ರಾಜ್ಯಾದ್ಯಂತ ಸ್ಮಾರ್ಟ್‌ಗ್ರಿಡ್ ವ್ಯವಸ್ಥೆ ವಿಸ್ತರಣೆ
Team Udayavani, Jul 26, 2017, 12:10 PM IST
ಮೈಸೂರು: ದೇಶದಲ್ಲೇ ಪ್ರಥಮಬಾರಿಗೆ ಪ್ರಾಯೋಗಿಕವಾಗಿ ಕೈಗೊಂಡಿರುವ ಸ್ಮಾರ್ಟ್‌ಗ್ರಿಡ್ ಯೋಜನೆ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಮೈಸೂರು ಸೇರಿದಂತೆ ರಾಜ್ಯದ ಇನ್ನಿತರ ನಗರಗಳಿಗೂ ವಿಸ್ತರಿಸಲು ಕ್ರಮಕೈಗೊಳ್ಳುವುದಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು. ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಕಚೇರಿಗೆ ಭೇಟಿ ನೀಡಿ ಪ್ರಾಯೋಗಿಕ ಸ್ಮಾರ್ಟ್‌ಗ್ರಿಡ್ ಯೋಜನೆಯ ಪ್ರಗತಿ ಪರಿಶೀಲಿಸಿ, ಯೋಜನೆಯ ಕಾರ್ಯದ ಬಗ್ಗೆ ಮಾಹಿತಿ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಳೆದ ವರ್ಷ ಕೇಂದ್ರ ಸರ್ಕಾರದೊಂದಿಗೆ ಮಾಡಿಕೊಂಡಿರುವ ಒಪ್ಪಂದ ದಂತೆ ಸ್ಮಾರ್ಟ್‌ಗ್ರಿಡ್ ಯೋಜನೆ ಆರಂಭಿಸಲಾಗಿದ್ದು, ಅದರಂತೆ ಮೊದಲ ಬಾರಿಗೆ ಮೈಸೂರಿನಲ್ಲಿ ಸ್ಮಾರ್ಟ್‌ಗ್ರಿಡ್ ಯೋಜನೆಯನ್ನು ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸ್ಮಾರ್ಟ್‌ಗ್ರಿಡ್ ಯೋಜನೆಯನ್ನು ಮೈಸೂರಿನ ಜತೆಗೆ ಹುಬ್ಬಳ್ಳಿ, ಬೆಂಗಳೂರು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಗೆ ವಿಸ್ತರಿಸಲು ಸರ್ಕಾರ ಮುಂದಾಗಿದೆ ಎಂದರು.
ಮೈಸೂರಿನಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಆರಂಭಿಸಿರುವ ಸ್ಮಾರ್ಟ್‌ಗ್ರಿಡ್ ಯೋಜನೆಯಡಿ ವಿವಿ ಮೊಹಲ್ಲಾ ವ್ಯಾಪ್ತಿಯ 25 ಸಾವಿರ ಮನೆಗಳಿಗೆ 32.56 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸಲಾಗಿದೆ. ಬಳಿಕ ಸ್ಮಾರ್ಟ್ ಗ್ರಿಡ್ ತಂತ್ರಜಾnನದ ಮೂಲಕ ಈ ಸ್ಮಾರ್ಟ್ ಮೀಟರ್‌ಗಳನ್ನು ನಿಯಂತ್ರಿಸುವ ವ್ಯವಸ್ಥೆ ಆರಂಭಿಸಲಾಗಿದ್ದು, ಇದು ಸಂಪೂರ್ಣವಾಗಿ ಯಶಸ್ವಿಯಾಗಿದೆ.
