ಮೌಡ್ಯತೆ ಬಿಟ್ಟು ವೈಜ್ಞಾನಿಕ ವಿಚಾರಗಳಿಗೆ ಒತ್ತು ನೀಡಿ

Team Udayavani, Jan 20, 2018, 11:50 AM IST

m1-moudhya.jpg

ಮೈಸೂರು: ನಾಡಿನ ಸಂಸ್ಕೃತಿ ಉಳಿವಿಗೆ ಶ್ರಮಿಸಿದ ಹಲವಾರು ಮಹನೀಯರ ಜಯಂತಿಯನ್ನು ಸರ್ಕಾರ ಆಚರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಶಾಸಕ ಎಂ.ಕೆ.ಸೋಮಶೇಖರ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಮಹಾಯೋಗಿ ವೇಮನ ಜಯಂತ್ಯುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಆಯೋಜಿಸಿದ್ದ ಮಹಾ ಯೋಗಿ ವೇಮನ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ಪರಿವರ್ತನೆಗೆ ಒತ್ತುಕೊಟ್ಟ ಅನೇಕ ದಾರ್ಶನಿಕರ ಜಯಂತಿಗಳನ್ನು ಸರ್ಕಾರ ಆಚರಣೆ ಮಾಡುತ್ತಿದ್ದು, ಒಬ್ಬೊಬ್ಬ ದಾರ್ಶನಿಕರ ಹಿನ್ನೆಲೆಯೂ ರೋಚಕವಾಗಿದೆ. ರಾಮಾಯಣ ಮಹಾಕಾವ್ಯ ಕೊಟ್ಟ ವಾಲ್ಮೀಕಿಯ ಹಿನ್ನೆಲೆಯನ್ನು ನೋಡಿದರೆ ಆತ ಯಾವ ರೀತಿ ಪರಿವರ್ತನೆಯಾದ ಎಂಬುದು ಗೊತ್ತಾಗುತ್ತದೆ ಎಂದರು.

ಅದೇ ರೀತಿಯಲ್ಲಿ ಹೇಮರಡ್ಡಿ ಮಲ್ಲಮ್ಮನ ಮೈದುನನಾದ ವೇಮನ ಕೂಡ ಆರಂಭದಲ್ಲಿ ದುರಾಚಾರಿ, ವ್ಯಭಿಚಾರಿಯಾಗಿ ವೇಶ್ಯೆಯರ ಸಂಘದಲ್ಲಿ ಕಾಲ ಕಳೆಯುತ್ತಿದ್ದವನು, ವೇಶ್ಯೆಯ ಆಸೆ ಈಡೇರಿಸಲು ಅತ್ತಿಗೆ ಹೇಮ ರಡ್ಡಿ ಮಲ್ಲಮ್ಮನ ಮೂಗುತಿಯನ್ನೇ ಕೇಳಿದ ವೇಮನ,

ಅತ್ತಿಗೆಯ ಸಲಹೆಯಂತೆ ಅವಳ ಮೂಗುತಿ ಪಡೆದು ವೇಶ್ಯೆಯ ಬಳಿ ಹೋಗಿ ಮೂಗುತಿ ಕೊಟ್ಟು ವೇಶ್ಯೆಯನ್ನು ಸಂಪೂರ್ಣ ಬೆತ್ತಲಾಗಿ ನೋಡಿದ ಮೇಲೆ ಮನಃ ಪರಿವರ್ತನೆಯಾಗಿ, ಎಲ್ಲವನ್ನೂ ಬಿಟ್ಟು ಬೆತ್ತಲೆಯಾಗಿ ಸುತ್ತುತ್ತ, ದಾರ್ಶನಿಕನಾಗಿ ಸಮಾಜದಲ್ಲಿನ ಮೌಡ್ಯತೆ, ಕಂದಾಚಾರಗಳ ಪರಿವರ್ತನೆಗೆ ಶ್ರಮಿಸುತ್ತಾನೆ ಎಂದು ಹೇಳಿದರು.
ಮೌಡ್ಯಯದಿಂದ ಹೊರಬಂದಿಲ್ಲ: 

ಸಾಕಷ್ಟು ಮಹನೀಯರು ಸಮಾಜದಲ್ಲಿನ ಮೌಡ್ಯತೆ ವಿರುದ್ಧ ಹೋರಾಡಿದರು. ರಾಜ್ಯ ಸರ್ಕಾರ ಕೂಡ ಮೌಡ್ಯ ಪ್ರತಿಬಂಧಕ ಕಾಯ್ದೆ ತಂದಿದೆ. 21ನೇ ಶತಮಾನದಲ್ಲಿದ್ದರೂ ನಾವು ಇಂದಿಗೂ ಮೌಡ್ಯದಿಂದ ಹೊರಬರಲಾಗುತ್ತಿಲ್ಲ. ಭಕ್ತಿಯ ಹೆಸರಲ್ಲಿ ಇಂದಿಗೂ ಮೌಡ್ಯತೆ ಮುಂದುವರಿದಿದೆ.

