G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Team Udayavani, May 7, 2024, 7:55 PM IST
ಮೈಸೂರು: ಸಂಸದ ಪ್ರಜ್ವಲ್ ಪ್ರಕರಣವು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿಗೆ ಗೊತ್ತಿರಲಿಲ್ಲ. ಗೊತ್ತಿದ್ದರೆ ಪ್ರಜ್ವಲ್‌ಗೆ ಲೋಕಸಭೆಗೆ ಟಿಕೆಟ್ ಕೊಡುತ್ತಿರಲಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣಕ್ಕೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.
ಮಾಜಿ ಸಚಿವ ಸಾ.ರಾ.ಮಹೇಶ್ ಮಾತನಾಡಿ, ತಪ್ಪು ಮಾಡಿರುವುದು ರಾಜ್ಯ ಸರಕಾರಕ್ಕೆ ಮೊದಲೇ ಗೊತ್ತಿದ್ದರೆ ಯಾಕೆ ಆತ ನನ್ನು ಬಂಧಿಸಲಿಲ್ಲ? ತಪ್ಪು ಮಾಡಿರುವುದು ನಿಜವೇ ಆಗಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಈಗಾಗಲೇ ಆತನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಮುಂದೆ ಏನು ಮಾಡಬೇಕೆಂದು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.