ಗುಣಮಟ್ಟಣದ ಶಿಕ್ಷಣಕ್ಕೆ ಮೊದಲ ಆದ್ಯತೆ 


Team Udayavani, Jul 31, 2017, 12:23 PM IST

mys1.jpg

ಕೆ.ಆರ್‌.ನಗರ: ಶಿಕ್ಷಕರು, ಪೋಷಕರು ಮತ್ತು ಸಾರ್ವಜನಿಕರ ನೆರವಿನಿಂದ ತಾಲೂಕಿನ ವಿದ್ಯಾರ್ಥಿಗಳಿಗೆ ಗುಣಮಟ್ಟಣದ ಶಿಕ್ಷಣ ದೊರಕುವಂತೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ರಾಜು ಹೇಳಿದರು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ಮತ್ತು ಅಧಿಕಾರಿಗಳಿಂದಲೇ ಸಾಧನೆ ಮಾಡಲು ಸಾಧ್ಯವಿಲ್ಲ ಇದಕ್ಕೆ ಎಸ್‌ಡಿಎಂಸಿ ಮತ್ತು ಚುನಾಯಿತ ಜನಪ್ರತಿನಿಧಿಗಳ ಸಹಕಾರ ಅತ್ಯಗತ್ಯವಾಗಿದ್ದು, ಅವರೆಲ್ಲರಾ ವಿಶ್ವಾಸಗಳಿಸಿ ತಾಲೂಕಿಗೆ ಜಿಲ್ಲೆಯಲ್ಲಿಯೇ ಉತ್ತಮ ಹೆಸರು ಬರುವಂತೆ ಪರಸ್ಪರ ಸಮನ್ವಯತೆಯಿಂದ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು.

ಶಾಲಾಭಿವೃದ್ಧಿಗೆ ಒತ್ತು: ತಾಲೂಕಿನಲ್ಲಿ ಉತ್ತಮ ಶಿಕ್ಷಕರ ಪಡೆ ಇದ್ದು, ಅವರಿಗೆ ಅಗತ್ಯ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳಿಗೆ ಮನವರಿಕೆಯಾಗುವಂತೆ ಬೋಧನಾ ವಿಧಾನ ಅಳವಡಿಸಿಕೊಳ್ಳಲು ಸೂಚಿಸಿ, ಅವರಿಂದಲೂ ಸೂಕ್ತ ಸಲಹೆ ಸಹಕಾರ ಪಡೆದುಕೊಂಡು ಸ್ಥಳೀಯವಾಗಿ ದೊರಕುವ ಸಂಪನ್ಮೂಲಗಳನ್ನು ಶಾಲೆಯ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತದೆ ಎಂದರು.

ಫ‌ಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆಯುವುದರ ಜತೆಗೆ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚು ಆದ್ಯತೆ ನೀಡುವ ಯೋಜನೆ ಹಮ್ಮಿಕೊಳ್ಳಲಿದ್ದು, ಇದಕ್ಕಾಗಿ ಮುಂದಿನ ದಿನಗಳಲ್ಲಿ ಶಿಕ್ಷಕರ ಸಭೆ ಮತ್ತು ವಿಚಾರ ಸಂಕೀರ್ಣ ಹಾಗೂ ಕಮ್ಮಟಗಳನ್ನು ಏರ್ಪಡಿಸಿ ನುರಿತ ಶಿಕ್ಷಣ ತಜ್ಞರಿಂದ ಶಿಕ್ಷಕ ಬಳಗಕ್ಕೆ ಅಗತ್ಯ ತರಬೇತಿ ಕೊಡಿಸಲಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ ನೀಡಿದರು.

ಈ ವರೆಗೆ ಮೈಸೂರಿನ ಶಿಕ್ಷಕರ ಶಿಕ್ಷಣಾ ಮಹಾವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಂ.ರಾಜು ಪ್ರಸ್ತುತ ಕೆ.ಆರ್‌.ನಗರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದು ಪ್ರಭಾರ ಕ್ಷೇತ್ರಶಿಕ್ಷಣಾಧಿಕಾರಿ ರುದ್ರಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆಶ್ರಯ ಸಮಿತಿ ಮಾಜಿ ಸದಸ್ಯ ಬಿ.ರಮೇಶ್‌, ತಾಲೂಕು ಜೆಡಿಎಸ್‌ ಮುಖಂಡರಾದ ಹರ್ಷಕುಮಾರಗೌಡ, ಟಿ.ಪಿ.ಮಂಜುನಾಥ್‌, ತಾಲೂಕು ಶಿಕ್ಷಕರ ಸಂಘದ ಗೌರವಾಧ್ಯಕ್ಷ ರಾಜಶೇಖರ್‌, ಬಂಡಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಡಾ.ಎಂ.ಸುರೇಶ್‌ ಹಾಜರಿದ್ದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸ್ವಾಗತಿಸಿದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.