ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ರೈತ ಸಂಘಟನೆಗಳು

Team Udayavani, Dec 2, 2020, 12:33 PM IST

ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ರೈತ ಸಂಘಟನೆಗಳು

ಮೈಸೂರು: ಕೇಂದ್ರದ ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದೌರ್ಜನ್ಯ ಖಂಡಿಸಿ ರೈತ, ಕಾರ್ಮಿಕ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ಜಮಾಯಿಸಿದ ನೂರಾರು ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಹೋರಾಟಗಳನ್ನು ಕೇಂದ್ರ ಸರ್ಕಾರ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಕಳೆದ ತಿಂಗಳು 26ರಂದು ದಿಲ್ಲಿ ಚಲೋಗೆ ತೆರಳಿದ್ದ ರೈತರ ಮೇಲೆ ಲಾಠಿ ಚಾರ್ಜ್‌ ಮಾಡಿಸಿದ್ದಾರೆ. ಅಮಾನುಷವಾಗಿ ರೈತರ ಮೇಲೆ ದಾಳಿ ನಡೆಸುವ ಮೂಲಕಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿಗಳಾಗಿವೆ. ಇದು ಕೇವಲ ರೈತ ವಿರೋದಿಯಲ್ಲ, ಪ್ರಜಾಪ್ರಭುತ್ವ ವಿರೋಧಿ ಸರ್ಕಾರವಾಗಿದೆ. ಈ ಕೂಡಲೇ ಪ್ರಧಾನಿ ರೈತರ ಕ್ಷೇಮ ಕೇಳಬೇಕು. ಕೃಷಿ ವಿರೋಧಿ ಕಾಯ್ದೆ ಗಳನ್ನು ಹಿಂಪಡೆಯಬೇಕು. ಸಾಲಮನ್ನಾ, ಬಡ್ಡಿ ಮನ್ನಾ ಸೇರಿದಂತೆಋಣಮುಕ್ತಕಾಯ್ದೆಯನ್ನುಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಪೊಲೀಸರೊಂದಿಗೆ ವಾಗ್ವಾದ: ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಜಿಲ್ಲಾಧಿಕಾರಿ ಕಚೇರಿಯ100 ಮೀಟರ್‌ ವ್ಯಾಪ್ತಿ ಹೊರಗಡೆ ಪ್ರತಿಭಟನೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ 100 ಮೀಟರ್‌ ವ್ಯಾಪ್ತಿಯ ಹೊರಗೆ ಪ್ರತಿಭಟನೆ ನಡೆಸಬೇಕೆಂದು ಪೊಲೀ ಸರು ಸೂಚನೆ ನೀಡಿದರು. ಇದಕ್ಕೆ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದರು.

ಆದರೆ, ಪೊಲೀಸರು ಪ್ರತಿಭಟನೆ ನಡೆಸಲು ಅವಕಾಶ ನೀಡಲಿಲ್ಲ. ಈ ವೇಳೆ ಪೊಲೀಸ ರೊಂದಿಗೆ ವಾಗ್ವಾದಕ್ಕಿಳಿದ ರೈತಮುಖಂಡರು, ನಾವೇನು ಟೆರರಿಸ್ಟ್‌ಗಳಾ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಅಲ್ಲೇ ಧರಣಿ ನಡೆಸಿ ದರು.ಪ್ರತಿಭಟನೆಯಲ್ಲಿರೈತಮುಖಂಡರಾದ ಬಡಗಲಪುರ ನಾಗೇಂದ್ರ, ಹೊಸಕೋಟೆ ಬಸವರಾಜ್‌, ಮರಂಕಯ್ಯ, ಸ್ವರಾಜ್‌ ಇಂಡಿಯಾದ ಉಗ್ರ ನರಸಿಂಹೇಗೌಡ, ಕಾರ್ಮಿಕ ಮುಖಂಡ ಚಂದ್ರಶೇಖರ್‌ ಮೇಟಿ, ಹೋರಾ ಟಗಾರ ಪ.ಮಲ್ಲೇಶ್‌ ಇತರರಿದ್ದರು.

ಹುಣಸೂರು: ಹೆದ್ದಾರಿ ತಡೆದು ಪ್ರತಿಭಟನೆ :

ಹುಣಸೂರು: ದೆಹಲಿಯಲ್ಲಿ ರೈತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತುದಲಿತ ಸಂಘರ್ಷ ಸಮಿತಿಯು ನಗರದಲ್ಲಿ ಕೆಲ ಹೊತ್ತು ಹೆದ್ದಾರಿ ತಡೆದು, ಪ್ರತಿಭಟನೆ ನಡೆಸಿತು.

