ಕಾಡು, ನದಿ-ಕಣಿವೆಯೂ ಪಾರಂಪರಿಕ ತಾಣ: ಡಾ.ವಿ.ಶೋಭಾ

ಊರುಗಳಲ್ಲಿ ಮನೆ ದುರಸ್ತಿ ಮಾಡಬೇಕೆಂದರೆ ಅನುಮತಿ ಬೇಕು.

Team Udayavani, Nov 25, 2022, 3:35 PM IST

ಕಾಡು, ನದಿ-ಕಣಿವೆಯೂ ಪಾರಂಪರಿಕ ತಾಣ: ಡಾ.ವಿ.ಶೋಭಾ

ಮೈಸೂರು: ಕಟ್ಟಡ, ಸ್ಮಾರಕಗಳಷ್ಟೇ ಪಾರಂಪರಿಕ ತಾಣಗಳಲ್ಲ. ಜೀವವೈವಿಧ್ಯದ ಆಗರವಾಗಿರುವ ಕಾಡುಗಳು, ನದಿ, ಕಣಿವೆ, ಗಿರಿಶ್ರೇಣಿಗಳು ಪಾರಂಪರಿಕವೇ ಆಗಿದೆ ಎಂದು ಮೈಸೂರು ವಿವಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ವಿ.ಶೋಭಾ ಹೇಳಿದರು.

ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವಸ್ತುಪ್ರದರ್ಶನ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಪಾರಂಪರಿಕ ಸಪ್ತಾಹದಲ್ಲಿ ಮಾತನಾಡಿದರು.

ಸ್ಮಾರಕಗಳು ಮಾನವನ ಸಾಧನೆಯ ಪ್ರತಿಬಿಂಬ ಗಳಾಗಿವೆ. ನಾವೆಲ್ಲ ಕಟ್ಟಡ, ಸ್ಮಾರಕಗಳನ್ನಷ್ಟೇ ಪಾರಂಪರಿಕ ಎಂದು ಭಾವಿಸುತ್ತೇವೆ. ಆದರೆ ನಮ್ಮ ಸುತ್ತಲಿನ ಜೀವವೈವಿಧ್ಯದ ಆಗರವಾಗಿರುವ ಕಾಡುಗಳು, ನದಿ ಕಣಿವೆ, ಗಿರಿಶ್ರೇಣಿಗಳು ಪಾರಂಪರಿಕ ತಾಣಗಳಾಗಿವೆ ಎಂದು ತಿಳಿಸಿದರು.

ದೇಶದ ಹಿಮಾಲಯ ರಾಷ್ಟ್ರೀಯ ಉದ್ಯಾನ, ನಂದಾದೇವಿ ಹೂಕಣಿವೆ, ಪಶ್ಚಿಮ ಘಟ್ಟಗಳು, ಸುಂದರ್‌ಬನ್ಸ್‌ ಕೂಡ ವಿಶ್ವ ಪಾರಂಪರಿಕ ತಾಣದ ಪಟ್ಟಿಯಲ್ಲಿವೆ. ಇವೆಲ್ಲವುಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಇತಿಹಾರ ತಜ್ಞ ಡಾ. ಶೆಲ್ವಪಿಳ್ಳೆ ಅಯ್ಯಂಗಾರ್‌ ಮಾತನಾಡಿ, ದೇಗುಲ, ಮಸೀದಿ, ಚರ್ಚ್‌ ಸೇರಿ ದಂತೆ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು ಕೇವಲ ಆಯಾ ಸಮುದಾಯಕ್ಕೆ ಮಾತ್ರ ಸೀಮಿತ ವಲ್ಲ. ಅದು ಎಲ್ಲರಿಗೂ ಸೇರಿದ ಆಸ್ತಿಯಾಗಿದ್ದು, ಇವುಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಶ್ರೀರಂಗಪಟ್ಟಣದ ದರಿಯಾದೌಲತ್‌, ನಗರದ ಸೇಂಟ್‌ ಫಿಲೋಮಿನಾ, ಹಳೇಬೇಡಿನ ಹೊಯ್ಸಳೇಶ್ವರ ದೇಗುಲ ಎಲ್ಲವೂ ನಮ್ಮವೇ. ಅವುಗಳನ್ನು ಉಳಿಸಬೇಕಾಗಿರುವುದು ಜವಾಬ್ದಾರಿ. ಯಾರಾದರೂ ಕಿಡಿಗೇಡಿಗಳು ಪಾರಂಪರಿಕ ಕಟ್ಟಡಗಳ ಸ್ವರೂಪ ಹಾಳು ಮಾಡುತ್ತಿದ್ದರೆ, ಹೆಸರು ಬರೆದು ವಿಕೃತಿ ಮೆರೆಯುತ್ತಿದ್ದರೆ ಪ್ರಶ್ನಿಸಬೇಕು ಎಂದು ಹೇಳಿದರು.

