ಮೈಸೂರು ಅಭಿವೃದ್ಧಿಗೆ ಒತ್ತು: ಬೊಮ್ಮಾಯಿ

ದೇಶದ 5 ಟ್ರಿಲಿಯನ್‌ ಆರ್ಥಿಕತೆಗೆ ಕರ್ನಾಟಕದಿಂದ 1.5 ಟ್ರಿಲಿಯನ್‌ ಕೊಡುಗೆ ನೀಡಬೇಕು

Team Udayavani, Aug 12, 2022, 6:00 PM IST

ಮೈಸೂರು ಅಭಿವೃದ್ಧಿಗೆ ಒತ್ತು: ಬೊಮ್ಮಾಯಿ

ಮೈಸೂರು:ಮೈಸೂರಿನ ಸಮಗ್ರ ಅಭಿವೃದ್ಧಿ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೈಸೂರನ್ನು ಗುರುತಿಸುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಯುವಜನ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಮೈಸೂರಿನಲ್ಲಿ ಸೆಮಿಕಂಡೆಕ್ಟರ್‌ ಉತ್ಪಾದನಾ ಕೇಂದ್ರ, ಟೂರಿಸ್ಟ್‌ ಸರ್ಕಿಟ್‌ ಹಾಗೂ ಸಿಲ್ಕ್ ಟೆಕ್ಸ್‌ಟೈಲ್ಸ್‌ ಪಾರ್ಕ್‌ ಸೇರಿ ಮಹತ್ವದ ಕೈಗಾರಿಕೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರಿಂದ ಮೈಸೂರು ಆರ್ಥಿಕವಾಗಿ ಮತ್ತಷ್ಟು ವೇಗವಾಗಿ ಬೆಳೆಯಲಿದೆ. ಜತೆಗೆ ಅಂತಾರಾಷ್ಟ್ರಿಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ ಎಂದರು.

ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ: ಇಂದು ಮೈಸೂರಿನತ್ತ ಇಡೀ ದೇಶವೇ ತಿರುಗಿ ನೋಡುತ್ತಿದೆ. ನಾವು ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ಕೊಟ್ಟಿದ್ದೇವೆ. ವಿಮಾನ ನಿಲ್ದಾಣದ ವಿಸ್ತರಣೆ ಹಾಗೂ ಕೆ.ಆರ್‌. ಆಸ್ಪತ್ರೆಯ ನವೀಕರಣಕ್ಕೆ ಅನುದಾನ ನೀಡಿದ್ದೇವೆ. ಇದರ ಜೊತೆಗೆ ಮೈಸೂರಿನ ಪ್ರತಿಷ್ಠಿತ ಮಹಾ ರಾಣಿ ಮತ್ತು ಮಹಾರಾಜ ಕಾಲೇಜುಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಇದೇ ವರ್ಷ 1 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಹಾಸ್ಟೆಲ್‌ಗ‌ಳನ್ನು ನಿರ್ಮಾಣ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಒತ್ತು: ಮಹಾರಾಜ ಆಳ್ವಿಕೆಯಲ್ಲಿ ಹಳೇ ಮೈಸೂರು ಅಭಿವೃದ್ಧಿಯನ್ನು ಕಂಡಿದೆ. ಆದರೆ, ಉತ್ತರ ಕರ್ನಾಟಕ ಭಾಗ ಅಭಿವೃದ್ಧಿ ಯಾಗಬೇಕಿದೆ. ಈ ನಿಟ್ಟಿನಲ್ಲಿ ಸಮಗ್ರ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಅನಾಮಧೇಯರಿಗೆ ಅರ್ಪಣೆ: ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಹೋರಾಟ ನಡೆಸಿದ್ದಾರೆ. ಆದರೆ ಕೆಲವರ ಹೆಸರುಗಳನ್ನು ಮಾತ್ರ ನಾವು ಹೇಳುತ್ತೇವೆ. ಉಳಿದ ಅನಾಮಧೇಯರುಗಳ ಹೆಸರು ಇಲ್ಲ. ಈ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಅನಾಮಧೇಯರಿಗೆ ಅರ್ಪಿಸಲಾಗುವುದು. ಅನ್ನ ನೀಡುವ ರೈತ, ದೇಶಕ್ಕಾಗಿ ಹಗಲಿರುಳು ಶ್ರಮಿಸುವ ಸೈನಿಕ, ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ದುಡಿಯುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು ಹಾಗೂ ಭವಿಷ್ಯದ ವಿದ್ಯಾರ್ಥಿ ಸಮೂಹಕ್ಕೆ ನನ್ನ ಸಲಾಂ ಎಂದರು.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಈ 75 ವರ್ಷಗಳಲ್ಲಿ ಅನೇಕ ಸಾಧನೆ ಮಾಡಿದೆ. ಸಾಧಿಸಬೇಕಾದ್ದು ಬಹಳ ಇದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ ಭಾರತ ಯೋಜನೆ ಮೂಲಕ ಹಲವು ಕಾರ್ಯಕ್ರಮ ರೂಪಿಸಿದ್ದಾರೆ. ಅಮೃತ ಮಹೋತ್ಸವದ ಈ ಸಂದರ್ಭ ಮುಂದಿನ 25 ವರ್ಷಗಳಲ್ಲಿ ದೇಶವನ್ನು ವಿಶ್ವದ ನಂ.1 ರಾಷ್ಟ್ರವಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪವನ್ನು ಯಶಸ್ಸುಗೊಳಿಸಲು ಪಣತೊಡಬೇಕಿದೆ. ನವ ಕರ್ನಾಟಕದಿಂದ ನವ ಭಾರತ
ನಿರ್ಮಿಸಬೇಕು. ದೇಶದ 5 ಟ್ರಿಲಿಯನ್‌ ಆರ್ಥಿಕತೆಗೆ ಕರ್ನಾಟಕದಿಂದ 1.5 ಟ್ರಿಲಿಯನ್‌ ಕೊಡುಗೆ ನೀಡಬೇಕು ಎಂದು ವಿವರಿದರು.

