ನಾಲೆಗೆ ಬಿದ್ದು ನಾಲ್ವರು ಸಾವು
Team Udayavani, Aug 7, 2018, 7:10 AM IST
ಪಿರಿಯಾಪಟ್ಟಣ: ತಾಲೂಕಿನ ದೊಡ್ಡ ಕಮರವಳ್ಳಿ (ಮರಟಿ ಕೊಪ್ಪಲು)ಹಾರಂಗಿ ನಾಲೆಯ ಏರಿಯ ಮೇಲೆ ಮಾರುತಿ ವ್ಯಾನ್ ಆಯತಪ್ಪಿ ಉರುಳಿ ಒಂದೇ ಕುಟುಂಬದ ನಾಲ್ವರು ಜಲ ಸಮಾಧಿಯಾಗಿದ್ದಾರೆ.
ಪಿರಿಯಾಪಟ್ಟಣದ ಲಕ್ಷ್ಮೀಪುರದಲ್ಲಿ ವಾಸವಾಗಿದ್ದ ಪಳನಿಸ್ವಾಮಿ (40), ಪತ್ನಿ ಸಂಜು(35),ಮಗ ನಿಖೀತ್ (12), ಪುತ್ರಿ ಪೂರ್ಣಿಮಾ (14) ಮೃತರು. ಮೃತರು ಕೊಡಗು ಜಿಲ್ಲೆ ನಾಪೋಕ್ಲುನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಇವರ ಮಕ್ಕಳು
ಅಂಗವಿಕಲರಾಗಿದ್ದು ಇವರಿಗೆ ದೊಡ್ಡಕವರವಳ್ಳಿ ಅಂಚೆ ಕಚೇರಿಯಲ್ಲಿ ಸರ್ಕಾರದಿಂದ ಬರುವ ಅಂಗವಿಕಲರ ವೇತನ ಪಡೆಯಲು ಗ್ರಾಮಕ್ಕೆ ಬರುತ್ತಿದ್ದ ವೇಳೆ ಹಾರಂಗಿ ನಾಲೆಯ ಏರಿ ಮೇಲೆ ವಾಹನ ತಿರುಗಿಸಲು ಹೋಗಿ ದುರ್ಘಟನೆ ಜರುಗಿದೆ.ಸ್ಥಳದಲ್ಲಿದ್ದ ಗ್ರಾಮಸ್ಥರು ಅವರನ್ನು ರಕ್ಷಿಸಲು ಪ್ರಯತ್ನ ಪಟ್ಟರೂ ಪ್ರಯೋಜನವಾಗಿಲ್ಲ. ಬಳಿಕ, ಸ್ಥಳಕ್ಕೆ ಆಗಮಿಸಿದ ಬೆಟ್ಟದಪುರ ಪೋಲಿಸರು ಮೃತದೇಹಗಳನ್ನು ಮತ್ತು ವ್ಯಾನ್‌ಅನ್ನು ಸ್ಥಳೀಯರ ನೇರವಿನಿಂದ ಹೊರತೆಗೆದಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್ ಅವ್ಯವಸ್ಥೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.