ರೈತರು ಸಂಘಟಿತರಾಗಿ ಸೌಲಭ್ಯ ಬಳಸಿಕೊಳ್ಳಿ
Team Udayavani, Feb 24, 2017, 12:04 PM IST
ತಿ.ನರಸೀಪುರ: ರೈತರು ಸಂಘಟಿತರಾಗುವ ಮೂಲಕ ತಮಗೆ ಸಿಗಬೇಕಾದ ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಹೇಳಿದರು.
ರಾಜ್ಯ ರೈತ ಸಂಘದ ವತಿಯಿಂದ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಸ್ಥಾಪಿಸಲ್ಪಟ್ಟ ಗ್ರಾಮ ಘಟಕ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.ರೈತರಲ್ಲಿನ ಒಗ್ಗಟ್ಟಿನ ಕೊರತೆಯಿಂದಾಗಿ 35 ವರ್ಷಗಳ ಅವಧಿಯಲ್ಲಿ ಸರ್ಕಾರಗಳು ರೈತ ಪರ ಕೆಲಸ ನಿರ್ವಹಿಸುತ್ತಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ರೈತ ಬೆಳೆದ ಬೆಳೆಗಳಿಗೆ ವೈಜಾnನಿಕ ಬೆಲೆ ಸಿಗುತ್ತಿಲ್ಲ. ರೈತರು ಬೆಳೆದಂತಹ ಬೆಳೆ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಇಲ್ಲದ ಕಾರಣ ದಿನದಿಂದ ದಿನಕ್ಕೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿ ರೈತರ ಬೆಳೆಗೆ ಸೂಕ್ತ ಬೆಲೆ ಇಲ್ಲದೆ ರೈತರು ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯದಲ್ಲಿ ಬರಗಾಲ ಕೂಡ ಆವರಿಸಿದೆ ಎಂದು ತಿಳಿಸಿದರು.
ಈಗಾಗಲೇ ಸಾಕಷ್ಟು ರೈತರು ಆತ್ಮಹತ್ಯೆ ಶರಣಾಗಿದ್ದರೂ ಸರ್ಕಾರಗಳು ಕಾಳಜಿ ತೋರುತ್ತಿಲ್ಲ, ರೈತರು ಪ್ರತಿಯೊಂದು ಗ್ರಾಮಮಟ್ಟದಲ್ಲಿ ಸಂಘಟನೆಯ ಮಾಡಿ ನಿರಂತರವಾಗಿ ಹೋರಾಟ ನಡೆಸಿ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಗ್ರಾಮದಲ್ಲಿ ನೂರಕ್ಕೂ ಹೆಚ್ಚು ರೈತರು ರಾಜ್ಯ ರೈತ ಸಂಘಕ್ಕೆ ಸೇರ್ಪಡೆಗೊಂಡರು.
ಗ್ರಾಮದಲ್ಲಿ ನೂತನ ಗ್ರಾಮ ಘಟಕದ ನಾಮಫಲಕವನ್ನು ರಾಜ್ಯ ವರಿಷ್ಠ ಅಶ್ವತ್ಥರಾಜೇಅರಸ್ ಅನಾವರಣ ಗೊಳಿಸಿದರು. ರಾಜ್ಯ ವರಿಷ್ಠ ಕೆ.ಎಂ. ಪುಟ್ಟಸ್ವಾಮಿ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜು, ಜಿಲ್ಲಾ ಉಪಾಧ್ಯಕ್ಷ ಕೆ.ಜಿ.ಶಿವಪ್ರಸಾದ್, ಗ್ರಾಮ ಘಟಕದ ಅಧ್ಯಕ್ಷ ಶಿವರುದ್ರಪ್ಪ, ಪ್ರಧಾನ ಕಾರ್ಯದರ್ಶಿ ಗುರು ಮೂರ್ತಿ, ಉಪಾಧ್ಯಕ್ಷ ನಾಗರಾಜು, ರವಿಕುಮಾರ್, ರವಿಚಂದ್ರ,ಕುಮಾರ್, ಬಿ.ಪಿ. ಶಿವಸ್ವಾಮಿ, ಮೈಕ್ ಮಹಾಲಿಂಗಪ್ಪ, ಅತ್ತಹಳ್ಳಿ ಶಿವನಂಜು, ಬನ್ನೂರು ಹುಚ್ಚೇಗೌಡ, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.