ಹೀಗಾಗಿ ಸೆಸ್ಕ್ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲೂ ಈ ಯೋಜನೆ ಅನುಷ್ಠಾನಗೊಳಿಸಲು ಯೋಜನೆ ಸಿದ್ದಪಡಿಸಲಾಗಿದೆ. ಅದೇ ರೀತಿ 400 ಕೋಟಿ ರೂ. ವೆಚ್ಚದಲ್ಲಿ ಸೆಸ್ಕ್ ವ್ಯಾಪ್ತಿಯ 4 ಲಕ್ಷ ಗ್ರಾಹಕರನ್ನು ಈ ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕೇಂದ್ರ ಸರ್ಕಾರದೊಂದಿಗೆ 14 ರಾಜ್ಯಗಳಲ್ಲಿ ಈ ಪ್ರಾಯೋಗಿಕ ಯೋಜನೆ ಅಳವಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಕರ್ನಾಟಕ ರಾಜ್ಯ ಮಾತ್ರವೇ ಇದರಲ್ಲಿ ಯಶಸ್ವಿಯಾಗಿದೆ. ಈ ಹಿನ್ನೆಲೆ ಮುಂದಿನ 2018ರೊಳಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶೇ.100 ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸಿ, ಇಂಧನ ಸೋರಿಕೆ ತಡೆಯುವುದರ ಜತೆಗೆ ಕೃಷಿ ಹೊರತುಪಡಿಸಿ 500 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕರನ್ನು 2017ರೊಳಗೆ ಸ್ಮಾರ್ಟ್‌ಗ್ರಿಡ್ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ಹಾಗೂ 2019 ರೊಳಗೆ 200 ಯೂನಿಟ್ ಬಳಕೆದಾರರನ್ನು ಸಹ ಈ ಯೋಜನೆ ವ್ಯಾಪ್ತಿಗೆ ಸೇರಿಸುವುದಾಗಿ ಒಪ್ಪಂದದಲ್ಲಿ ಭ ರವಸೆ ನೀಡಲಾಗಿದೆ ಎಂದರು.
ಈ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಶೇ.30 ಅನುದಾನ ನೀಡಲಿದ್ದು, ಉಳಿದ ಹಣವನ್ನು ರಾಜ್ಯ ಸರ್ಕಾರ ಭರಿಸಲಿದ್ದು, ಗ್ರಾಹಕರಿಗೆ ಯಾವುದೇ ಹೊರೆಯಾಗುವುದಿಲ್ಲ. ಬದಲಿಗೆ ಹೆಚ್ಚುವರಿ ಹಣವನ್ನು ಗ್ರಾಹಕರಿಂದ ಹಂತ ಹಂತವಾಗಿ ವಿದ್ಯುತ್ ಶುಲ್ಕದೊಂದಿಗೆ ವಸೂಲಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಇದಕ್ಕೂ ಮುನ್ನ ಸೆಸ್ಕ್ ಕಚೇರಿಗೆ ಭೇಟಿ ನೀಡಿದ ಅವರು ಸ್ಮಾರ್ಟ್ ಗ್ರಿಡ್ ಯೋಜನೆಯ ಕಾರ್ಯ ಚಟುವಟಿಕೆ, ತಂತ್ರಜಾnನದ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್‌ಗಳಿಂದ ಮಾಹಿತಿ ಪಡೆದರು. ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಡಿ.ಕಿರಣ್, ಸ್ಮಾರ್ಟ್‌ಗ್ರಿಡ್ ಯೋಜನೆ ಎಂಜಿನಿಯರ್ ಅಫ್ತಾಬ್ ಪಾಷಾ ಇತರರು ಇದ್ದರು.
ಇತರೆಡೆಗೂ ವಿಸ್ತರಣೆ: ವಿದ್ಯುತ್ ಬಳಕೆಯಲ್ಲಿ ಗ್ರಾಹಕರ ಶಿಸ್ತು ಅತ್ಯಂತ ಮುಖ್ಯವಾಗಲಿದ್ದು, ಈ ಹಿನ್ನೆಲೆ ಸ್ಮಾರ್ಟ್‌ಗ್ರಿಡ್ ಅತ್ಯುತ್ತಮ ಯೋಜನೆಯಾಗಿದೆ. ಈ ಯೋಜನೆ ಅಳವಡಿಕೆಯಿಂದ ಯಾವುದೇ ಗ್ರಾಹಕ ನಿಗದಿಗಿಂತ ಹೆಚ್ಚುವರಿಯಾಗಿ ವಿದ್ಯುತ್ ಬಳಕೆ, ಕಳವು ಮಾಡುವುದು ಸೇರಿದಂತೆ ಕಾನೂನು ಬಾಹಿರವಾಗಿ ವಿದ್ಯುತ್ ಬಳಕೆ ಮಾಡಲು ಸಾಧ್ಯವಿಲ್ಲ.
