ಬ್ಯಾಂಕ್‌ಗಳ ವಿಲೀನ ಖಂಡಿಸಿ ನೌಕರರ ಪ್ರತಿಭಟನೆ


Team Udayavani, Oct 23, 2019, 3:00 AM IST

bankgala

ಮೈಸೂರು: ಕೇಂದ್ರ ಸರ್ಕಾರ ಬ್ಯಾಂಕ್‌ಗಳನ್ನು ವಿಲೀನಗೊಳಿಸುತ್ತಿರುವುದನ್ನು ಖಂಡಿಸಿ ಮೈಸೂರು ಜಿಲ್ಲಾ ಬ್ಯಾಂಕ್‌ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮಂಗಳವಾರ ಹುಣಸೂರು ರಸ್ತೆಯ ರಿಲಯನ್ಸ್‌ ಟ್ರೆಂಡ್ಸ್‌ ಕಾರ್ಪೊರೇಷನ್‌ ಬ್ಯಾಂಕ್‌ ವಲಯ ಕಚೇರಿಯ ಮುಂಭಾಗ ಸಮಾವೇಶಗೊಂಡ ಬ್ಯಾಂಕ್‌ ನೌಕರರು ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಘೋಷಣೆ ಕೂಗಿದರು.

ನಮ್ಮದು ಹಳ್ಳಿಗಳ ದೇಶ. ಆದರೆ ನಮ್ಮಲ್ಲಿ ಬ್ಯಾಂಕಿಂಗ್‌ ಸೇವೆ ಇನ್ನೂ ಸಾವಿರಾರು ಹಳ್ಳಿಗಳಿಗೆ ತಲುಪಿಲ್ಲ. ಇಂದಿಗೂ ಸಾವಿರಾರು ಜನ ಬ್ಯಾಂಕಿಂಗ್‌ ಸೇವೆಗಳಿಂದ ವಂಚಿತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬ್ಯಾಂಕುಗಳ ವಿಸ್ತರಣೆ ಮುಖ್ಯವೇ ಹೊರತು ವಿಲೀನವಲ್ಲ.

ದೇಶದ ಜನಸಂಖ್ಯೆಗೆ ಹೋಲಿಸಿದರೆ ಬ್ಯಾಂಕುಗಳ ಪ್ರಮಾಣ ಕಡಿಮೆ. ಹಾಗಾಗಿ ವಿಲೀನಕ್ಕೆ ನಮ್ಮ ವಿರೋಧವಿದೆ. ಬ್ಯಾಂಕಿಂಗ್‌ ಸೇವೆ ಎಲ್ಲ ಸ್ತರದ ಜನರನ್ನು ತಲುಪಿಲ್ಲ ಎಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರ ಜನಧನ ಯೋಜನೆ ಜಾರಿಗೊಳಿಸಿದ್ದು, ಇದೀಗ ಜನಧನ ಯೋಜನೆ-2 ಜಾರಿಗೊಳಿಸಿದೆ. ಈ ಕ್ರಮದಿಂದ ಬ್ಯಾಂಕಿಂಗ್‌ ಸೇವೆ ಕುಂಠಿತವಾಗಲಿದ್ದು, ವಿಲೀನ ಅನುಚಿತ ಎಂದು ಕಿಡಿ ಕಾರಿದರು.

ಹಲವು ಬ್ಯಾಂಕ್‌ಗಳನ್ನು ವಿಲೀನಗೊಳಿಸಿ ದೊಡ್ಡ ಬ್ಯಾಂಕಾಗಿ ಪರಿವರ್ತಿಸಿ ಹೆಚ್ಚುತ್ತಿರುವ ದೊಡ್ಡ ಸಾಲಗಳ ಬೇಡಿಕೆ ಪೂರೈಸುವುದು ವಿಲೀನದ‌ ಹಿಂದಿನ ಉದ್ದೇಶ ಎಂಬುದು ಸರ್ಕಾರದ ನಿಲುವು. ಆದರೆ, ಸಾಲ ದೊಡ್ಡದಾದಂತೆ ಅಪಾಯವೂ ಹೆಚ್ಚು. ಈಗಾಗಲೇ ದೊಡ್ಡ ದೊಡ್ಡ ಸಾಲುಗಳು ಮರುಪಾವತಿಯಾಗದೇ ಬ್ಯಾಂಕಿಂಗ್‌ ಕ್ಷೇತ್ರ ನಷ್ಟದಲ್ಲಿದೆ. ಅಲ್ಲದೇ ಕಳೆದ ವರ್ಷ 6 ಬ್ಯಾಂಕುಗಳನ್ನು ಎಸ್‌ಬಿಐನೊಂದಿಗೆ ವಿಲೀನಗೊಳಿಸಲಾಯಿತು.

ಆದರೆ, ಎಸ್‌ಬಿಐ ದೊಡ್ಡದಾಗುವುದರ ಬದಲಿಗೆ ಅದರ ಸಮಸ್ಯೆಗಳು ದೊಡ್ಡದಾದವು. ಬ್ಯಾಂಕುಗಳು ಎದುರಿಸುತ್ತಿರುವ ಅನುತ್ಪಾದಕ ಸಾಲಗಳ ಸಮಸ್ಯೆ ಪರಿಹರಿಸಲು ಅಂತಹ ಸಾಲಗಳ ವಸೂಲಾತಿಗೆ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕೇ ವಿನಃ ವಿಲೀನ ಪರಿಹಾರವಲ್ಲ. ಅಲ್ಲದೇ ವಿಲೀನದಿಂದ ಬ್ಯಾಂಕ್‌ ಶಾಖೆಗಳು ಮುಚ್ಚುತ್ತವೆ. ನಮಗೆ ಬೇಕಿರುವುದು ಶಾಖೆ ಹೆಚ್ಚಳವೇ ಹೊರತು ಮುಚ್ಚುವುದಲ್ಲ.

ಇದರಿಂದಾಗಿ ಹೆಚ್ಚುವರಿ ನೌಕರರ ಸಮಸ್ಯೆಯೂ ಉದ್ಬವಿಸುತ್ತದೆ. ಇದು ನೌಕರಿ ಭದ್ರತೆಗೆ ಅಪಾಯ. ಹೀಗಾಗಿ ಸರ್ಕಾರ ಬ್ಯಾಂಕ್‌ ವಿಲೀನ ನಿಲ್ಲಿಸಿ ಅನುತ್ಪಾದಕ ಸಾಲಗಳ ಮರುಪಾವತಿಯನ್ನು ತೀವ್ರಗೊಳಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮೈಸೂರು ಜಿಲ್ಲಾ ಬ್ಯಾಂಕ್‌ ನೌಕರರ ಸಂಘದ ಕಾರ್ಯದರ್ಶಿ ಎಚ್‌.ಬಾಲಕೃಷ್ಣ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.