ಹುತಾತ್ಮ ಯೋಧರ ಕುಟುಂಬಗಳಿಗೆ ಸನ್ಮಾನ

Team Udayavani, Sep 1, 2017, 12:13 PM IST

mys5.jpg

ಪಿರಿಯಾಪಟ್ಟಣ: ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಂದು ಹಬ್ಬಗಳಿಗೂ ವಿಶೇಷವಾದ ಕಾರಣಗಳಿದ್ದು ಅವುಗಳನ್ನು ವೈಶಿಷ್ಟ ಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಇಥಿಯೋಪಿಯಾ ಗೊಂಡಾರ್‌ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಭಿಲಾಷ್‌ ಸೋಮೇನಹಳ್ಳಿ ತಿಳಿಸಿದರು.

ಪಟ್ಟಣದ ಸಾಯಿ ಸಮುದಾಯ ಭವನದಲ್ಲಿ ಹೌಸಿಂಗ್‌ ಬೋರ್ಡ್‌ ಬಡಾವಣೆ ವಿನಾಯಕ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಹುತಾತ್ಮ ಯೋಧರ ಕುಟುಂಬಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಮಾತನಾಡಿದರು. ಹಿಂದೂ ಧರ್ಮ ವಿಶ್ವದ ಶ್ರೇಷ್ಠ ಧರ್ಮವಾಗಿದ್ದು ಸಹಿಷ್ಣುತೆ ಮತ್ತು ಸಹೋದರತೆ ಮುಖ್ಯ ಉದ್ದೇಶ.

ಮಹಾ ರಾಷ್ಟ್ರದ ಛತ್ರಪತಿ ಶಿವಾಜಿ ಆಳ್ವಿಕೆ ಕಾಲದಲ್ಲಿ ಗಣೇಶ ಹಬ್ಬದ ಆಚರಣೆ ಆರಂಭಿಸಿದ ಇತಿಹಾಸವಿದ್ದು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಲೋಕಮಾನ್ಯ ಬಾಲ ಗಂಗಾಧರ ತಿಲಕರು ಭಾರತೀಯರಲ್ಲಿ ಏಕತೆ ತರಬೇಕೆನ್ನುವ ಉದ್ದೇಶದಿಂದ ವಿನಾಯಕ ಚತುರ್ಥಿ ಆಚರಿಸಲು ಪ್ರಾರಂಭಿಸಿದರು ಎಂದರು.

ಸ್ವಾತಂತ್ರ್ಯ ಪೂರ್ವದಲ್ಲಿ ಗಣೇಶ ಹಬ್ಬದ ಆಚರಣೆಯನ್ನು ಬ್ರಿಟೀಷರನ್ನು ದೇಶದಿಂದ ತೊಲಗಿಸುವ ಉದ್ದೇಶದಿಂದ ಮಾಡಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವೆಡೆ ಆಡಂಬರಕ್ಕಾಗಿ ಆಚರಿಸುತ್ತಿರುವುದು ಬೇಸರದ ಸಂಗತಿ ಎಂದು ವಿಷಾದಿಸಿದರು. ಸಾರ್ವಜನಿಕರು ಗಣೇಶೋತ್ಸವ ಆಚರಿಸುವುದರ ಮೂಲಕ ಪ್ರತಿಯೊಬ್ಬರಲ್ಲಿಯೂ ರಾಷ್ಟ್ರೀಯ ಚಿಂತನೆ ಬಗ್ಗೆ ಅರಿವು ಮೂಡಿಸಿ ಭಾವೈಕ್ಯತೆ ಹೊಂದಬೇಕಿದೆ ಎಂದು ಅಭಿಪ್ರಾಯಪಟ್ಟರು.

ತಾಲೂಕಿನ ಹುತಾತ್ಮ ಯೋಧರ ಕುಟುಂಬಗಳಿಗೆ ಗೌರವ ಸಮರ್ಪಿಸಿ ಮಾತನಾಡಿದ ರೋಟರಿ ಮಾಜಿ ಅಧ್ಯಕ್ಷ ಡಾ.ಪ್ರಕಾಶ್‌ ಬಾಬುರಾವ್‌, ಯುವಕರಲ್ಲಿ ಸೇನೆಗೆ ಸೇರುವ ಮನೋಭಾವ ಹೆಚ್ಚಾಗಬೇಕಿದ್ದು ಈಗಾಗಲೇ ದೇಶದ ರಕ್ಷಣೆಯಲ್ಲಿ ನಿರತರಾಗಿರುವ ಯೋಧರಿಗೆ ಪ್ರತಿಯೊಬ್ಬರೂ ಕೃತಜ್ಞತೆ ಸಲ್ಲಿಸಬೇಕಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಯುವ ಬ್ರಿಗೇಡ್‌ ಸದಸ್ಯರಿಂದ ದೇಶಭಕ್ತಿ ಗೀತೆಗಳ ಗಾಯನ ನಡೆಯಿತು. ಪರಿಸರವಾದಿ ಕೆ.ಎನ್‌.ಸೋಮಶೇಖರ್‌, ರಾಜ್ಯ ಸರ್ಕಾರಿ ನೌಕರರ ಸಂಘದ ಪರಿಷತ್‌ ಸದಸ್ಯ ಶಿವಯೋಗ, ಅಕ್ಷರ ಚಿಟ್‌ ಫ‌ಂಡ್ಸ್‌ನ ವ್ಯವಸ್ಥಾಪಕ ಕುಮಾರಸ್ವಾಮಿ, ಎಸ್‌ವಿಎಸ್‌ ಮೆಡಿಕಲ್ಸ್‌ ಮಂಜುನಾಥ್‌, ಮುಖಂಡರಾದ ರಮೇಶ್‌, ಪಿ.ಜೆ.ರವಿ, ನಿರಂಜನ್‌, ಮಂಜು ಕೋಗಿಲವಾಡಿ, ಚಲುವರಾಯಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Brahmavar

Kumbhashi: ಅಪಘಾತದ ಗಾಯಾಳು ಆತ್ಮಹ*ತ್ಯೆ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.