ಮಾಜಿ ಸಚಿವ ವಿಜಯಶಂಕರ್ ನಾಡಿದ್ದು ಕಾಂಗ್ರೆಸ್‌ಗೆ
Team Udayavani, Feb 3, 2018, 11:04 AM IST
ಮೈಸೂರು: ಮುಖ್ಯಮಂತ್ರಿಯ ತವರು ಮೈಸೂರು ಜಿಲ್ಲೆಯಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಈಗಾಗಲೇ ಬಿಜೆಪಿ ತೊರೆದಿರುವ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಅವರ ಜತೆಗೆ ಎಚ್.ಡಿ.ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ದಿ.ಎಸ್.ಚಿಕ್ಕಮಾದು ಅವರ ಕುಟುಂಬದವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಫೆ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ.
ಜ.19ರಂದು ಬೆಂಗಳೂರಿನಲ್ಲಿ ವಿಜಯಶಂಕರ್ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿ ಆಗಿತ್ತಾದರೂ ಕೊನೆ ಕ್ಷಣದಲ್ಲಿ ರದ್ದಾಗಿತ್ತು. ತಾವು ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಲ್ಲ. ಲೋಕಸಭಾ ಚುನಾವಣೆ ಯಲ್ಲಿ ಮೈಸೂರು- ಕೊಡಗು ಕ್ಷೇತ್ರದಿಂದ ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎಂದು ವಿಜಯಶಂಕರ್ ತಿಳಿಸಿದರು.
ಎಚ್.ಡಿ.ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ದಿವಂಗತ ಎಸ್.ಚಿಕ್ಕಮಾದು ಅವರ ಪುತ್ರ ಜಿಪಂ ಸದಸ್ಯ ಅನಿಲ್ ಚಿಕ್ಕಮಾದು ಅವರಿಗೆ ಟಿಕೆಟ್ ನೀಡುವಂತೆ ಜಿಲ್ಲೆಯ ಜೆಡಿಎಸ್ ಶಾಸಕರು ವರಿಷ್ಠರ ಮೇಲೆ ಒತ್ತಡ ಹೇರಿದ್ದರು.
ಈ ನಡುವೆ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಜೆಡಿಎಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆಗಳು ಬಲವಾದ ಕಾರಣದಿಂದ ಅನಿಲ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿದ್ದಾರೆ. ತಮ್ಮೊಂದಿಗೆ ಎಚ್.ಡಿ.ಕೋಟೆ ಮತ್ತು ಸರಗೂರು ಜೆಡಿಎಸ್ ಘಟಕಗಳ ಅಧ್ಯಕ್ಷರು ಸೇರಿದಂತೆ ಶೇ.75ರಷ್ಟು ಪದಾಧಿಕಾರಿಗಳು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಅನಿಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.