ಹೋಗಲಾಡಿಸಬೇಕು ಎಂದು ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ಟಿ.ಕೆ.ಉಮೇಶ್ ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯದ ಜ್ಞಾನಾಭಿವೃದ್ಧಿ ಸಮಿತಿ ವತಿಯಿಂದ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಪ್ರೌಢಶಾಲಾ ವಿಜ್ಞಾನ ಮತ್ತು ಗಣಿತ ಶಿಕ್ಷಕರಿಗೆ ಆಯೋಜಿಸಿರುವ ಮೂರು ದಿನಗಳ ಪುನಶ್ಚೇತನ ಕಾರ್ಯಾಗಾರಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಮಾನವನ ಸರ್ವತೋಮುಖ ಬೆಳವಣಿಗೆಗೆ ಗಣಿತವೂ ಅಗತ್ಯವಾಗಿದ್ದು, ವಿಜ್ಞಾನ ಮತ್ತು ಗಣಿತ ವಿಷಯಗಳ ಬಗೆಗಿನ ಭಯವನ್ನು ಶಿಕ್ಷಕರು ಹೋಗಲಾಡಿಸಬೇಕು ಎಂದರು.
ವಿಜ್ಞಾನದ ಕುರಿತು ವಿಶೇಷ ಆಸಕ್ತಿ ಬರುವ ಹಾಗೆ ಮನವರಿಕೆ ಮಾಡಿಕೊಡಬೇಕು. ಶಿಕ್ಷಕರು ಇಂಥಹ ಕಾರ್ಯಾಗಾರಗಳಿಂದ ತಮ್ಮ ಜ್ಞಾನವನ್ನು ವೃದ್ಧಿಸಿಕೊಂಡು ಸೃಜನಶೀಲತೆಯಿಂದ ಮಕ್ಕಳಿಗೆ ಪರಿಣಾಮಕಾರಿಯಾಗಿ ಬೋಧಿಸಬೇಕು. ವಿಷಯಗಳನ್ನು ಸರಳವಾಗಿ ಮನನ ಮಾಡಿಸಬೇಕು. ವಿಜ್ಞಾನದಲ್ಲಿ ಪ್ರಾಯೋಗಿಕ ಬೋಧನೆ ಬಹಳ ಮುಖ್ಯವಾಗಿದ್ದು, ಅವರಿಗೆ ಪ್ರಯೋಗದತ್ತ ವಿಶೇಷ ಆಸಕ್ತಿ ಬೆಳೆಯುವಂತೆ ಮಾಡಬೇಕು.
ಮಕ್ಕಳ ಬೌದ್ಧಿಕ ಬೆಳವಣಿಗೆಯ ಕುರಿತೂ ಕಾಳಜಿ ವಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ.ಜಿ.ಎಸ್.ಪ್ರಭುಸ್ವಾಮಿ, ಹರಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.