ಬಿಎಸ್‌ವೈ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಆರೋಪ
Team Udayavani, Mar 15, 2017, 12:30 PM IST
ಮೈಸೂರು: ನಂಜನಗೂಡು ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರೊಬ್ಬರಿಗೆ ಹಣ ನೀಡುವ ಮೂಲಕ ನೀತಿ ಸಂಹಿತೆ ಉಲ್ಲಂ ಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕ್ಷೇತ್ರ ವ್ಯಾಪ್ತಿಯ ಹುಲ್ಲಹಳ್ಳಿಯಲ್ಲಿ ಪ್ರಚಾರ ಸಭೆ ಮುಗಿಸಿ ಹೊರಡಲು ಕಾರನ್ನೇರಿದ ಯಡಿಯೂರಪ್ಪ ಅವರನ್ನು ಕಾರ್ಯಕರ್ತನೊಬ್ಬ ಹಣಕ್ಕಾಗಿ ಕೈಚಾಚಿದಾಗ ಕಾರಿನ ಗಾಜು ಇಳಿಸಿ ಹಣ ನೀಡಿದ್ದಾರೆ ಎನ್ನಲಾಗಿದೆ.
ಸಾಕ್ಷ್ಯ ಇಲ್ಲ: ಎಲ್ಲ ಚುನಾವಣಾ ಪ್ರಚಾರ ಸಭೆಗಳ ವೀಡಿಯೋ ಚಿತ್ರೀಕರಣ ಮಾಡಿಸಲಾಗುತ್ತಿದೆ. ಆದರೆ, ಯಡಿಯೂರಪ್ಪ ಹಣ ನೀಡಿದ ಬಗ್ಗೆ ನಮ್ಮ ಬಳಿ ಯಾವುದೇ ಸಾಕ್ಷ್ಯಧಾರವಿಲ್ಲ. ಹಣ ನೀಡುತ್ತಿರುವ ಬಗ್ಗೆ ವೀಡಿಯೋ ಅಥವಾ ಛಾಯಾಚಿತ್ರ ಕೊಟ್ಟರೆ ದೂರು ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿರುವ ಚುನಾವಣಾಧಿಕಾರಿ ಜಿ.ಜಗದೀಶ್, ಇನ್ನು ನಂಜನಗೂಡಿನ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಿ.ಎಂ.ಇಬ್ರಾಹಿಂ ಅವರು ಪ್ರಧಾನಿ ಹಾಗೂ ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ತಮ್ಮ ಗಮನಕ್ಕೆ ಬಂದಿಲ್ಲ ಎಂದರು.
ನೀತಿ ಸಂಹಿತೆ ಉಲ್ಲಂಘನೆ: ನೋಟಿಸ್: ನಂಜನಗೂಡು ಉಪಚುನಾವಣೆಯ ಪ್ರಚಾರ ಸಭೆಗಳಿಗೆ ಅನುಮತಿ ಪಡೆಯದೆ ವಾಹನ ಬಳಸಿದ ಸಂಬಂಧ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.
ಮಾ.12ರಂದು ನಂಜನಗೂಡಿನಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚಾರ ಸಭೆಗೆ ಹಾಗೂ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾ.12, 13ರಂದು ನಂಜನಗೂಡು ಕ್ಷೇತ್ರದಲ್ಲಿ ನಡೆಸಿದ ಚುನಾವಣಾ ಪ್ರಚಾರ ಸಭೆಗಳ ಸಂಬಂಧ ಬಳಸಲಾದ ವಾಹನಗಳಿಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದ್ದು, 24 ಗಂಟೆಯೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.