Feticide case: ಮೈಸೂರಿನ ಮತ್ತೊಂದು ಆಸ್ಪತ್ರೆಗೆ ಬೀಗ ಮುದ್ರೆ
Team Udayavani, Dec 19, 2023, 1:11 PM IST
ಮೈಸೂರು: ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಬಿಗು ದಾಳಿ ಮುಂದುವರಿಸಿದ್ದು, ಮೈಸೂರಿನ ಮತ್ತೊಂದು ಆಸ್ಪತ್ರೆಗೆ ಬೀಗ ಮುದ್ರೆ ಬಿದ್ದಿದೆ.
ಭ್ರೂಣಗಳ ಸ್ಕ್ಯಾನಿಂಗ್ ಇಮೇಜ್‌ಗಳನ್ನೂ ಇಟ್ಟುಕೊಳ್ಳದ ಪ್ರತಿಷ್ಠಿತ ಶ್ರೀದೇವಿ ನರ್ಸಿಂಗ್ ಹೋಂಗೆ ಬೀಗ ಹಾಕಲಾಗಿದೆ.
ಎರಡು ವರ್ಷದ ಅವಧಿಯಲ್ಲಿ ಮಾಡಲಾದ ಸ್ಕ್ಯಾನಿಂಗ್ ಡಾಟಾ ಇಟ್ಟುಕೊಳ್ಳುವುದು ಕಡ್ಡಾಯ. ಅಧಿಕಾರಿಗಳು ಕೇವಲ ಮೂರು ತಿಂಗಳ ಸ್ಕ್ಯಾನಿಂಗ್ ಡಾಟಾ ಕೇಳಿದ್ದಾರೆ. ಆದರೆ ಮೈಸೂರಿನ ಬೋಗಾದಿಯಲ್ಲಿರುವ ಈ ನರ್ಸಿಂಗ್ ಹೋಮ್ ಭ್ರೂಣದ ಫೋಟೋ, ದಾಖಲೆ ಒದಗಿಸಲು ವಿಫಲವಾಗಿದೆ.
ಬೆಂಗಳೂರಿನ ಸಕ್ಷಮ ಅಧಿಕಾರಿಗಳ ಸಮ್ಮುಖದಲ್ಲಿ ತಾಲೂಕು ಆರೋಗ್ಯಾಧಿಕಾರಿ ಪುಟ್ಟತಾಯಮ್ಮ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕೆಪಿಎಂಇ ಕಾಯ್ದೆ ಪ್ರಕಾರ ದಾಖಲೆಗಳನ್ನು ಒದಗಿಸಿಲ್ಲ. ಹೆಣ್ಣು ಭ್ರೂಣ ಹತ್ಯೆ ನಡೆದಿರುವ ಕುರಿತು ತನಿಖೆ ಬಳಿ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಯಂತ್ರ ಸೀಜ್ ಮಾಡಲಾಗಿದೆ. ದಾಳಿ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳ ಹಾಗೂ ಹೊರ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.