ಫುಟ್‌ಪಾತ್ ಅಂಗಡಿಗಳ ತೆರವು
Team Udayavani, Jun 24, 2018, 11:51 AM IST
ಹುಣಸೂರು: ನಗರದ ಬಸ್ ನಿಲ್ದಾಣದ ಪಕ್ಕದ ರಸ್ತೆ ಒತ್ತುವರಿ ಮಾಡಿಕೊಂಡಿದ್ದ, ಫುಟ್‌ಪಾತ್ ಅಂಗಡಿಗಳನ್ನು ನಗರಸಭೆ ಸಿಬ್ಬಂದಿ ತೆರವುಗೊಳಿಸಿದರು. ನಗರದ ಹೊಸ ಬಸ್ ನಿಲ್ದಾಣದ ಪಕ್ಕದಲ್ಲೇ ಇರುವ ತಾಪಂ ಆವರಣದಲ್ಲಿ ಎಸ್‌ಜೆಎಸ್‌ವೈ ಅನುದಾನದಡಿ 10 ಮಳಿಗೆಗಳನ್ನು ನಿರ್ಮಿಸಿ, ಶ್ರೀಶಕ್ತಿ ಸಂಘಗಳ ಬಲವರ್ಧನೆಗೆ ಆರ್ಥಿಕ ಚಟುವಟಿಕೆ ನಡೆಸಲು ನೀಡಲಾಗಿತ್ತು.
ಈ ಮಳಿಗೆಗಳ ಮುಂಭಾಗದ ಫುಟ್‌ಪಾತ್‌ನಲ್ಲೇ ಕೆಲವರು ಬಳೆ ಮಾರಾಟ, ಪಾನಿಪುರಿ ಇತರೆ ಅಂಗಡಿಗಳನ್ನು ನಿರ್ಮಿಸಿಕೊಂಡಿದ್ದರು. ಇದರಿಂದ ಎಸ್‌ಜೆಎಸ್‌ವೈ ಅಂಗಡಿಗಳಲ್ಲಿ ವ್ಯಾಪಾರ ಸ್ಥಗಿತಗೊಂಡಿದ್ದನ್ನು ತಾಪಂ ಇಒ ಗಮನಕ್ಕೆ ತಂದ ಮಳಿಗೆದಾರರು ಫುಟ್‌ಪಾತ್ ತೆರವುಗೊಳಿಸಿಕೊಡುವಂತೆ ಮನವಿ ಮಾಡಿದ್ದರು.
ಇಒ ಕಚೇರಿಯ ಮನವಿಗೆ ಫುಟ್‌ಪಾತ್ ಮುಂಭಾಗದ ಮಳಿಗಳನ್ನು ಪೊಲೀಸರ ಸಹಕಾರ ಪಡೆದು, ನಗರಸಭೆ ಸಿಬ್ಬಂದಿ ತೆರವುಗೊಳಿಸಿದರು. ಎಸ್‌ಐ ಮಹೇಶ್ ನೇತೃತ್ವದಲ್ಲಿ ಭದ್ರತೆ ಒದಗಿಸಿದ್ದರು.
ನಗರದೆಲ್ಲೆಡೆ ತೆರವುಗೊಳಿಸಿ: ನಗರದ ಪ್ರಮುಖ ಪ್ರದೇಶಗಳಾದ ಬಜಾರ್ ರಸ್ತೆ, ಎಸ್.ಜೆ.ರಸ್ತೆ, ಹಳೇ ಸೇತುವೆ, ಬೆ„ಪಾಸ್ ರಸ್ತೆಗಳಲ್ಲಿ ಪುಟ್‌ಬಾತ್ ಮೇಲೆ ವ್ಯಾಪಾರ ನಡೆಸುತ್ತಿದ್ದು, ಪಾದಾಚಾರಿಗಳು ಓಡಾಡುವುದಿರಲಿ ವಾಹನ ಸವಾರರು ಈ ರಸ್ತೆಗಳಲ್ಲಿ ಹರಸಾಹಸ ಪಟ್ಟು ತಿರುಗಾಡುವಂತಾಗಿದೆ. ಈ ಬಗ್ಗೆ ನಗರಸಭೆ ಅಧ್ಯಕ್ಷರು, ಪೌರಾಯುಕ್ತರು ಗಮನ ಹರಿಸಿ ನಗರವ್ಯಾಪ್ತಿಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ನಾಗರಿಕರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.