‘ಫ್ರೀ ಕಾಶ್ಮೀರ’: ಫಲಕ ಹಿಡಿದವರ ಪರ ವಕಾಲತ್ತು ವಹಿಸದಿರಲು ವಕೀಲರ ನಿರ್ಧಾರ
Team Udayavani, Jan 14, 2020, 2:32 PM IST
ಮೈಸೂರು: ‘ಫ್ರೀ ಕಾಶ್ಮೀರ’ ಫಲಕ ಹಿಡಿದವರ ಪರವಾಗಿ ವಕಾಲತ್ತು ವಹಿಸದಿರಲು ಮೈಸೂರು ವಕೀಲರ ಸಂಘ ತೀರ್ಮಾನಿಸಿದೆ.
ರಾಷ್ಟ್ರದ್ರೋಹ ಪ್ರಕರಣದ ಪರ ವಕಾಲತ್ತು ವಹಿಸಬಾರದು ಎಂದು ಮೈಸೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮೈಸೂರು ವಕೀಲರ ಸಂಘದ ತೀರ್ಮಾನದ ಬಗ್ಗೆ ಸುತ್ತೋಲೆ ಹೊರಡಿಸಿ ಸೂಚಿಸಲಾಗಿದೆ.
ಆರೋಪಿ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸಿದ್ದ ವಕೀಲ ಪೃಥ್ವಿಕಿರಣ್ ಶೆಟ್ಟಿ ಪ್ರಕರಣದಿಂದ ಈಗಾಗಲೇ ಹಿಂದೆ ಸರಿದಿದ್ದಾರೆ. ಇವರು ನಳಿನಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಪಡೆಯಲು ವಕಾಲತ್ತು ವಹಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ ಅವರು ಇಂದು ಕೋರ್ಟ್ಗೆ ಆಗಮಿಸಿದ್ದರು.
‘ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಚಾರವಾದ್ದರಿಂದ ‘ಫ್ರೀ ಕಾಶ್ಮೀರ’ ಪ್ಲೇಕಾರ್ಡ್ ಪ್ರದರ್ಶಿಸಿ ಆರೋಪ ಎದುರಿಸುತ್ತಿರುವವರ ಪರ ವಕಾಲತ್ತು ವಹಿಸಬಾರದು ಎಂದು ಸಂಘದಿಂದ ತೀರ್ಮಾನಿಸಲಾಗಿದೆ ಎಂದು ಮೈಸೂರು ವಕೀಲರ ಸಂಘದ ಕಾರ್ಯದರ್ಶಿ ಬಿ. ಶಿವಣ್ಣ ಪತ್ರಿಕೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.