ಪ್ಲಾಸ್ಟಿಕ್‌ ನಿಷೇಧಕ್ಕೆ ಪೊಲೀಸ್‌ ಒಳಗೊಂಡ ಸ್ಕ್ವಾಡ್‌ ರಚಿಸಿ


Team Udayavani, Mar 26, 2023, 2:42 PM IST

tdy-15

ಮೈಸೂರು: ಪರಿಸರಕ್ಕೆ ಮಾರಕವಾಗಿರುವ ಏಕ ಬಳಕೆಯ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ರಾಷ್ಟ್ರೀಯ ಹಸಿರುನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್‌ ಬಿ. ಆಡಿಸೂಚಿಸಿದರು.

ನಗರ ಪಾಲಿಕೆಯ ಶ್ರೀ ಜಯಚಾಮರಾಜೇಂದ್ರ ಒಡೆಯರ್‌ ಸಭಾಂಗಣದಲ್ಲಿ ಶನಿವಾರ ಮಹಾನಗರ ಪಾಲಿಕೆಯ ಪಾಲುದಾರರು ಹಾಗೂ ಸಂಘ ಸಂಸ್ಥೆಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲು ಪೊಲೀಸರ ಸಹಕಾರ ಅವಶ್ಯಕತೆ ಇದೆ. ತಂಡದಲ್ಲಿ ಪೊಲೀಸರು ಇದ್ದರೆ ಜನರು ಹಾಗೂ ವರ್ತಕರು ಸಹ ಭಯಪಟ್ಟು ದಂಡ ಪಾವತಿಸಿ ಇನ್ನು ಮುಂದೆಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ನಿಲ್ಲಿಸುತ್ತಾರೆ.ಹಾಗಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ಬಳಸುವವರಿಗೆದಂಡ ವಿಧಿಸಲು ಹಾಗೂ ಅವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರನ್ನು ಒಳಗೊಂಡ ಸ್ಕ್ವಾಡ್‌ ರಚಿಸುವಂತೆ ನಗರ ಪಾಲಿಕೆಗೆ ನಿರ್ದೇಶನ ನೀಡಿದರು.

ಪ್ಲಾಸ್ಟಿಕ್‌ ಬಳಕೆ ಮಾಡುವ ಹೋಟೆಲ್‌ ಹಾಗೂ ಅಂಗಡಿ ಮಾಲೀಕರಿಗೆ ಎರಡು ಬಾರಿ ದಂಡ ವಿಧಿಸಿ, ಮೂರನೇ ಬಾರಿ ಅವರ ಟ್ರೇಡ್‌ ಲೈಸೆನ್ಸ್ ರದ್ದು ಮಾಡಲು ಕ್ರಮ ವಹಿಸಬೇಕು. ಈ ರೀತಿ ಕಟ್ಟುನಿಟ್ಟಿನ ಕ್ರಮ ವಹಿಸಿದರೆ ಮಾತ್ರ ಪ್ಲಾಸ್ಟಿಕ್‌ ಬಳಕೆಯನ್ನು ನಿಯಂತ್ರಿಸಲು ಸಾಧ್ಯ ಎಂದರು.

ನಗರವನ್ನು ಸ್ವತ್ಛವಾಗಿಡಲು ವಿಶೇಷವಾಗಿ ಹೋಟೆಲ್, ಅಂಗಡಿ, ಛತ್ರಗಳ ಮಾಲೀಕರ ಸಹಕಾರ ಅಗತ್ಯವಿದ್ದು, ಎಲ್ಲರು ಪರಿಸರ ಸ್ನೇಹಿ ಚಟುವಟಿಕೆಗೆ ಹೆಚ್ಚಿನ ಒತ್ತು ನೀಡಬೇಕು. ವಿವಾಹಸಮಾರಂಭಗಳಲ್ಲಿ ಪ್ಲಾಸ್ಟಿಕ್‌ ವಸ್ತುಗಳ ಬಳಕೆಗೆ ಕಡಿವಾಣ ಹಾಕಬೇಕು. ಸಾಧ್ಯವಾದರೆ ತಟ್ಟೆಗಳ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು. ಹೋಟೆಲ್‌ ಹಾಗೂ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳನ್ನು ಬಳಕೆ ಮಾಡಬೇಕು ಎಂದು ತಿಳಿಸಿದರು.

ಕಸ ಎಸೆದವರಿಗೆ ದಂಡ ಹಾಕಿ: ‘ಪ್ರತಿ ಮನೆಯಿಂದ ತ್ಯಾಜ್ಯವನ್ನು ಹಸಿಕಸಹಾಗೂ ಒಣಕಸವಾಗಿ ವಿಂಗಡಿಸಿ ಪಡೆಯಬೇಕು. ತ್ಯಾಜ್ಯವನ್ನು ಮನಬಂದಲ್ಲಿ ಎಸೆಯುವವರಿಗೆ ದಂಡ ವಿಧಿಸಬೇಕು. ಸ್ವತ್ಛತೆಗೆ ಸಹಕರಿಸದೆ ಹೋದವರಿಗೆ ದಂಡ ವಿಧಿಸದೆ ಹೋದರೆನಗರವನ್ನು ಶುಚಿಯಾಗಿ ಇಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಬೆಟ್ಟವನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸಿ: ತಿರುಪತಿ ಮಾದರಿಯಲ್ಲಿ ಚಾಮುಂಡಿಬೆಟ್ಟವನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಚಾಮುಂಡಿಬೆಟ್ಟದ ತಪ್ಪಲು ಹಾಗೂ ಬೆಟ್ಟದ ಮೇಲ್ಭಾಗದಲ್ಲಿ ಅನಧಿಕೃತ ಕಟ್ಟಗಳ ನಿರ್ಮಾಣಕ್ಕೆಕಡಿವಾಣ ಹಾಕಬೇಕು. ಬೆಟ್ಟದ ಮೇಲ್ಭಾಗದಲ್ಲಿಮನೆಗಳನ್ನು ನಿರ್ಮಿಸಲು ಅನುಮತಿ ನೀಡುವಸಂದರ್ಭ ಎರಡು ಮಹಡಿಗೆ ಸೀಮಿತವಾಗಿಅನುಮತಿ ನೀಡುವುದು ಸೂಕ್ತ ಎಂದು ಸಲಹೆ ನೀಡಿದರು.

ನಗರ ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ್‌ ರೆಡ್ಡಿ, ಆರೋಗ್ಯಾಧಿಕಾರಿ ಡಾ.ಡಿ.ಜಿ. ನಾಗರಾಜ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ,ವಿವಿಧ ಸಂಘ ಸಂಸ್ಥೆಗಳ ಪ್ರಮುಖರಾದ ಸುರೇಶ್‌ಕುಮಾರ್‌ ಜೈನ್‌, ನಾರಾಯಣ ಗೌಡ, ಗಂಟಯ್ಯ,ಪ್ರೊ.ಎನ್‌.ಎಸ್‌. ರಂಗರಾಜು, ವಿಶ್ವನಾಥ್‌ ಸೇರಿದಂತೆ ಹಲವರು ಇದ್ದರು

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.