ಕೆಲಸ ಕೊಡಿಸುವುದಾಗಿ ವಂಚನೆ: ಮೂವರ ಸೆರೆ


Team Udayavani, Jul 9, 2022, 4:20 PM IST

ಕೆಲಸ ಕೊಡಿಸುವುದಾಗಿ ವಂಚನೆ: ಮೂವರ ಸೆರೆ

ಮೈಸೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿ, 24 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌, ಕೊರೊನಾ ಸಂದರ್ಭದಲ್ಲಿ ಮೈಸೂರಿನ ವ್ಯಕ್ತಿಯೊಬ್ಬರು ಕೆಲಸ ಕಳೆದು ಕೊಂಡಿದ್ದರು. ಬಳಿಕ ಕೆಲಸಕ್ಕಾಗಿ ಗೂಗಲ್‌ನಲ್ಲಿ ಹುಡುಕಾಟ ನಡೆಸುವಾಗ ಅವರಿಗೆ ಎಮಿನೆಂಟ್‌ ಮೈಂಡ್‌ ಎಂಬ ಕಂಪನಿಯ ಮಾಹಿತಿ ತಿಳಿದು ಅರ್ಜಿ ಸಲ್ಲಿಸಿದ್ದಾರೆ. ಕಂಪನಿಯವರು ಕೆಲಸಕ್ಕೆ ನೀವು ಆಯ್ಕೆಯಾಗಿದ್ದು, ವರ್ಷಕ್ಕೆ 8 ಲಕ್ಷ ರೂ. ಪ್ಯಾಕೇಜ್‌ ನೀಡುವುದಾಗಿ ನಂಬಿಸಿ, ಹಣ ನೀಡಿದರೆ ನಿಮ್ಮ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದು 2020ರ ನ.5 ರಿಂದ 2022ರ ಏ.4ರವರೆಗೆ 48,80,300 ರೂ. ಹಣವನ್ನು ಹಲವು ಕಂತುಗಳಲ್ಲಿ ಪಡೆದುಕೊಂಡಿದ್ದರು ಎಂದು ತಿಳಿಸಿದರು.

ಇದಾದ ನಂತರ ಹಣಪಡೆದುಕೊಂಡವರು ಯಾವುದೇ ಕೆಲಸ ಕೊಡದಿದ್ದಾಗ ಅನುಮಾನಗೊಂಡ ವ್ಯಕ್ತಿ ಮೈಸೂರು ಸಿಇಎನ್‌ ಕ್ರೈ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ 7 ಮೊಬೈಲ್‌, 4 ಸ್ಮಾರ್ಟ್‌ ಫೋನ್‌, 11 ಸಿಮ್‌ ಕಾರ್ಡ್‌, 2 ಲ್ಯಾಪ್‌ ಟಾಪ್‌, 3 ಕಚೇರಿ ಸೀಲುಗಳು, 24 ಲಕ್ಷ ರೂ. ನಗದನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿ ಮೂವರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸರ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಪತ್ತೆ ಕಾರ್ಯದಲ್ಲಿ ಸೆನ್‌ ಪೊಲೀಸ್‌ ಠಾಣೆ (ಸೈಬರ್‌ ಎಕಾನಮಿಕ್‌ ಮತ್ತು ನಾರ್ಕೋಟಿಕ್ಸ್‌ ಅಪರಾಧ ಪೋಲೀಸ್‌ ಠಾಣೆ) ಇನ್ಸ್‌ಪೆಕ್ಟರ್‌ ಶಬ್ಬೀರ್‌ ಹುಸೇನ್‌, ಸಿಬ್ಬಂದಿ ಎಸ್‌. ಮಂಜುನಾಥ್‌, ರಂಗಸ್ವಾಮಿ, ಬಿ.ವಿ. ಮಂಜುನಾಥ್‌, ಮಹೇಶ್‌ ಭಾಗಿಯಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಸೆನ್‌ ಪೊಲೀಸ್‌ ಠಾಣೆ ಶಬ್ಬೀರ್‌ ಹುಸೇನ್‌ ಇತರರು ಇದ್ದರು.

ಟಾಪ್ ನ್ಯೂಸ್

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.