ನಾಡಿದ್ದು ದಿಲ್ಲಿ ಹೋರಾಟ ಬೆಂಬಲಿಸಿ ರೈತರ ಆಕ್ರೋಶ ದಿನಾಚರಣೆ: ಕುರುಬೂರು
Team Udayavani, Mar 10, 2024, 6:20 AM IST
ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮಾ.12ರಂದು ರಾಜ್ಯಾದ್ಯಂತ ಪಂಜಿನ ಪ್ರತಿಭಟನೆ, ರೈತರ ಆಕ್ರೋಶ ದಿನ ಆಚರಣೆ ಮಾಡಲಾಗುತ್ತಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪಂಜಾಬ್, ಹರಿಯಾಣ ರೈತರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಜಾರಿಗಾಗಿ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಪೊಲೀಸ್ ಬಲದ ಮೂಲಕ ಚಳವಳಿ ಹತ್ತಿಕ್ಕುತ್ತಿದೆ.
ರೈತರ ಜತೆಗೆ ಸಭೆ ನಡೆಸಿದ ನಾಟಕವಾಡಿ ಸಮಸ್ಯೆ ಬಗೆಹರಿಸದೆ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆಯ ಹೋರಾಟ ಬೆಂಬಲಿಸಲು ಮಾ.12ರಂದು ರಾಜ್ಯಾದ್ಯಂತ ಪಂಜಿನ ಪ್ರತಿಭಟನೆ, ರೈತರ ಆಕ್ರೋಶ ದಿನ ಆಚರಿಸಲು ತೀರ್ಮಾನಿಸಲಾಗಿದೆ.
ಎಲ್ಲ ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲಿವೆ. ಮಾ.15ರ ನಂತರ ಧಾರವಾಡದಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಸಿ ಚಳವಳಿ ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.