ಸ್ವಾತಂತ್ರ್ಯ ನಂತರ ಜನಿಸಿದ ನಾವೆಲ್ಲರೂ ಅನುಭವಿಸುತ್ತಿರುವ ಸ್ವಾತಂತ್ರ್ಯ ಸುಲಭವಾಗಿ ಬಂದಿಲ್ಲ. ಮಹಾನ್‌ ನಾಯಕರ ಹೋರಾಟದ ತ್ಯಾಗ, ಬಲಿದಾನದಿಂದ ಸಿಕ್ಕಿದೆ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಸಾಹುಕಾರ್‌ ಚನ್ನಯ್ಯ, ಬಾಲಗಂಗಾಧರ್‌ ತಿಲಕ್‌, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಸೇರಿ ಅನೇಕರು ಹೋರಾಡಿದ್ದಾರೆ ಎಂದರು.

ಮೈಸೂರು ಮಾನಸಗಂಗೋತ್ರಿ ಯಲ್ಲಿರುವ ಶಕ್ತಿ ಇಂದು ಇಡೀ ಭಾರತ ದೇಶಕ್ಕೆ ಕೇಳಿಸಿದೆ. ಇಂದು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಿಮ್ಮೆಲ್ಲರನ್ನೂ ನೋಡಿ ಸಂತೋಷ ಇಮ್ಮಡಿಯಾಗಿದೆ. ನನ್ನ ಶಕ್ತಿ ಇಮ್ಮಡಿಯಾಗಿದೆ ಎಂದರು. ಇಲ್ಲಿರುವ ಯುವ ಶಕ್ತಿಯನ್ನು ಸದುಪಯೋಗ ಮಾಡಿಕೊಂಡರೆ ಮುಂದಿನ 25 ವರ್ಷದಲ್ಲಿ ಭಾರತವನ್ನು ಶ್ರೇಷ್ಠ ಭಾರತ ಮಾಡಿ ಇಡೀ ವಿಶ್ವದಲ್ಲಿ ಯೇ ಭಾರತವನ್ನು ನಂಬರ್‌ ವನ್‌ ದೇಶ ಮಾಡಲು ನಮಗೆ ಶಕ್ತಿಯಾಗಿ ನೀವಿದ್ದೀರಿ ಎಂಬ ಭರವಸೆ ಮೂಡಿದೆ ಎಂದರು.

ನಟ ಯಶ್‌ ಮಾತನಾಡಿ, ಸಾಮಾನ್ಯ ತಿರುವುಗಳು, ಘಟನೆಗಳು ವ್ಯಕ್ತಿಯಲ್ಲಿ ದೊಡ್ಡ ಬದಲಾವಣೆ ತರುತ್ತವೆ. ಸಾಮಾನ್ಯ ವಿಷಯಗಳಿಂದಲೇ ಮನುಷ್ಯ ಏನನ್ನಾದರೂ ಸಾಧಿಸ ಬಹುದು. ಇದಕ್ಕೆ ಆತ್ಮವಿಶ್ವಾಸವಿ ರಬೇಕು. ಸಕಾರಾತ್ಮಕ ಶಕ್ತಿಗಳಿಂದಲೇ ಮುನ್ನುಗ್ಗಬೇಕು. ಒಳ್ಳೆಯದರ ಬಗ್ಗೆ ಮಾತನಾಡಿದರೆ, ಯೋಚಿಸಿದರೆ ಯಶಸ್ಸು ಜೊತೆಗೆ ಇರಲಿದೆ ಎಂದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ್‌, ಸಂಸದ ಪ್ರತಾಪ್‌ ಸಿಂಹ, ಶಾಸಕರಾದ ಜಿ.ಟಿ. ದೇವೇಗೌಡ, ಎಸ್‌.ಎ. ರಾಮದಾಸ್‌, ಎಲ್‌. ನಾಗೇಂದ್ರ, ನಿರಂಜನ್‌, ಎಂಎಲ್‌ಸಿ ಎಚ್‌. ವಿಶ್ವನಾಥ್‌, ಮೇಯರ್‌ ಸುನಂದಾ ಫಾಲನೇತ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಇತರರು ಇದ್ದರು.

ಟಾಪ್ ನ್ಯೂಸ್

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.