ಡಿಕೆಶಿ ಮೇಲೆ ದಾಳಿ ಕೇಂದ್ರದ ದುರ್ಬಳಕೆ
Team Udayavani, Jun 3, 2018, 1:24 PM IST
ಮೈಸೂರು: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಮೇಲೆ ನಿರಂತರ ಐಟಿ ದಾಳಿ ನಡೆಸಲು ಕೇಂದ್ರ ಸರ್ಕಾರ ಸಿಬಿಐ, ಐಟಿ ಮತ್ತು ಇಡಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ನಗರದ ಚಾಮುಂಡಿಪುರಂ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಸಿಬಿಐ, ಐಟಿ ಹಾಗೂ ಇಡಿ ಸಂಸ್ಥೆಗಳನ್ನು ಬಳಸಿಕೊಂಡು ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ತುಳಿಯುವ ಮತ್ತು ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರ ಇಂತಹ ನಡವಳಿಕೆ ತೋರುವ ಮೂಲಕ ಕಾಂಗ್ರೆಸ್‌ನ ಬಲವರ್ಧನೆ ಕುಂಠಿತಗೊಳಿಸುವ ಹುನ್ನಾರ ನಡೆಸುತ್ತಿರುವುದು ಖಂಡನೀಯ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಡಿ.ಕೆ.ಶಿವಕುಮಾರ್ ಸ್ವತ್ಛ, ಹಗರಣ ಮುಕ್ತ ರಾಜಕಾರಣಿಯಾಗಿ ಪಕ್ಷ ತಮಗೆ ನೀಡಿರುವ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ಮೂಲಕ ಜನಾನುರಾಗಿಯಾಗಿದ್ದಾರೆ. ಶಿವಕುಮಾರ್ ಪರವಾಗಿ ಕಾಂಗ್ರೆಸ್ ಪಕ್ಷವಿದ್ದು, ಇವರ ಮೇಲೆ ಇದೇ ರೀತಿ ದಾಳಿ ಮುಂದುವರಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ನಗರಾಧ್ಯಕ್ಷ ಅಜಯ್‌ರಾಜ್, ಕೆ.ಆರ್.ಕ್ಷೇತ್ರದ ಅಧ್ಯಕ್ಷ ಎನ್.ಮನೋಜ್, ಪದಾಧಿಕಾರಿಗಳಾದ ಚಂದನ್, ಪ್ರಶಾಂತ್, ರವಿ, ಯಶವಂತ್, ಶ್ರೇಯಸ್, ಚೇತನ್, ಸಮಾಜ ಸೇವಕ ನಾಗರಾಜ್ ಪೈ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.