ಅದರಿಂದ ಹೊರಬರಲು ಸಮಾಜ ಅವಕಾಶ ನೀಡುವುದೇ ಇಲ್ಲ. ಮೌಡ್ಯತೆ ವಿರೋಧಿಸಿ, ಜಾತ್ಯತೀತತೆ ಬಗ್ಗೆ ಹೇಳುವವರನ್ನು ಅಪಮಾನಿಸುವ ಕೆಲಸ ನಡೆಯುತ್ತಿದೆ. ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅಂಥವರೇ ಜಾತ್ಯತೀತರಿಗೆ ಅಪ್ಪ-ಅಮ್ಮ ಯಾರು ಎಂದು ಪ್ರಶ್ನಿಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯಾವಂತರಿಂದಲೂ ಮೌಡ್ಯತೆ: ವಾಹಿನಿಗಳಲ್ಲಿ ಜ್ಯೋತಿಷ್ಯವನ್ನು ಪ್ರಸಾರ ಮಾಡಲಾಗುತ್ತದೆ. ವಿದ್ಯಾವಂತರಾದವರೂ ಭವಿಷ್ಯ ಕೇಳುವ, ರಾಹುಕಾಲ, ಗುಳಿಕಕಾಲ ನಂಬುವ ಸ್ಥಿತಿಗೆ ಬಂದಿದ್ದಾರೆ. ರಾಹುಕಾಲ, ಗುಳಿಕ ಕಾಲ ಎಂಬುದಿಲ್ಲ.

ಎಲ್ಲ ಕಾಲವು ಒಳ್ಳೆಯದೇ, ಗ್ರಹಣದಿಂದ ಮನುಷ್ಯನ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಅಮವಾಸ್ಯೆ, ಹುಣ್ಣಿಗೆ ಎಂಬುದು ಕೂಡ ಸುಳ್ಳು ಎಂದ ಅವರು, ದೇವಸ್ಥಾನಗಳು ಬೇಡದ ವಿಚಾರಗಳನ್ನು ತುಂಬುತ್ತಾ ಶೋಷಣಾಕೇಂದ್ರಗಳಾಗಿವೆ. ಹೀಗಾಗಿ ಸಮಾಜ ವೈಜ್ಞಾನಿಕ ವಿಚಾರಗಳಿಗೆ ಒತ್ತು ನೀಡಬೇಕು ಎಂದರು.

ಕಾವ್ಯಕ್ಕೆ ಭಾಷೆ ಹಂಗಿಲ್ಲ: ಮುಖ್ಯ ಭಾಷಣ ಮಾಡಿದ ಸಾಹಿತಿ ಉಷಾ ನರಸಿಂಹನ್‌, ಕವಿ ಮತ್ತು ಕಾವ್ಯಕ್ಕೆ ಭಾಷೆಯ ಹಂಗಿಲ್ಲ. ಇವೆರಡು ಭಾಷಾತೀತ, ಸೀಮಾತೀತ. ಎಲ್ಲ ಭಾಷೆಯ ಪುಸ್ತಕಗಳೂ ನಮ್ಮ ಕೈಯಲ್ಲಿ ಓದಿಸಿಕೊಳ್ಳುತ್ತವೆ ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚನ್ನಪ್ಪ, ಕನ್ನಡ ಚಳವಳಿಗಾರರಾದ ತಾಯೂರು ವಿಠಲಮೂರ್ತಿ, ಎಂ.ಬಿ.ವಿಶ್ವನಾಥ್‌, ಪರಮೇಶ್ವರಪ್ಪ, ರವಿಶಂಕರ್‌ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಗಣ್ಯರ ಗೈರು, ಸಭಿಕರ ಕೊರತೆ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಮಹಾಯೋಗಿ ವೇಮನ ಜಯಂತ್ಯುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಾ ಯೋಗಿ ವೇಮನ ಜಯಂತಿ ಕಾರ್ಯಕ್ರಮ ಗಣ್ಯರು ಗೈರು, ಸಭಿಕರ ಕೊರತೆಯ ನಡುವೆ ನಡೆಯಿತು.

ಸರ್ಕಾರಿ ಕಾರ್ಯಕ್ರಮವಾದ್ದರಿಂದ ಶಿಷ್ಠಾಚಾರ ಪಾಲನೆಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರಿಂದ ಕಾರ್ಯಕ್ರಮ ಉದ್ಘಾಟನೆ, ಸ್ಥಳೀಯ ಶಾಸಕ ವಾಸು ಅವರ ಅಧ್ಯಕ್ಷತೆಯಲ್ಲಿ 31 ಜನರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿತ್ತು. ಆದರೆ, ಬಂದವರು ಶಾಸಕ ಎಂ.ಕೆ.ಸೋಮಶೇಖರ್‌ ಮತ್ತು ಮುಖ್ಯ ಭಾಷಣಕ್ಕೆ ಆಹ್ವಾನಿಸಿದ್ದ ಸಾಹಿತಿ ಉಷಾ ನರಸಿಂಹನ್‌ ಮಾತ್ರ. ಇನ್ನು 100 ಆಸನಗಳ ಸಾಮರ್ಥ್ಯದ ಕಿರು ರಂಗಮಂದಿರದಲ್ಲಿ ಬೆರಳೆಣಿಕೆಯ ಸಭಿಕರಿದ್ದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.