ಮಹಿಳಾ ದಸರಾದಲ್ಲಿ ಜಾನಪದಗೀತೆ, ನೃತ್ಯೋತ್ಸವದ ರಂಗು

Team Udayavani, Sep 27, 2017, 1:01 PM IST

myss3.jpg

ಮೈಸೂರು: ಕಳೆದ ವರ್ಷ ಸಚಿವರ ಪತ್ನಿಯಾಗಿ ಮಹಿಳಾ ದಸರಾದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದೆ, ಈ ವರ್ಷ ಇದೇ ಕಾರ್ಯಕ್ರಮದಲ್ಲಿ ಸಚಿವೆಯಾಗಿ ಭಾಗವಹಿಸಿದ್ದಕ್ಕೆ ತುಂಬ ಸಂತೋಷವಾಗಿದೆ ಎಂದು ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವೆ ಡಾ.ಗೀತಾ ಮಹದೇವಪ್ರಸಾದ್‌ ಹರ್ಷ ವ್ಯಕ್ತಪಡಿಸಿದರು.

ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯಿಂದ ಜೆ.ಕೆ.ಮೈದಾನದಲ್ಲಿ ಆಯೋಜಿಸಿರುವ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಮಂಗಳವಾರ ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘದ ಸದಸ್ಯರು ಹಾಗೂ ಮಹಿಳೆಯರಿಗೆ ಏರ್ಪಡಿಸಿದ್ದ ಜಾನಪದ ಗೀತೆ, ನೃತ್ಯ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರಿ.ಶ.1610 ರಲ್ಲಿ ಯದುವಂಶದ ರಾಜರು ದಸರಾ ಆರಂಭಿಸಿದರು. ಆಮೇಲೆ ಮಹಿಳಾ ದಸರಾ, ಮಕ್ಕಳ ದಸರಾ, ಕ್ರೀಡಾ ದಸರಾ ಹೀಗೆ ಮೈಸೂರಿನಲ್ಲಿ ಅಲ್ಲದೆ ಮಡಿಕೇರಿ, ಚಾಮರಾಜನಗರದಲ್ಲಿಯೂ ದಸರಾ ಆಚರಣೆ ಮಾಡುತ್ತಿದ್ದಾರೆ. ಸರ್ಕಾರ ಈ ದಸರಾಗೆ ಹೆಚ್ಚಿನ ಮಹತ್ವ ನೀಡಿದೆ. ಜಾನಪದ ನಮ್ಮ ನಾಡಿನ ಕಲೆ, ನಾಡಿನ ಹಿರಿಯರು ಕೊಟ್ಟ ಕೊಡುಗೆಯಾಗಿದೆ. ಜನಪದ ನಾಡಿದ ಸಾಂಸ್ಕೃತಿಕ ಕಲೆಯಾಗಿದೆ ಎಂದು ದಸರಾ ಹಬ್ಬದ ಶುಭಾಶಯ ಕೋರಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಮಾತನಾಡಿ, ದಸರಾ ಮಹೋತ್ಸವದ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ದಸರಾವನ್ನು ಆಯೋಜಿಸಲಾಗಿದೆ. ಮಹಿಳೆಯರಿಗೆ ಮಕ್ಕಳಿಗೆ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಎಲ್ಲರೂ ಒಗ್ಗೂಡಿ ಈ ಕಾರ್ಯಕ್ರಮವನ್ನು ಸದುಪಯೋಗಿಸಿಕೊಳ್ಳಿ ಎಂದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಕೆಂಪಮ್ಮ ಹಾಡನ್ನು ಹೇಳಿ ರಂಜಿಸಿದರು. ಜಾನಪದ ಗೀತೆ ಹಾಗೂ ನೃತ್ಯಕ್ಕೆ ನಾಲ್ಕು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಮಹಿಳೆಯರು ತಂಡೋಪ ತಂಡವಾಗಿ ವೇದಿಕೆಯನ್ನೇರಿ ನೃತ್ಯ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಮೈಲ್ಯಾಕ್‌ ಅಧ್ಯಕ್ಷ ಎಚ್‌.ಎ.ವೆಂಕಟೇಶ್‌, ಜಾನಪದ ಕಲಾವಿದೆ ಮರಿಸಿದ್ದಮ್ಮ, ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಅಧ್ಯಕ್ಷೆ ಲತಾ ಮೋಹನ್‌, ಕಾರ್ಯಾಧ್ಯಕ್ಷೆ ಕೆ.ರಾಧ, ರಾಣಿ ಪ್ರಭಾ, ಸುಶೀಲಾ ಮರಿಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.