ಗಾಂಧೀಜಿ ವಿಚಾರಧಾರೆ ತಿಳಿಸುವ ಕೆಲಸವಾಗಬೇಕು
Team Udayavani, Oct 23, 2018, 11:48 AM IST
ಮೈಸೂರು: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ವಿಚಾರಧಾರೆಗಳನ್ನು ಇಂದಿನ ಸಮಾಜಕ್ಕೆ ತಿಳಿಸುವವರು ಹಾಗೂ ಅವರ ತತ್ವ-ಆದರ್ಶಗಳನ್ನು ಪಾಲಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು. ಮಾನಸಗಂಗೋತ್ರಿಯ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ರಂಗಾಯಣ ಜಂಟಿಯಾಗಿ ಹಮ್ಮಿಕೊಂಡಿರುವ ಗಾಂಧೀಜಿ ಕುರಿತ ಸಿಮೆಂಟ್ ಶಿಲ್ಪ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಾರ್ಗ ದರ್ಶನ ಅಗತ್ಯ: ಅಹಿಂಸಾತ್ಮಕ ಚಳವಳಿ, ಶಾಂತಿಯ ಸಂದೇಶದ ಮೂಲಕ ಭಾರತಕ್ಕೆ ಸ್ವಾತಂತ್ರ ದೊರಕಿಸಿಕೊಟ್ಟ ಮಹಾತ್ಮಾ ಗಾಂಧೀಜಿ ಅವರ ಕುರಿತು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕಾದ ಅಗತ್ಯವಿದೆ. ಆದರೆ, ಗಾಂಧಿ ವಿಚಾರ ತಿಳಿಯಲು ಯುವಜನರು ವಿಫಲವಾಗುತ್ತಿದ್ದಾರೆ ಎಂದು ಹೇಳಿದರು.
ತಮ್ಮ ಜೀವನದಲ್ಲಿ ತಾಯಿಯನ್ನೇ ನೋಡಲಿಕ್ಕಾಗದ ಸನ್ನಿವೇಶದಲ್ಲಿ ಬೆಳೆದ ಗಾಂಧಿಜೀಯವರು, ಇದ್ಯಾವುದನ್ನೂ ಲೆಕ್ಕಿಸದೆ ದೇಶದ ಜನತೆ ಬ್ರಿಟೀಷರ ಕಪಿಮುುಷ್ಠಿಯಿಂದ ಹೊರಬರಬೇಕು ಎಂಬ ಏಕೈಕ ಉದ್ದೇಶದಿಂದ ಬ್ರಿಟಿಷರ ವಿರುದ್ಧ ಶಾಂತಿಯುತ ಸತ್ಯಾಗ್ರಹ, ಅಹಿಂಸಾತ್ಮಕ ಚಳವಳಿ ಮಾಡಿ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟರು ಎಂದು ಬಣ್ಣಿಸಿದರು.
ಗಾಂಧೀಜಿ ಆದರ್ಶ ಮರೆಯದಿರಿ: ಗ್ರಾಮೀಣ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ಗ್ರಾಮಪಂಚಾಯತ್, ಶಿಕ್ಷಣಕ್ಕಾಗಿ ಶಾಲೆ, ರೈತರ ಆರ್ಥಿಕ ಸಹಕಾರಕ್ಕಾಗಿ ಪ್ರತಿ ಹಳ್ಳಿಗಳಲ್ಲಿಯೂ ಸಹಕಾರ ಸಂಘಗಳಿರಬೇಕೆಂದು ಕನಸು ಕಂಡವರು ಗಾಂಧೀಜಿ, ಅದರಂತೆ ಇಂದು ಪ್ರತಿ ಹಳ್ಳಿಯಲ್ಲಿಯೂ ಅವೆಲ್ಲವೂ ಇದೆ. ಹೀಗಾಗಿ ಗಾಂಧೀಜಿ ಸಂಕಲ್ಪಗಳು, ಅವರ ಆದರ್ಶಗಳನ್ನು ಎಂದಿಗೂ ಮರೆಯಬಾರದು ಎಂದರು.
ಮಹಾತ್ಮ ಗಾಂಧೀಜಿ ವಿಚಾರಧಾರೆಗಳನ್ನು ನೆನೆಯುವ ಕಾರ್ಯಕ್ರಮಗಳನ್ನು ವರ್ಷಪೂರ್ತಿ ಮಾಡಲು ನಿರ್ದೇಶಿಸಿರುವ ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರಮೋದಿ ಅವರಿಗೆ ಗಾಂಧೀಜಿಯ ಕುರಿತು ಈಗ ಜ್ಞಾನೋದಯವಾಗಿದೆ ಎಂದು ಚಾಟಿ ಬೀಸಿದರು.
ಆತ್ಮಾವಲೋಕನ ಅಗತ್ಯ: ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಣ ನೀಡುವ ಶಿಕ್ಷಕನಿಗೆ ಕಡಿಮೆ ಸಂಬಳ, ಉನ್ನತ ಶಿಕ್ಷಣದಲ್ಲಿ ಬೋಧನೆ ಮಾಡುವವರಿಗೆ ಲಕ್ಷಾಂತರ ರೂ. ಸಂಬಳ, ಪ್ರಾಥಮಿಕ ಶಾಲಾ ಶಿಕ್ಷಕರು ಮಾಡುವಷ್ಟು ಎಳ್ಳಷ್ಟು ಕೆಲಸವನ್ನೂ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ಮಾಡುವುದಿಲ್ಲ, ವಿದ್ಯಾರ್ಥಿಗಳಿಗೆ ಏನನ್ನು ಕಲಿಸುತ್ತಿದ್ದೇವೆ ಎಂದು ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ಆಯಿಷಾ ಎಂ.ಶರೀಫ್, ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ ಅಧ್ಯಕ್ಷ ಶಿಲ್ಪಿ ರು. ಕಾಳಾಚಾರ್, ಅಂತಾರಾಷ್ಟ್ರೀಯ ಕಲಾವಿದ ಕೆ.ಟಿ.ಶಿವಪ್ರಸಾದ್, ಕುಲ ಸಚಿವ ಪ್ರೊ.ಆರ್.ರಾಜಣ್ಣ, ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಟಿ.ವೀರಪ್ಪ, ಪ್ರೊ.ಬಿ.ಕೆ.ಶಿವಣ್ಣ, ಸ್ವಾತಂತ್ರ ಹೋರಾಟಗಾರರ ಸಂಘದ ಅಧ್ಯಕ್ಷ ಡಾ.ಎಂ.ಜಿ.ಕೃಷ್ಣಮೂರ್ತಿ, ಸಮಾಜ ಚಿಂತಕ ಪ.ಮಲ್ಲೇಶ್, ಗಾಂಧಿ ಭವನದ ನಿರ್ದೇಶಕ ಪ್ರೊ.ಎಂ.ಎಸ್.ಶೇಖರ್, ಡಾ.ಎಸ್.ಶಿವರಾಜಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.