ಕಲಿತವರಿಂದ ಜನಪದ ಸಂಸ್ಕೃತಿ ನಿರ್ಲಕ್ಷ್ಯ 


Team Udayavani, Oct 24, 2017, 12:53 PM IST

m5-awarsda.jpg

ಹುಣಸೂರು: ಜನಪದ ಸಂಸ್ಕೃತಿ ವಿಶಿಷ್ಠವಾಗಿದ್ದು ಅದನ್ನು ಪೋಷಿಸುವ ಜವಾಬ್ದಾರಿ ಇಂದಿನ ಪೀಳಿಗೆ ಮೇಲಿದೆ ಎಂದು ಜಾನಪದ ವಿದ್ವಾಂಸ ಡಾ.ಪಿ.ಕೆ.ರಾಜಶೇಖರ್‌ ಸೂಚನೆ ನೀಡಿದರು. ನಗರದ ರೋಟರಿ ಸಭಾಂಗಣದಲ್ಲಿ ತಾಲೂಕು ಕನ್ನಡ ಜಾನಪದ ಪರಿಷತ್‌ ಹಾಗೂ ರೋಟರಿ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಜನಪದ ಗೀತೆಗಳ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಜನಪದ ಉಳಿದಿದ್ದರೆ ಅದು ಅನಕ್ಷರಸ್ಥರಿಂದ. ಅವರ ಪ್ರತಿ ಚಟುವಟಿಕೆಯಲ್ಲೂ ಜಾನಪದ ಸಂಸ್ಕೃತಿ ಅಡಕವಾಗಿದೆ. ಜಾನಪದದ ಹಾಡುಗಳು ನಮ್ಮ ಬದುಕಿನುದ್ದಕ್ಕೂ ಹಾಸುಹೊಕ್ಕಾಗಿದೆ. ಇತ್ತೀಚಿನ ವರ್ಷಗಳಲ್ಲಿ ಜನಪದಕ್ಕೆ ಆತಂಕ ಉಂಟಾಗಿದ್ದರೂ ಅಲ್ಲಲ್ಲಿ ಜಾನಪದ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಉಳಿಸುವ ಕಾರ್ಯವಾಗುತ್ತಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿಲ್ಲ.

ಹೀಗಾಗಿ ನಿರಂತರವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸುತ್ತಿರಬೇಕು. ಶಾಲಾ-ಕಾಲೇಜು ಹಂತದಲ್ಲೇ ಜಾನಪದ ಹಾಡುಗಳನ್ನು ಹಾಡಿಸಬೇಕು ಎಂದರು. ಹುಣಸೂರು ಐತಿಹಾಸಿಕವಾಗಿ, ಪೌರಾಣಿಕವಾಗಿ, ಸಾಂಸ್ಕೃತಿಕವಾಗಿ ತನ್ನದೇ ಆದ ಹಿರಿಮೆ ತೋರಿದೆ. ನಾಡಿನಲ್ಲಿ ಸಾಹಿತಿ ಚದುರಂಗ, ಕೆಂಪರಾಜೇಅರಸ್‌, ಹುಣಸೂರು ಕೃಷ್ಣಮೂರ್ತಿಯಂತಹ ಸಿನಿಮಾ ದಿಗ್ಗಜರು, ದೇವರಾಜ ಅರಸರಂತಹ ಪರಿವರ್ತನೆ ನಾಯಕತ್ವ ನೀಡಿದ ತಾಲೂಕೆಂದು ಬಣ್ಣಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್‌.ಪಿ.ಮಂಜುನಾಥ್‌, ಇತ್ತೀಚೆಗೆ ಕ್ರಿಕೆಟ್‌ ಮತ್ತು ಕಬಡ್ಡಿ ಆಟಗಳು ಬೆಟ್ಟಿಂಗ್‌ನಿಂದಾಗಿ ಹೆಚ್ಚು ಪ್ರವರ್ಧಮಾನಕ್ಕೆ ಬರುತ್ತಿದೆ. ಆದರೆ ಜಾನಪದವನ್ನು ನಮ್ಮ ಸಂಸ್ಕೃತಿಯ ಮೂಲಾಧಾರದಲ್ಲೇ ಉಳಿಸುವ ಕಲೆಯನ್ನಾಗಿಸಬೇಕು. ಮುಂದೆ ರಾಜ್ಯಮಟ್ಟದ ಜಾನಪದ ಸ್ಪರ್ಧೆಗಳನ್ನು ಆಯೋಜಿಸಿದ್ದಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ರೋಟರಿ ಸಂಸ್ಥೆ ಅಧ್ಯಕ್ಷ ಅನಂತರಾಜೇ ಅರಸ್‌ ಉದ್ಘಾಟಿಸಿದರು.

