ಬೆನಕನಹಳ್ಳಿಯಲ್ಲಿ ಕಾಲು ಬಾಯಿ ಲಸಿಕೆ ಕಾರ್ಯಕ್ರಮ
Team Udayavani, Nov 17, 2017, 12:06 PM IST
ತಿ.ನರಸೀಪುರ: ತಾಲೂಕಿನ ಬೆನಕನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗ ನಿಯಂತ್ರಣಕ್ಕೆ ಲಸಿಕೆಗಳನ್ನು ಹಾಕಲಾಯಿತು.
ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾಲುಬಾಯಿ ಜ್ವರ ಲಸಿಕೆ ಶಿಬಿರದಲ್ಲಿ ಗ್ರಾಮದ 460 ಹೈನುಗಾರಿಕೆ ಜಾನುವಾರುಗಳಿಗೆ ಲಸಿಕೆ ಹಾಕಲಾಯಿತು. ಅಲ್ಲದೆ ರೈತರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದರಿಂದ 13ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಹೊರಳಹಳ್ಳಿ ಪಶು ವೈದ್ಯಕೀಯ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸೌಮ್ಯಾ, ಜಾನುವಾರುಗಳಿಗೆ ಮಾರಕವಾಗಿರುವ ಕಾಲುಬಾಯಿ ಜ್ವರವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು 13ನೇ ಸುತ್ತಿನಲ್ಲಿ ಲಸಿಕೆಗಳನ್ನು ಜಾನುವಾರುಗಳಿಗೆ ಹಾಕಲಾಗುತ್ತಿದೆ. ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ನಡೆದ ಶಿಬಿರಗಳನ್ನು ರೈತರು ನೇರವಾಗಿ ಜಾನುವಾರುಗಳನ್ನು ಕರೆತಂದು ಲಸಿಕೆಗಳನ್ನು ಹಾಕಿಸಿಕೊಳ್ಳಬೇಕೆಂದು ಕರೆ ನೀಡಿದರು.
ಹಿರಿಯ ಪಶುವೈದ್ಯ ಪರೀಕ್ಷಕ ಡಿ.ಪ್ರಕಾಶ್, ಆರ್.ಉದಯರವಿ, ಪಶು ಪರೀಕ್ಷಕರಾದ ಬಿ.ಪಿ.ಪಾಪಣ್ಣ, ಆನಂದ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಎಂ.ಮಹದೇವಸ್ವಾಮಿ, ಕಾರ್ಯದರ್ಶಿ ಜಿ.ಮಾದಪ್ಪ, ಹಾಲು ಪರೀಕ್ಷಕ ಬಿ.ಜಿ.ಶಿವಶಂಕರ್, ಸಹಾಯಕರಾದ ಬಿ.ಪಿ.ಮಹೇಶ, ಬಿ.ಎನ್.ಮಹೇಶ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.