ಭೂಸಂತ್ರಸ್ತರಿಗೆ ಕೆಲಸ ನೀಡದ್ದಕ್ಕೆ ಪ್ರತಿಭಟನೆ


Team Udayavani, Oct 4, 2020, 1:21 PM IST

ಭೂಸಂತ್ರಸ್ತರಿಗೆ ಕೆಲಸ ನೀಡದ್ದಕ್ಕೆ ಪ್ರತಿಭಟನೆ

ಮೈಸೂರು: ಕಡಿಮೆ ಬೆಲೆಗೆ ರೈತರ ಜಮೀನು ಪಡೆದು, ಸಂತ್ರಸ್ತರ ಮನೆಯವರಿಗೆ ಕಾಯಂ ಉದ್ಯೋಗ ನೀಡುವುದಾಗಿ ಹೇಳಿ ಸ್ಥಳೀಯವಾಗಿ ಕೆಲಸ ನೀಡದೆ, ಬೇರೆ ಕಡೆ ಉದ್ಯೋಗ ನೀಡಿರುವುದನ್ನು ವಿರೋಧಿಸಿ ರೈತ ಸಂಘಟನೆಯ ನೇತೃತ್ವದಲ್ಲಿ ರೈತರುಪ್ರತಿಭಟನೆ ನಡೆಸಲಾಯಿತು.

ಅತ್ಯಂತ ಕಡಿಮೆ ಬೆಲೆಗೆ ಹಿಮ್ಮಾವು ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿ ಏಷಿಯನ್‌ ಪೇಂಟ್ಸ್‌ ಕಾರ್ಖಾನೆಗಾಗಿ ಜಮೀನನ್ನು ಬಿಟ್ಟುಕೊಟ್ಟಿದ್ದು, ಇದಕ್ಕೆ ಪ್ರತಿಯಾಗಿ ಕಾರ್ಖಾನೆಯ ಆಡಳಿತ ಮಂಡಳಿಕಾಯಂ ಉದ್ಯೋಗವನ್ನು ಇಲ್ಲಿಯೇ ನೀಡುವುದಾಗಿ ಹೇಳಿತ್ತು. ಅದರಂತೆ 94 ಭೂಸಂತ್ರಸ್ತ ಕುಟುಂಬಗಳ ಪೈಕಿ ಮೊದಲ ಹಂತದಲ್ಲಿ 53 ಮಂದಿಗೆ ಕೆಲಸ ನೀಡಲಾಗಿದೆ. ಎರಡನೇ ಹಂತದಲ್ಲಿ 8 ಮಂದಿಗೆ ಕೆಲಸ ನೀಡಲಾಗುವುದು ಎಂದು ಹೇಳಲಾಗಿದೆ. ಆದರೆ, ಇದುವರೆಗೂ ಉದ್ಯೋಗ ನೀಡಿಲ್ಲ ಎಂದು ರೈತರು ಆರೋಪಿಸಿದರು.

ಮೊದಲ ಹಂತದಲ್ಲಿ ಕೆಲಸವನ್ನು ನೀಡಲಾಗಿರುವ 53 ಮಂದಿಗೆ ಮೈಸೂರಿನ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ನೀಡಲಾಗಿದೆ. ಪ್ರಸ್ತುತ ತರಬೇತಿ ಮುಗಿಸಿರುವವರಿಗೆ ಬೆಳಗೊಳದ ಘಟಕಕ್ಕೆ ನಿಯೋಜಿಸಲಾಗಿದೆ. ಕಂಪನಿಯ ಈ ನಡೆ ಸಹಜ ನ್ಯಾಯದ ಉಲ್ಲಂಘನೆಯಾಗಿದೆ ಎಂದು ರೈತ ಸಂಘಟನೆಯ ಮುಖಂಡರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹಿಮ್ಮಾವು ಸೇರಿದಂತೆ ತಾಂಡ್ಯ ನಂಜನಗೂಡು ಇತ್ಯಾದಿ ಸುತ್ತಮುತ್ತಲ ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಾಪಿಸಲಾದ ಎಲ್ಲಾ ಕೈಗಾರಿಕೆಗಳು ಸಹ ಇಲ್ಲಿನ ಘಟಕಗಳಲ್ಲಿಯೇ ತಮ್ಮ ಕಾರ್ಖಾನೆಯ ಭೂ ಸಂತ್ರಸ್ತರಿಗೆ ಕಾಯಂ ಉದ್ಯೋಗಗಳನ್ನು ನೀಡಿದೆ. ಭೂಮಿ ಕಳೆದುಕೊಂಡ ಜಾಗದಲ್ಲಿ ಕಾಯಂ ಉದ್ಯೋಗವನ್ನು ನೀಡಿವೆ. ಕಂಪನಿ ನಡೆಸಿದ ವಿವಿಧ ಸಭೆಗಳಲ್ಲಿ ಕೆಲಸವನ್ನು ಇಲ್ಲಿಯೇ ನೀಡುವುದಾಗಿ ಹೇಳಿತ್ತು. ಆದರೆ, ಬೆಳಗೊಳದ ಘಟಕದಲ್ಲಿ ಕೊಡುತ್ತಿರುವುದು ಸಹಜ ನ್ಯಾಯಕ್ಕೆ ವಿರುದ್ಧವಾದದ್ದು. ಸ್ಥಳೀಯರಿಗೆ ಇಲ್ಲಿಯೇ ಉದ್ಯೋಗ ನೀಡಬೇಕು ಎಂದು ಮನವಿ ಮಾಡಿದರು.

ಯಾವುದೇ ಅಂಶಗಳನ್ನು ಪರಿಗಣಿಸದೇ ಕಂಪನಿಯು ಬೆಳಗೊಳದಲ್ಲಿ ಕೆಲಸ ಮಾಡಲು ಸೂಚಿಸಿರುವುದು ಉದ್ಯೋಗವನ್ನು ತಪ್ಪಿಸುವ ಪ್ರಯತ್ನವಾಗಿದೆ. ಕಂಪನಿಯು ಏಕಪಕ್ಷೀಯವಾಗಿ ತೆಗೆದುಕೊಂಡಿರುವ ನಿರ್ಧಾರವನ್ನುಕೈಬಿಡಬೇಕು. ಬೇರೆಕಡೆಕೆಲಸ ಮಾಡಲು ಸಿದ್ಧರಿಲ್ಲ. ನಮ್ಮಗೆ ಇಲ್ಲಿಯೇ ಕೆಲಸವನ್ನು ನೀಡಬೇಕು. ಇಲ್ಲದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ರೈತರು ಎಚ್ಚರಿಸಿದರು.

ರೈತ ಮುಖಂಡ ಹೊಸಕೋಟೆ ಬಸವರಾಜು ನೇತೃತ್ವದಲ್ಲಿ ಶ್ರೀಧರ್‌, ನಾಗರಾಜು, ಮಹದೇವಸ್ವಾಮಿ, ರಮೇಶ್‌ ಸೇರಿದಂತೆ ಹಲವರು ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.