ಸಹೋದರಿ ಸಮಾನ: ಸಿದ್ದರಾಮಯ್ಯ ಸ್ಪಷ್ಟನೆ
Team Udayavani, Jan 29, 2019, 12:30 AM IST
ಬೆಂಗಳೂರು: ಮೈಸೂರಿನ ವರುಣಾ ಕ್ಷೇತ್ರದಲ್ಲಿ ಸೋಮವಾರ ನಡೆದ ಘಟನೆ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನಮ್ಮ ಪಕ್ಷದ ಕಾರ್ಯಕರ್ತೆ ಸಮಸ್ಯೆ ವಿವರಣೆ ನೀಡಲು ಹೆಚ್ಚು ಸಮಯ ತೆಗೆದುಕೊಂಡಿದ್ದರಿಂದ ತಡೆಯಲು ಹೋದಾಗ ಆ ರೀತಿಯ ಘಟನೆ ನಡೆಯಿತು’ ಎಂದು ಹೇಳಿದ್ದಾರೆ. ‘ಅದೊಂದು ಆಕಸ್ಮಿಕ ಘಟನೆ. ಅದರಲ್ಲಿ ಯಾವುದೇ ದುರುದ್ದೇಶ ಇರಲಿಲ್ಲ. ಆ ಮಹಿಳೆ 15 ವರ್ಷದಿಂದ ನನಗೆ ಪರಿಚಯ ಸ್ಥರಾಗಿದ್ದು, ನನಗೆ ಸಹೋದರಿ ಸಮಾನ’ ಎಂದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಈ ಘಟನೆಗೆ ಸಾಮಾಜಿಕ ಜಾಲತಾಣ ಹಾಗೂ ಬಿಜೆಪಿಯವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ‘ವರುಣಾ ಕ್ಷೇತ್ರದಲ್ಲಿ ನಡೆದ ಘಟನೆಯ ಬಗ್ಗೆ ಪಕ್ಷದ ಕಾರ್ಯಕರ್ತೆ ಜಮಲಾರ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ನಾಯಕರು ಘಟನೆಗೆ ರಾಜಕೀಯ ಬಣ್ಣ ಬಳಿಯುವ ಮೂಲಕ ಆ ಹೆಣ್ಣು ಮಗಳನ್ನು ಅವಮಾನಿಸುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮಹಿಳೆಯರ ಮೇಲೆ ಇರುವ ಗೌರವ ಲೋಕಕ್ಕೆ ಗೊತ್ತು. ಇದರಿಂದ ನಾನು ಕಲಿಯುವುದೇನಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಕೂಡ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕರ್ತೆಗೆ ಅಗೌರವ ತೋರಿಲ್ಲ. ಆ ಮಹಿಳೆಯೇ ಸಿದ್ದರಾಮಯ್ಯ ಒಳ್ಳೆಯವರು, ನಾನು ಸಹನೆ ಕಳೆದುಕೊಂಡು ಟೇಬಲ್ ಕುಟ್ಟಿ ಮಾತನಾಡಬಾರದಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯವರಿಗೆ ಮಹಿಳೆಯರ ಮೇಲೆ ಗೌರವ ಇದ್ದರೆ, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಬಹುದಿತ್ತಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.