ಒಂದೊಮ್ಮೆ ಈ ರೀತಿ ಮಾಡಿದ್ದೇ ಆದಲ್ಲಿ ಸ್ಥಳದಲ್ಲೇ ಈ ಬಗ್ಗೆ ಮಾಹಿತಿ ದೊರೆಯಲಿದ್ದು, ಇದರಿಂದ ಸಂಬಂಧಪಟ್ಟ ಗ್ರಾಹಕರಿಗೆ ದಂಡ ವಿಧಿಸಬಹುದಾಗಿದೆ. ಹೀಗಾಗಿ ಸ್ಮಾರ್ಟ್‌ಗ್ರಿಡ್ ಯೋಜನೆಯಿಂದ ಇಲಾಖೆಗೆ ಲಾಭ ದೊರೆಯುವ ಜತೆಗೆ ಗ್ರಾಹಕರಿಗೂ ಉಪಯುಕ್ತವಾಗಲಿದೆ. ಹೀಗಾಗಿ ಬೆಸ್ಕಾಂ, ಮೆಸ್ಕಾಂ ಸೇರಿದಂತೆ ಇತರೆ ಕಂಪನಿಗಳಿಗೆ ವಿಸ್ತರಿಸಲು ಟೆಂಡರ್ ಕರೆಯಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ರಾಜ್ಯದಲ್ಲಿ ಬರಗಾಲದ ಹಿನ್ನೆಲೆ ವಿದ್ಯುತ್ ಉತ್ಪಾದನೆಯ ಜಲ ಸ್ಥಾವರಗಳು ಬತ್ತಿ ಹೋಗಿದೆ. ಆದರೂ ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಂತೆ ಕ್ರಮವಹಿಸಲು 1 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಖರೀದಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ಸರ್ಕಾರ ಸ್ವಾವಲಂಬಿಯಾಗಲಿದ್ದು, ಬೇರೆ ರಾಜ್ಯಗಳಿಗೆ ವಿದ್ಯುತ್ ಪೂರೈಕೆ ಮಾಡಲಿದೆ.
-ಡಿ.ಕೆ.ಶಿವಕುಮಾರ್, ಇಂಧನ ಸಚಿವ.
ಸ್ಮಾರ್ಟ್‌ಗ್ರಿಡ್ ಯೋಜನೆ
* ಉತ್ತಮ ಗುಣಮಟ್ಟದ ಅಡಚಣೆ ರಹಿತ ವಿದ್ಯುತ್ ಸಿಗಲಿದೆ.
* ವಿದ್ಯುತ್ ವಿತರಣೆಯ ಸಮಗ್ರ ಮಾಹಿತಿ ಸಿಗುವುದರಿಂದ ಅನಿಯಮಿತ ಲೋಡ್ ಶೆಡ್ಡಿಂಗ್ ಸಮಸ್ಯೆ ನಿವಾರಣೆಯಾಗಲಿದೆ.
* ಗ್ರಾಹಕರು ತಮ್ಮ ಮನೆಯ ನಿರ್ದಿಷ್ಟ ಸಮಯದ ವಿದ್ಯುತ್ ಉಪಯೋಗವನ್ನು ಆನ್‌ಲೈನ್ ಮೂಲಕ ತಿಳಿಯಬಹುದು.
* ನಿಗದಿಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೆ ಗ್ರಾಹಕರಿಗೆ ಎಚ್ಚರಿಕೆ ನೀಡುವ ಜತೆಗೆ ದಂಡ ವಿಧಿಸಬಹುದು. ಇದರಿಂದ ವಿದ್ಯುತ್ ದುರ್ಬಳಕೆಯಾಗದು.
* ಮಾಪಕ ಬಿಲ್ ವಿತರಿಸಲು, ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಮತ್ತು ಮರು ಸಂಪರ್ಕ ಕಲ್ಪಿಸಲು ಸಿಬ್ಬಂದಿ ಅವಶ್ಯಕತೆ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.