ಕನ್ನಡ ಜಾನಪದ ಪರಿಷತ್‌ ಕೇಂದ್ರ ಸಮಿತಿ ಖಜಾಂಚಿ ಡಾ.ಕನಕತಾರಾ, ಡಾ.ಪ್ರಮೀಳಾದೇವಿ, ಕಾರ್ಯಾಧ್ಯಕ್ಷ ಡಾ.ಎಸ್‌.ಬಾಲಾಜಿ, ಜಿಲ್ಲಾಧ್ಯಕ್ಷ ಕ್ಯಾತನಹಳ್ಳಿ ಪ್ರಕಾಶ್‌, ತಾಲೂಕು ಅಧ್ಯಕ್ಷ ಪುಟ್ಟಶೆಟ್ಟಿ, ಕಾರ್ಯದರ್ಶಿ ಶ್ರೀಕಾಂತ್‌, ಕೆ.ಆರ್‌.ನಗರ ತಾಲೂಕು ಅಧ್ಯಕ್ಷ ಸಂಪತ್‌, ಪರಿಷತ್‌ನ ಆನಂದ್‌, ಟಿ.ಲೋಕೇಶ್‌, ಗಣಪತಿ, ಸ್ವಪ್ನ ಚಂದ್ರಶೇಖರ್‌, ಸಣ್ಣಮ್ಮ, ರಮೇಶ್‌, ಯೋಗೇಂದ್ರ, ಉಮಾಪತಿ, ನಾಗಣ್ಣ ಮತ್ತಿತರರಿದ್ದರು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ 72 ಮಂದಿ ಸ್ಪರ್ಧಾಳುಗಳು ತಮ್ಮ ಕಂಠಸಿರಿ ಮೂಲಕ ಜಾನಪದ ಗೀತೆ ಹಾಡಿದರು.

ಸಾಧಕರಿಗೆ ಸನ್ಮಾನ: ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಚಿಂತಕರಾದ ಪ್ರೊ.ಎಚ್‌.ಆರ್‌.ಸಿದ್ದೇಗೌಡ, ವಿಶ್ರಾಂತ ಪ್ರಾಂಶುಪಾಲ ಮೋದೂರು ಮಹೇಶಾರಾಧ್ಯ, ಗಾಯಕರಾದ ಸಿ.ಎಸ್‌.ಮಹೇಶ್‌, ವಸಂತಹೊನ್ನೇನಹಳ್ಳಿ, ಪ್ರಾಂಶುಪಾಲ ಡಾ.ವೆಂಕಟೇಶಯ್ಯ, ಡೀಡ್‌ ಡಾ.ಶ್ರೀಕಾಂತ್‌ರನ್ನು ಸನ್ಮಾನಿಸಲಾಯಿತು.

ಜನಪದ ಗೀತೆಗಳನ್ನು ಕೇಳುತ್ತಿದ್ದಂತೆ ಗ್ರಾಮೀಣ ಸೊಗಡು ಕಣ್ಮುಂದೆ ಬರಲಿದೆ. ಇತ್ತೀಚೆಗೆ ಮನುಷ್ಯ ತನ್ನ ಭಾವನೆಗಳನ್ನು ಕಳೆದುಕೊಳ್ಳುತ್ತಿರುವುದರಿಂದ ನಮ್ಮ ಸಂಸ್ಕೃತಿ, ಪರಂಪರೆಗೆ ಪೆಟ್ಟು ಬಿದ್ದಿದೆ.
-ಎಚ್‌.ಪಿ.ಮಂಜುನಾಥ್‌, ಶಾಸಕ 

ಟಾಪ್ ನ್ಯೂಸ್

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Hunasuru-Marriage

Hunsur: ಶಿಷ್ಯೆಯನ್ನೇ ಪ್ರೀತಿಸಿ ವಿವಾಹವಾದ ಉಪನ್ಯಾಸಕ!

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Dalilama

Visit: ಜ.5ಕ್ಕೆ ಬೈಲುಕುಪ್ಪಗೆ ದಲೈಲಾಮಾ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

2

Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.