ನಗರದ ಅರಸು ಪುತ್ಥಳಿ ಬಳಿಯ ಹೆದ್ದಾರಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ದಸಂಸ ಜಿಲ್ಲಾ ಸಂಚಾಲಕ ರತ್ನಪುರಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ರೈತಚಳವಳಿಯನ್ನುಹತ್ತಿಕ್ಕಲುಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ರೈತ ಸಂಘದ ಕಾರ್ಯದರ್ಶಿ ರಾಮೇಗೌಡ, ದಸಂಸ ಸಮಿತಿಯ ಡೇವಿಡ್‌, ಅತ್ತಿಕುಪ್ಪೆ ರಾಮಕೃಷ್ಣ, ಶಾಂತಮ್ಮ ಮತ್ತಿತರರಿದ್ದರು.

ಕೋಟೆ: ರೈತವಿರೋಧಿ ಕಾಯ್ದೆ ಹಿಂಪಡೆಯಿರಿ :

ಎಚ್‌.ಡಿ.ಕೋಟೆ: ರೈತ ಚಳವಳಿ ಹತ್ತಿಕ್ಕುವ ಉದ್ದೇಶದಿಂದ ದೆಹಲಿ ಚಲೋ ಹಮ್ಮಿ ಕೊಂಡಿದ್ದ ರೈತರ ಮೇಲೆ ಕೇಂದ್ರ ಸರ್ಕಾರವು ಲಾಠಿ ಚಾರ್ಜ್‌ ಮಾಡಿರುವ ಕ್ರಮವನ್ನು ವಿರೋಧಿಸಿ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ತಾಲೂಕುಘಟಕದ ರೈತರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರೈತ ನಾಯಕರು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಅಧಿಕಾರಕ್ಕೆ ಬಂದ ನಂತರ ರೈತ ವಿರೋಧ ನೀತಿ ಅನುಸರಿಸುತ್ತಾ, ರೈತರಿಗೆ ಮಾರಕವಾದ ಕಾಯ್ದೆ ಗಳನ್ನು ರೂಪಿಸುತ್ತಿದೆ. ಇದರಿಂದ ಸಣ್ಣ , ಅತಿಸಣ್ಣ ರೈತರ ತುಂಡುಭೂಮಿಗಳು ಉಳ್ಳವರ ಪಾಲಾಗಿ ಅನ್ನದಾತರಕುಟುಂಬಗಳು ಅತಂತ್ರ ಸ್ಥಿತಿ ತಲುಪಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದುಎಂದುಎಚ್ಚರಿಕೆನೀಡಿದರು.ಇದೇವೇಳೆ, ತಹಶೀಲ್ದಾರ್‌ಮೂಲಕರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ

ಮಹದೇವನಾಯ್ಕ, ಸರಗೂರು ತಾಲೂಕು ರೈತ ಸಂಘದ ಅಧ್ಯಕ್ಷ ಸಿಂಗೇಗೌಡ, ಜೀವಿಕ ಬಸವರಾಜು, ದಸಂಸದ ಆನಗಟ್ಟಿ ದೇವರಾಜು, ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ನಟರಾಜು, ರೈತ ಮುಖಂಡರಾದ ದೇವಮ್ಮ, ಪುಟ್ಟಣ್ಣ, ನಾಗೇಗೌಡ, ನಾಗರಾಜು, ಚಂದ್ರಪ್ಪ, ಶಿವಲಿಂಗಪ್ಪ ಇತರರಿದ್ದರು.

ನಂಜನಗೂಡು: ಕೇಂದ್ರದ ವಿರುದ್ಧ ಕಿಡಿ :

 ನಂಜನಗೂಡು: ದೆಹಲಿಯಲ್ಲಿ ಪ್ರತಿಭಟನಾನಿರತರಾದ ರೈತರ ಮೇಲೆ ಕೇಂದ್ರ ಸರ್ಕಾರವು ದೌರ್ಜನ್ಯ ನಡೆಸಿದೆ ಎಂದು ಆಪಾದಿಸಿ ತಾಲೂಕು ರೈತ ಸಂಘಮಂಗಳವಾರ ಪ್ರತಿಭಟನೆ ನಡೆಸಿತು.

ನಗರದ ಅಂಬೇಡ್ಕರ್‌ ಪುತ್ಥಳಿ ಬಳಿ ಜಮಾಯಿಸಿದ ರೈತಮುಖಂಡರು,ಕೇಂದ್ರಹಾಗೂರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಮೊಳಗಿಸಿ ಆಕ್ರೋಶ ವ್ಯಕ್ತ ಪಡಿಸಿದರು. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ನಡೆಸುತ್ತಿರುವ ರೈತರ ಹೋರಾಟವನ್ನು ಕೇಂದ್ರ ಸರ್ಕಾರ ಹತ್ತಿಕ್ಕುತ್ತಿದೆ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ತಾಲೂಕುಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ,ಕಾರ್ಯದರ್ಶಿಹೆಜ್ಜಿಗೆ ಪ್ರಕಾಶ್‌, ಬೊಕ್ಕಳ್ಳಿ ನಂಜುಂಡಸ್ವಾಮಿ, ಮುಖಂಡರಾದ ತುಳಸಮ್ಮ, ಮಹದೇವಮ್ಮ, ಮಾದೇವು, ಸಿದ್ದರಾಜು, ಮಹದೇವಸ್ವಾಮಿ,ಕುಮಾರಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.