ಪ್ರಾಚ್ಯ ಇಲಾಖೆ ವಿರುದ್ಧ ನೆರೆ ಸಂತ್ರಸ್ತರ ಧರಣಿ
Team Udayavani, Dec 1, 2019, 12:05 PM IST
ನಂಜನಗೂಡು: ನೆರೆ ಪರಿಹಾರ ಸಂಬಂಧ ಪ್ರಾಚ್ಯ ವಸ್ತು ಇಲಾಖೆ ವಿರುದ್ಧ ಕಪಿಲೆಯ ನೆರೆ ಸಂತ್ರಸ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಕಬ್ಬು ಬೆಳಗಾರರ ಸಂಘದ ಆಶ್ರಯದಲ್ಲಿ ಪಟ್ಟಣದ ತೋಪಿನ ಬೀದಿ ಹಾಗೂ ಕುರುಬಗೇರಿಯ ಕಪಿಲಾ ನೆರೆ ಸಂತ್ರಸ್ತರು ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿರುವ ಪ್ರಾಚ್ಯವಸ್ತು ಇಲಾಖೆಯ ಕಚೇರಿ ಬಳಿ ಧಾವಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕಪಿಲಾ ನದಿ ಪ್ರವಾಹ ಬಂದು ಮನೆ ಮಠ ಕಳೆದುಕೊಂಡ ನಮಗೆ ಮನೆ ದುರಸ್ತಿಗೆ ಸರ್ಕಾರ ಹಣನೀಡಿದ್ದು, ಆದರೆ, ಮನೆ ದುರಸ್ತಿಗೆ ಪ್ರಾಚ್ಯವಸ್ತು ಇಲಾ ಖೆಯ ಅಧಿಕಾರಿ ಬಿಡುತ್ತಿಲ್ಲ. ಲಂಚಕ್ಕೆ ಬೇಡಿಕೆಯೊಡ್ಡುತ್ತಿದ್ದಾರೆ ಎಂದು ಸಂತ್ರಸ್ತರು ದೂರಿದರು.
ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಎಚ್.ಎಂ. ರವೀಂದ್ರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿಮನವೊಲಿಸಲು ಯತ್ನಿಸಿದರು. ಆದರೆ, ಪ್ರಾಚ್ಯವಸ್ತುಇಲಾಖೆ ಅಧಿಕಾರಿ ಕೃಷ್ಣಪ್ಪ ಅವರನ್ನೇ ಸ್ಥಳಕ್ಕೆ ಕಳುಹಿಸಿ ಎಂದು ಪಟ್ಟು ಹಿಡಿದರು. ಪ್ರತಿಭಟನೆ ಮುಂದುವರಿದ ವಿಷಯ ತಿಳಿದ ತಹಶೀಲ್ದಾರ್ ಮಹೇಶ ಕುಮಾರ್, ತಮ್ಮ ಇಲಾಖೆಯಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪ್ರತಿಭಟನಾಕಾರ ರೊಂದಿಗೆ ದೂರವಾಣಿಯಲ್ಲೇಚರ್ಚಿಸಿ ಮನವೊಲಿಸಲು ಪ್ರಯತ್ನಿಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಸಂತ್ರಸ್ತರು, ದೇವಾಲಯದ ಸುತ್ತ ಛತ್ರ, ಭವನ, ವಸತಿ ಗೃಹ, ಅತಿಥಿಗೃಹ ನಿರ್ಮಿಸಿಕೊಳ್ಳಬಹುದು. ಆದರೆ, ಬಡವರು ಮಾತ್ರ ತಮ್ಮ ಮನೆಗಳನ್ನು ದುರಸ್ತಿ ಮಾಡಿಕೊಳ್ಳಬಾರದು ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ತಹಶೀಲ್ದಾರ್ ಅವರನ್ನು ಪ್ರಶ್ನಿಸಿದರು.
ಬಳಿಕ ತಹಶೀಲ್ದಾರ್ ಮಹೇಶ್ ಕುಮಾರ್ ಅವರು,ಸಂಬಂಧಪಟ್ಟ ಅಧಿಕಾರಿ ಹಾಗೂ ನಿಮ್ಮನ್ನುಮುಖಾಮುಖೀ ಭೇಟಿ ಮಾಡಿಸಿ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು. ನಮ್ಮ ಬೇಡಿಕೆ ಈಡೇರಿಸದಿದ್ದರೆ ಇದೇಸಂಘಟನೆಯ ನೇತೃತ್ವದಲ್ಲಿ ಪೊರಕೆ ಚಳವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ತಾಲೂಕು ಕಬ್ಬು ಬೆಳೆಗಾರರಸಂಘಟನೆಯ ತಾಲೂಕು ಅಧ್ಯಕ್ಷ ಹಾಡ್ಯ ರವಿ,ನಗರಸಭಾ ಸದಸ್ಯ ಕಪಿಲೇಶ, ಮುಖಂಡರಾದ ಸ್ನೇಕ್ ಬಸವರಾಜು, ಗೋಳೂರು, ಮಹದೇವಸ್ವಾಮಿ, ಜಯಕುಮಾರ, ಕುರುಬ ಗೇರಿ ತೋಪಿನ ಬೀದಿಗಳಸಂತ್ರಸ್ತರಾದ ರಾಜಮ್ಮ, ಜಯಲಕ್ಷ್ಮೀ, ಸುಬ್ಬಮ್ಮ, ಮಾಲಮ್ಮ, ಸಿದ್ದಮ್ಮ, ತುಳಸಿ, ಸುಧಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.