ಹುಣಸೂರು: ಕಾಯ್ದೆ ಹಿಂಪಡೆಯದಿದ್ದರೆ ಹೋರಾಟ
Team Udayavani, Sep 26, 2020, 2:19 PM IST
ಹುಣಸೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘದ ಪದಾಧಿಕಾರಿಗಳು ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಮುಖಂಡರು, ಕಾಯ್ದೆಯನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಲಾಕ್‌ಡೌನ್‌ಅವಧಿಯನ್ನುದುರ್ಬಳಕೆ ಮಾಡಿಕೊಂಡು ಸುಗ್ರಿವಾಜ್ಞೆ ಮೂಲಕ ಭೂಸುಧಾರಣಾಕಾಯ್ದೆ ತಿದ್ದುಪಡಿಮಾಡಿ ಜಾರಿಗೊಳಿಸಲು ಹೊರಟಿರುವುದು ದುರ್ದೈವದ ಸಂಗತಿ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಕಾರ್ಪೋರೆಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಅಲ್ಲದೇ ವಿದ್ಯುತ್ ಹಾಗೂ ರೈಲ್ವೆಯನ್ನೂ ಖಾಸಗೀಕರಣ ಮಾಡಲುಹೊರಟಿರುವುದುಜನವಿರೋಧಿ ಧೋರಣೆಯಾಗಿದೆ ಎಂದು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ದೂರಿದರು.
ಸಂಘದ ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ಸೆ.28ರಂದು ಮೈಸೂರು ಜಿಲ್ಲೆಯನ್ನು ಬಂದ್ ಮಾಡಲಾಗುತ್ತಿದ್ದು, ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಕೋರಿದರು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಕಾರ್ಯದರ್ಶಿ ರಾಮೇಗೌಡ, ಬಸವರಾಜ್, ಮುಖಂಡರಾದ ರತ್ನಪುರಿ ಪುಟ್ಟಸ್ವಾಮಿ, ಅತ್ತಿಕುಪ್ಪೆ ರಾಮಕೃಷ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.