ಮನುಷ್ಯನಲ್ಲಿ ಪರಿಸರ ಪ್ರಜ್ಞೆ ಬಿತ್ತುವ ಅಗತ್ಯವಿದೆ


Team Udayavani, Jun 7, 2022, 3:27 PM IST

Untitled-1

ಪಿರಿಯಾಪಟ್ಟಣ: ಮನುಷ್ಯನಿಗೆ ಪರಿಸರದ ಪ್ರಜ್ಞೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರ ದಿನ ಆಚರಣೆಗೆ ಹೆಚ್ಚು ಹೊತ್ತು ನೀಡಬೇಕಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಧೀಶ ಎ.ಸಮೀವುಲ್ಲಾ ಹೇಳಿದರು.

ಪಟ್ಟಣದ ಯಜಮಾನ್‌ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯರಾದವರು ನಮ್ಮ ಸುತ್ತಮುತ್ತಲ ಪರಿಸರವನ್ನು ಉತ್ತಮವಾಗಿಟ್ಟುಕೊಳ್ಳುವ ಜವಾಬ್ದಾರಿ ಇರಬೇಕು. ಸ್ವಾರ್ಥಕ್ಕಾಗಿ ಮನುಷ್ಯ ಇಂದು ಪರಿಸರವನ್ನು ನಾಶಮಾಡುತ್ತಿದ್ದಾನೆ. ಇಂಥ ಸಂದರ್ಭದಲ್ಲಿ ಪರಿಸರ ದಿನಾಚರಣೆಯ ಮೂಲಕ ಮರಗಿಡಗಳನ್ನು ನೆಟ್ಟು ಪರಿಸರದ ಅಭಿವೃದ್ಧಿಗೆ ಮುಂದಾಗಬೇಕು. ಈಗಾಗಲೇ ಯುವಕರಲ್ಲಿ ಇದರ ಬಗ್ಗೆ ಕಾಳಜಿ ಮೂಡುತ್ತಿದೆ ಆದಾಗಿಯೂ ಹೆಚ್ಚಿನ ಮಟ್ಟದಲ್ಲಿ ಇಂಥ ಕಾರ್ಯಕ್ರಮಗಳು ನಡೆದು ಪರಿಸರ ಅಭಿವೃದ್ಧಿಯಾಗಬೇಕು ಎಂದು ತಿಳಿಸಿದರು.

ನ್ಯಾಯಾಧೀಶರಾದ ಎಂ.ಆರ್‌.ಯೋಗೇಶ್‌ ಮಾತನಾಡಿ, ಇಂದಿನ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸಬೇಕು, ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಪರಿಸರದ ಪಾಠಗಳು ಮತ್ತು ಅದರ ಅವಶ್ಯಕತೆ ಅದರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು. ವಲಯ ಅರಣ್ಯಾಧಿಕಾರಿ ರತನ್‌ಕುಮಾರ್‌ ಮಾತನಾಡಿ, ಮನುಕುಲದ ಉಳಿವಿಗಾಗಿ ಪರಿಸರ ಅತ್ಯಗತ್ಯ, ಇಡೀ ಸೌರಮಂಡಲದಲ್ಲಿ ಮನುಷ್ಯ ವಾಸಿಸಲು ಯೋಗ್ಯವಾದ ಪರಿಸರ ಇರುವುದು ಭೂಮಿಯಲ್ಲಿ ಮಾತ್ರ ಆದ್ದರಿಂದ ಇದನ್ನು ಸಂರಕ್ಷಣೆ ಮಾಡಬೇಕು. ನೆಲ-ಜಲವನ್ನು ಉಳಿಸಿ ಮುಂದಿನ ಪೀಳಿಗೆಗೆ ಅನುಕೂಲಕರ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಬೀಜ ಬಿತ್ತೋಣ ಅಭಿಯಾನವನ್ನು ಆರಂಭಿಸಿದ್ದು ಇದೇ ಕಾರ್ಯಕ್ರಮದಲ್ಲಿ ತೇಗ ಸಸಿಗಳನ್ನು ಬಿತ್ತುವ ಮೂಲಕ ಚಾಲನೆ ನೀಡಲಾಗಿದೆ ಜೂ.5 ರಿಂದ 12ರ ವರೆಗೆ ಈ ಅಭಿಯಾನ ಕೈಗೊಳ್ಳಳಲಾಗಿದ್ದು ಇದಕ್ಕೆ ಎಲ್ಲಾ ಸಂಘಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ಪರಿಸರ ದಿನಾಚಾರಣೆ ಅಂಗವಾಗಿ ನಡೆದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿ ಗಳಿಗೆ ನ್ಯಾಯಾಧೀಶರು ಪ್ರಶಸ್ತಿ ಪತ್ರ ವಿತರಣೆ ಮಾಡಿದರು. ಶಾಲಾ ಆವರಣದಲ್ಲಿ ನ್ಯಾಯಾಧೀಶರು ಮಕ್ಕಳೊಂದಿಗೆ ಸೇರಿ ತೇಗದ ಮರದ ಬೀಜ ಗಳನ್ನು ಬಿತ್ತುವ ಮೂಲಕ ಅರಣ್ಯ ಇಲಾಖೆಯ ಅಭಿಯಾನಕ್ಕೆ ಚಾಲನೆ ನೀಡಿದರು.

ಯಜಮಾನ್‌ ಫೌಂಡೇಶನ್‌ ಅಧ್ಯಕ್ಷ ಪಿ.ಕೆ. ನಾಗಪ್ಪ, ವಕೀಲರಾದ ಬಿ.ಎನ್‌.ಹರೀಶ್‌, ಶ್ರೀನಿವಾಸ್‌, ಅಕ್ಷರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಧನಂಜಯ, ಯಜಮಾನ್‌ ಪಬ್ಲಿಕ್‌ ಶಾಲೆಯ ಮುಖ್ಯ ಶಿಕ್ಷಕ ಜಗದೀಶ್‌, ಯಜಮಾನ್‌ ಫೌಂಡೇಶನ್‌ ಟ್ರಸ್ಟಿ ನಾಗಮಣಿ, ಡಿಆರ್‌ಎಫ್ ಒಗಳಾದ ಪಾರ್ವತಿ, ಮಧುಸೂಧನ್‌, ಮಹೇಶ್‌, ಅರಣ್ಯ ರಕ್ಷಕರಾದ ಪೃಥ್ವಿ, ಸತೀಶ್‌, ಯಲಗೂರೇಶ್‌, ರಾಜಪ್ಪ ಇತರರು ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.