ಯುನೆಸ್ಕೋ ಘೋಷಿಸಿರುವ 40 ವಿಶ್ವ ಪಾರಂಪರಿಕ ತಾಣಗಳು ದೇಶದಲ್ಲಿವೆ. ಭಾರತವನ್ನೇ ವಿಶ್ವ ಪಾರಂಪರಿಕ ತಾಣವಾಗಿ ಮಾಡುವಷ್ಟು ಐತಿಹಾಸಿಕ ಸ್ಥಳಗಳು ಹೆಜ್ಜೆ ಹೆಜ್ಜೆಗೂ ಸಿಗುತ್ತವೆ. ಪಾಕಿಸ್ತಾನ, ಅಘ್ಘಾನಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ದಕ್ಷಿಣಾ ಏಷ್ಯದಲ್ಲಿ ಸಾವಿರಾರು ಪಾರಂಪರಿಕ ಸ್ಥಳಗಳಿದ್ದು, ಐತಿಹಾಸಿಕ ಮಹತ್ವವನ್ನು ಯಾರೂ ಮರೆಯಬಾರದು ಎಂದರು.

ವಿಶ್ವ ಪಾರಂಪರಿಕ ತಾಣವೆಂದು ಘೋಷಣೆ ಯಾದರೆ ಯುನೆಸ್ಕೋ ನಿಯಮಾವಳಿ ಪಾಲಿಸಬೇಕು. ಮೇಲುಕೋಟೆ, ನಂಜನಗೂಡಿನಂತ ಪಾರಂಪರಿಕ ಊರುಗಳಲ್ಲಿ ಮನೆ ದುರಸ್ತಿ ಮಾಡಬೇಕೆಂದರೆ ಅನುಮತಿ ಬೇಕು. ಅದನ್ನು ಸಮಸ್ಯೆಯೆಂದು ಭಾವಿಸದೇ ಜವಾಬ್ದಾರಿಯೆಂದೇ ಪರಿಗಣಿಸಬೇಕು ಎಂದು ಸಲಹೆ ನೀಡಿದರು.

ಆಧುನಿಕ ಕಟ್ಟಡವಾದರೂ ನಿರ್ವಹಣೆ ಮಾಡದಿದ್ದರೆ ಶಿಥಿಲಗೊಳ್ಳುತ್ತದೆ. 100 ವರ್ಷದ ಮಹಾರಾಣಿ ಕಾಲೇಜು ಕಟ್ಟಡ ಶಿಥಿಲಗೊಂಡಿದ್ದು, ನಮ್ಮ ಕಣ್ಣೆದುರೇ ಒಂದು ಭಾಗ ಬಿದ್ದಿದೆ. ಹೀಗಾಗಿ ಹಳೆಯ ಕಟ್ಟಡಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಅದಕ್ಕಾಗಿ ಟ್ವಿಟರ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಸೇರಿದಂತೆ ನವ ಮಾಧ್ಯಮಗಳನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನಿಡಿದರು.

ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು, ಟೆರಿಷಿಯನ್‌ ಕಾಲೇಜು, ಮೈಸೂರು ವಿಶ್ವವಿದ್ಯಾಲ ಯದ ಸ್ಕೂಲ್‌ ಆಫ್ ಡಿಸೈನ್‌ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇಲಾಖೆಯ ವಸ್ತುಸಂಗ್ರಹಾಲ ಯವನ್ನು ವೀಕ್ಷಿಸಿ, ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಪಡೆದರು. ಇತಿಹಾಸ ತಜ್ಞರಾದ ಡಾ.ಎನ್‌.ಎಸ್‌. ರಂಗರಾಜು, ಡಾ.ಎಚ್‌.ಎಂ. ಸಿದ್ದನಗೌಡರ್‌, ಇಲಾಖೆಯ ಉಪನಿರ್ದೇಕಿ ಸಿ.ಎನ್‌.ಮಂಜುಳಾ, ಎಂಜಿನಿಯರ್‌ ಸಿ.ಟಿ.ಮಹೇಶ ಇದ್ದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.