ನಕಲಿ ನಂದಿನಿ ತುಪ್ಪ ತಯಾರಿಕೆ: ನಾಲ್ವರ ಸೆರೆ
Team Udayavani, Dec 29, 2021, 3:19 PM IST
ಮೈಸೂರು: ಇತ್ತೀಚೆಗೆ ಬೆಳಕಿಗೆ ಬಂದ ನಕಲಿ ನಂದಿನಿ ತುಪ್ಪ ತಯಾರಿಕೆ ಮತ್ತು ಮಾರಾಟ ಜಾಲ ಪ್ರಕರಣ ಸಂಬಂಧ ಮೈಸೂರು ದಕ್ಷಿಣ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ತಿಳಿಸಿದರು.
ತಮ್ಮ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಕಲಿ ತುಪ್ಪ ತಯಾರಿಕೆ ಮತ್ತು ಮಾರಾಟ ಪ್ರಕರಣ ಬೆಳಕಿಗೆಬರುತ್ತಿದ್ದಂತೆ ಡಿವೈಎಸ್ಪಿ ಸುಮಿತ್ ನೇತೃತ್ವದಲ್ಲಿತನಿಖಾ ತಂಡ ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮಂಗಳವಾರ ನಡೆದ ಕಾರ್ಯಚರಣೆಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ದೂರಿನಂತೆ ಎಫ್ಐಆರ್‌ನಲ್ಲಿ ದಾಖಲಾಗಿದ್ದ ಇಬ್ಬರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಬಂಧಿತ ನಾಲ್ವರು ಹಲವು ವರ್ಷಗಳಿಂದ ಮೈಸೂರಿನಲ್ಲಿಯೇ ನೆಲೆಸಿರುವ ಬಗ್ಗೆ ತಿಳಿದು ಬಂದಿದ್ದು, ಇನ್ನೂ ಹಲವು ಮಂದಿ ಈ ಜಾಲದಲ್ಲಿಸಕ್ರಿಯವಾಗಿರುವ ಮಾಹಿತಿ ಲಭ್ಯವಾಗಿದೆ ಎಂದರು.
ತೋಟ ಬೋಗ್ಯಕ್ಕೆ ಪಡೆದಿದ್ದರು: ಹೊಸಹುಂಡಿ ಗ್ರಾಮ ಹೊರ ವಲಯದಲ್ಲಿನ ತೋಟವನ್ನು ಬೋಗ್ಯಕ್ಕೆ ಪಡೆದಿದ್ದ ಜಾಲದ ರೂವಾರಿಗಳು, ಕಟ್ಟಡವನ್ನು ನಿರ್ಮಿಸಿ ಘಟಕವನ್ನು ವಿಜಯದಶಮಿ ದಿನದಂದು ಆರಂಭಿಸಿದ್ದಾರೆ. ನಂದಿನಿ ತುಪ್ಪದಿಂದ ಬೇರೆ ಬ್ರ್ಯಾಂಡ್ ನ ತುಪ್ಪಗಳನ್ನು ಸಹ ನಕಲು ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಜಾಲದಲ್ಲಿದ್ದ ತಯಾರಕ ರೊಂದಿಗೆ ಮಾರಾಟ ಗಾರನ್ನು ಸಹ ಪತ್ತೆ ಹಚ್ಚುವ ಕೆಲಸವಾಗುತ್ತಿದ್ದು, ಶೀಘ್ರದಲ್ಲಿಯೇ ಉಳಿದ ಆರೋಪಿ ಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.
ಆರೋಪಿಗಳು ತೋಟದಲ್ಲಿ ಕಟ್ಟಡ ನಿರ್ಮಿಸಿರುವ ಬಗ್ಗೆ ಸ್ಥಳೀಯ ಪಟ್ಣಣ ಪಂಚಾಯಿತಿ ಅಧಿಕಾರಿಗಳಿಗೆಯಾವುದೇ ಮಾಹಿತಿ ಇಲ್ಲ. ಜತೆಗೆ ಸ್ಥಳೀಯಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳುಮತ್ತು ಸಿಬ್ಬಂದಿಯ ಗಮನಕ್ಕೆ ಬಂದಿಲ್ಲ. ಜಮೀನು ನೀಡಿರುವ ಮಾಲಿಕನಿಗೆ ನಕಲಿ ನಂದಿನಿ ತುಪ್ಪ ತಯಾರಿಕೆಯ ಬಗ್ಗೆ ಮಾಹಿತಿ ಇತ್ತೇ ಎಂಬುದರ ಬಗ್ಗೆತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ನಕಲಿ ನಂದಿನಿ ತುಪ್ಪ ತಯಾರಿಸುವ ಘಟಕದಲ್ಲಿ ನಕಲಿ ಲೇಬಲ್, ಯಂತ್ರೋಪಕರಣದೊಂದಿಗೆ 10 ಟನ್ ತುಪ್ಪ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಆರ್.ದಂಡಿನ, ಡಿವೈಎಸ್ಪಿ ಸುಮಿತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.