ಪ್ರವಾಸಿಗರಿಗೆ ಪರಿಸರಸ್ನೇಹಿ ಬಟ್ಟೆ ಬ್ಯಾಗ್ ವಿತರಣೆ
Team Udayavani, Jun 6, 2018, 2:41 PM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಒಳ ಮತ್ತು ಹೊರ ಭಾಗದ ಸುತ್ತಲಿನಲ್ಲಿ ಪ್ಲಾಸ್ಟಿಕ್ ಮುಕ್ತ ಸ್ವತ್ಛ ಉದ್ಯಾನವನಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಆರ್.ರವಿಶಂಕರ್ ತಿಳಿಸಿದರು.
ಉದ್ಯಾನದ ವಿವಿಧ ವಲಯಗಳಲ್ಲಿ ವಿಶ್ವ ಪರಿಸರ ಪ್ರಯುಕ್ತ ಪರಿಸರಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರೊಟ್ಟಿಗೆ ವೀರನಹೊಸಹಳ್ಳಿ, ಮತ್ತಿಗೋಡು, ನಾಣಚ್ಚಿಗೇಟ್, ಸುಂಕದಕಟ್ಟೆ ಗೇಟ್ಗಳಲ್ಲಿ ಸಫಾರಿ ಹಾಗೂ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಇಲಾಖೆ ವತಿಯಿಂದ ಪರಿಸರಸ್ನೇಹಿ ಬಟ್ಟೆ ಬ್ಯಾಗ್ಗಳನ್ನು ವಿತರಿಸಲಾಗುವುದು.
ಪ್ರವಾಸಿಗರು ಬಳಸುವ ಪ್ಲಾಸ್ಟಿಕ್ ಮತ್ತಿತರ ವಸ್ತುಗಳನ್ನು ಉದ್ಯಾನದೊಳಗೆ ಹಾಗೂ ಹೊರಗೆ ಎಸೆಯದೆ ವಾಪಾಸ್ ಚೀಲದಲ್ಲಿ ಕೊಂಡೊಯ್ಯಬೇಕಿದೆ. ಈ ಬ್ಯಾಗ್ಗೆ ನಿಗಧಿತ ಶುಲ್ಕ ವಿತರಿಸಲಾಗುವುದು. ಇದನ್ನು ಪ್ರಾಯೋಗಿಕವಾಗಿ ಸುಂಕದಕಟ್ಟೆ, ವೀರನಹೊಸಳ್ಳಿ, ನಾಣಚ್ಚಿಗೇಟ್ಗಳಲ್ಲಿ ಜಾರಿಗೆ ತರಲಾಗುವುದು. ಮುಂದಿನ ದಿನಗಳಲ್ಲಿ ಎಲ್ಲೆಡೆಗೆ ವಿಸ್ತರಿಸಲಾಗುವುದೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.